ಕೈಗಾರಿಕೆಗಳು ಸ್ಥಳೀಯರಿಗೆ ಆದ್ಯತೆ ನೀಡಲಿ

ಹಾಸನದ ಕೈಗಾರಿಕೆಗಳಿಂದ 4 ಸಾವಿರ ಉದ್ಯೋಗ ನೀಡಲು ಸಮ್ಮತಿ: ಸಚಿವ ರೇವಣ್ಣ ವಿವರಣೆ

Team Udayavani, Jun 28, 2019, 8:12 AM IST

hasan-tdy-2..

ಹಾಸನ: ನಗರದ ಕೈಗಾರಿಕಾಭಿವೃದ್ಧಿ ಕೇಂದ್ರ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ಸಂತ್ರಸ್ತರ ಕುಟುಂಬದವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ನೀಡಬೇಕು ಎಂದು ಕೈಗಾರಿಕಾಭಿವೃದ್ಧಿ ಕೇಂದ್ರದಲ್ಲಿರುವ ಕೈಗಾರಿಕೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಸೂಚನೆ ನೀಡಿದರು.

ಉದ್ಯೋಗ ಮೇಳಕ್ಕೆ ಸಿದ್ಧತೆ: ನಗರದಲ್ಲಿ ಮುಂದಿನ ತಿಂಗಳು ನಡೆಸಲುದ್ದೇಶಿಸಿರುವ ಬೃಹತ್‌ ಉದ್ಯೋಗ ಮೇಳಕ್ಕೆ ಪೂರಕವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಎಲ್ಲಾ ಕೈಗಾರಿಕೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯ ಯುವ ಜನರಿಗೆ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಇನ್ನು ಮೂರು ತಿಂಗಳಲ್ಲಿ ಸುಮಾರು 4 ಸಾವಿರ ಜನರಿಗೆ ಉದ್ಯೋಗ ನೀಡುವುದಾಗಿ ಕೈಗಾರಿಕೆಗಳ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಕಂಪನಿಗಳ ಭರವಸೆ: ಕೈಗಾರಿಕಾಭಿವೃದ್ಧಿ ಕೇಂದ್ರದ ನಿರ್ಮಾಣಕ್ಕೆ ನೂರಾರು ಮಂದಿ ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಕೆಲವು ಕುಟುಂಬಗಳು ಜೀವನಕ್ಕೂ ಪರದಾಡುವ ಸ್ಥಿತಿಯಲ್ಲಿವೆ. ಅಂತಹಾ ಕುಟುಂಬ ವರ್ಗದವರಿಗೆ ಶೈಕ್ಷಣಿಕ ಅರ್ಹತೆಗೆ ಆಧಾರದಲ್ಲಿ ಲಭ್ಯವಿರುವ ಖಾಲಿ ಹುದ್ದೆಗೆ ನೇಮಕ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಹಿಮತ್‌ಸಿಂಗ್‌ ಕಂಪನಿಯ ಜವಳಿ ಘಟಕವು 1,500 ಜನರ ನೇಮಕಾತಿ ಮಾಡಿಕೊಳ್ಳುವುದಾಗಿ ವಾಗ್ಧಾನ ಮಾಡಿದ್ದು, , ಜಾಕಿ ಕಂಪನಿ 275 ಜನರಿಗೆ , ಗೋಕುಲ್ ದಾಸ್‌ – 220 ಜನರಿಗೆ, ಷಾ ಎಕ್ಸ್‌ಪೋಟ್ಸ್‌ ಸಾವಿರ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದು, ಸ್ಥಳೀಯರಿಗೇ ಉದ್ಯೋಗ ನೀಡಬೇಕೆಂದು ತಾಕೀತು ಮಾಡಲಾಗಿದೆ. ಜು. 7ರ ಒಳಗಾಗಿ ಎಲ್ಲಾ ಕೈಗಾರಿಕಾ ಘಟಕಗಳು ತಮ್ಮಲ್ಲಿ ಲಭ್ಯವಿರುವ ಹುದ್ದೆಗಳ ವಿವರ ಒದಗಿಸುವಂತೆ ಸೂಚಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ, ಕಾರ್ಮಿಕ ಅಧಿಕಾರಿ ಹಾಗೂ ಉದ್ಯೋಗ ವಿನಿಮಯ ಅಧಿಕಾರಿಗಳು ಕೈಗಾರಿಕೆಗಳಿಗೆ ಭೇಟಿ ನೀಡಿ ಯಾವ ಉದ್ದೇಶಕ್ಕೆ ಜಮೀನು ಪಡೆಯಲಾಗಿದೆ ಎಂಬುದನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವರು ನಿರ್ದೇಶನ ನೀಡಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಶಿವಶಂಕರ್‌, ಜಿಲ್ಲಾಧಿಕಾರಿ ಅಕ್ರಂಪಾಷಾ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜುಗಳ ಮೂಲಸೌಕರ್ಯಕ್ಕೆ ಸಿಎಸ್‌ಆರ್‌ ನಿಧಿ ಬಳಕೆ:

ಹಾಸನ: ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಘಟಕಗಳು ಸಿಎಸ್‌ಆರ್‌(ಕಾರ್ಪೋರೆಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ) ನಿಧಿಯನ್ನು ಜಿಲ್ಲೆಯ ಸರ್ಕಾರಿ ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಕೈಗಾರಿಕೆಗಳು ತಮ್ಮ ಲಾಭಾಂಶದ ಶೇ.2 ರಷ್ಟನ್ನು ಸಿಎಸ್‌ಆರ್‌ನಿಧಿಗೆ ನೀಡುವುದು ಕಡ್ಡಾಯ. ಆ ನಿಧಿಯಲ್ಲಿ ಈ ವರ್ಷ ಸಂಗ್ರಹವಾಗಿರುವ ಮೊತ್ತ ಎಷ್ಟು ಎಂಬುದನ್ನು ಜು.7 ರೊಳಗೆ ಮಾಹಿತಿ ಸಂಗ್ರಹಿಸಲು ಅಪರ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ. ಹಿಂದಿನ ವರ್ಷ ಬಾಕಿ ಉಳಿದಿದ್ದರೆ ಆ ಮೊತ್ತವನ್ನೂ ಸರ್ಕಾರಿ ಕಾಲೇಜುಗಳ ಪೀಠೊಪಕರಣ, ಗ್ರಂಥಾಲಯ, ಕಂಪ್ಯೂಟರ್‌ಗಳು, ಪ್ರಯೋಗಾಲಯ, ಮತ್ತಿತರ ಮೂಲ ಸೌಕರ್ಯಗಳಿಗೆ ಬಳಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಅಕ್ರಂಪಾಷಾ ಮಾತನಾಡಿ ಪ್ರತಿಯೊಂದು ಸಂಸ್ಥೆಯೂ ತಮ್ಮ ಸ್ವಯಂ ವಿವರ, ಸಾಮರ್ಥ್ಯ, ವಹಿವಾಟು, ಲಾಭಾಂಶ, ಉದ್ಯೋಗಾವಕಾಶಗಳು ಈ ಹಿಂದೆ ಮಾಡಿರುವ ಸಮುದಾಯ ಅಭಿವೃದ್ಧಿ ಚಟುವಟಿಕೆಗಳು ನೀಡಬೇಕಾಗಿರುವ ಸಿಎಸ್‌ಆರ್‌ ಅನುದಾನ ಬಾಕಿ, ಈ ವರ್ಷದ ಲಭ್ಯ ಸಿಎಸ್‌ಆರ್‌ ನಿಧಿಯ ವಿವರಗಳೊಂದಿಗೆ ಇನ್ನೊಂದು ವಾರದೊಳಗೆ ತಮಗೆ ಮಾಹಿತಿ ಸಲ್ಲಿಸುವಂತೆ ನಿರ್ದೇಶನ ನೀಡಿದರು. ಜಿಲ್ಲೆಯ ಹೆಚ್ಚು ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರೆಯುಂತಾಗಬೆಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವರ ಆಶಯವಾಗಿದ್ದು ಎಲ್ಲಾ ಕೈಗಾರಿಕೆಗಳು ಅದಕ್ಕೆ ಪೂರಕವಾಗಿ ಸ್ಪಂದಿಸಬೇಕು. ಅಗತ್ಯವಿರುವ ರಸ್ತೆ, ಕುಡಿಯುವ ನೀರು, ವಿದ್ಯುತ್‌ ಸಂಪರ್ಕದಂತಹ ಮೂಲಭೂತ ಸೌಕರ್ಯಗಳನ್ನು ಜಿಲ್ಲಾಡಳಿತದಿಂದ ಒದಗಿಸಲಾಗುವುದು ಎಂದರು.
ವಿಮಾನ ನಿಲ್ದಾಣ ನಿರ್ಮಾಣ: ಅಧಿಕಾರಿಗಳೊಂದಿಗೆ ಚರ್ಚೆ

ನಗರದ ಹೊರವಲಯದಲ್ಲಿ ನಿರ್ಮಿಸಲುದ್ದೇಶಿಸಿರುವ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಭೂಮಿಯ ಸ್ವಾಧೀನ ಪ್ರಕ್ರಿಯೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ‌ ವಿಶೇಷ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಅಕ್ರಂಪಾಷ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ಶಿವಶಂಕರ್‌, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಹಾಸನ ಉಪ ಭಾಗಾಧಿಕಾರಿ ಎಚ್.ಎಲ್. ನಾಗರಾಜ್‌ ಕೈಗಾರಿಕಾ ಇಲಾಖೆಯ ಹಾಗೂ ಕೈಗಾರಿಕಾಭಿವೃದ್ಧಿ ಮಂಡಳಿಯ ಹಲವು ಅಧಿಕಾರಿಗಳು ಈ ಸಭೆಗೆ ಪಾಲ್ಗೊಂಡಿದ್ದರು. ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗೆ ಈಗಾಗಲೇ ಲಭ್ಯವಿರುವ ಹಾಗೂ ಬೇಕಾಗಿರುವ ಜಮೀನು ಒದಗಿಸುವ ಕುರಿತಂತೆ ಚರ್ಚೆ ನಡೆಯಿತು. ಹಿಂದೇಯೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡರೂ ಇನ್ನು ಪರಿಹಾರ ಮೊತ್ತ ಪಡೆದುಕೊಂಡಿರದ ಭೂಮಾಲಿಕರಿಗೆ ಹಣವನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಿ ಪತ್ರ ರವಾನಿಸುವಂತೆ ಕೆಐಡಿಬಿಯ ವಿಶೇಷ ಭೂಸ್ವಾಧೀನಾಧಿಕಾರಿಯವರಿಗೆ ಸಚಿವ ರೇವಣ್ಣ ಸೂಚನೆ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.