ಸರ್ಕಾರಿ ನೌಕರರ ಸ್ಥಾನಮಾನಕ್ಕೆ ಆಗ್ರಹಿಸಿ ಪತ್ರ ಚಳವಳಿ

Team Udayavani, Jun 23, 2019, 3:00 AM IST

sarkari-now

ಹಾಸನ: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕೆಂದು ಆಗ್ರಹಿಸಿ ಶನಿವಾರ ಬೆಳಿಗ್ಗೆ ನಿಗಮದ ಹಾಸನ ಡಿಪೋದ ಮುಂದೆ ಚಾಲಕರು, ನಿರ್ವಾಹಕರು, ಮತ್ತು ಸಿಬ್ಬಂದಿ ಶನಿವಾರ ಬೆಳಿಗ್ಗೆ ಪ್ರದರ್ಶನ ನಡೆಸಿ ಮುಖ್ಯಮಂತ್ರಿಯವರಿಗೆ ಪತ್ರ ಚಳವಳಿ ಆರಂಭಿಸಿದರು.

ಮುಖ್ಯಮಂತ್ರಿ, ರಾಜ್ಯಪಾಲರಿಗೆ ರವಾನೆ: ಕೆಎಸ್‌ಆರ್‌ಟಿಸಿ ಹಾಸನದ ಒಂದನೇ ಡಿಪೋದ ನೌಕರರು, ಚಾಲಕ, ನಿರ್ವಾಹಕರು ಪತ್ರವನ್ನು ಕೈಯಲ್ಲಿಡಿದು ಮುಖ್ಯಮಂತ್ರಿಗಳಿಗೆ ಮತ್ತು ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಪಾಲರಿಗೆ ಪತ್ರ ರವಾನೆ ಮಾಡುವುದಾಗಿ ಹೇಳಿದರು.

ವೇತನ ತಾರತಮ್ಯ ನಿವಾರಿಸಿ: ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಕೆಎಸ್‌ಆರ್‌ಟಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ 6ನೇ ವೇತನ ಆಯೋಗದ ತಾರತಮ್ಯ ನಿವಾರಣೆಯೊಂದಿಗೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ಎಲ್ಲ ಸೌಲಭ್ಯವನ್ನು ರಸ್ತೆ ಸಾರಿಗೆ ನಿಗಮದ ನೌಕರರಿಗೂ ನೀಡಬೇಕು ಎಂದು ಆಗ್ರಹಪಡಿಸಿದರು.

ಸೇವಾ ಭದ್ರತೆ ನೀಡಿ: ಸರ್ಕಾರದ ಅಂಗ ಸಂಸ್ಥೆಯಾದ ಕೆಎಸ್‌ಆರ್‌ಟಿಸಿ ನೌಕರರನ್ನು ರಾಜ್ಯ ಸರ್ಕಾರದ ಇತರೆ ನೌಕರರಂತೆ ಕಾಣುತ್ತಿಲ್ಲ. ಜೊತೆಗೆ ವೇತನ, ಪಿಂಚಣಿ, ಭತ್ಯೆ ಹಾಗೂ ರಜೆ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ.ಸೇವಾ ಭದ್ರತೆಯನ್ನು ನೀಡಿಲ್ಲ. ಹಾಗಾಗಿ ಸಾರಿಗೆ ಸಂಸ್ಥೆಯ ರಾಜ್ಯದ 4 ನಿಗಮಗಳ ನೌಕರರೂ ಪತ್ರ ಚಳವಳಿ ಆರಂಭಿಸಿದ್ದು, ನಮ್ಮ ಬೇಡಿಕೆಯನ್ನ ಈಡೇರಿಸದಿದ್ದು, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಮುಂದಿನ ದಿನದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

ಬೇಡಿಕೆಗೆ ಸ್ಪಂದಿಸದ ಸರ್ಕಾರ: ನೌಕರರ ಮುಖಂಡ ಫಾಲಾಕ್ಷ ಮಾತನಾ, ದೇಶದ ಇತರೆ ರಾಜ್ಯಗಳ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಶೇ.30ರಷ್ಟು ಕಡಿಮೆಯಿದೆ. ಈ ಬಗ್ಗೆ ಕಳೆದ ಒಂದೂವರೆ ದಶಕದಿಂದ ಸರ್ಕಾರದ ಮುಂದೆ ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದರೂ ಸ್ಪಂದಿಸಿಲ್ಲ ಎಂದು ಸಮಾಧಾನ ವ್ಯಕ್ತಪಡಿಸಿದರು.

ಕೆಎಸ್‌ಆರ್‌ಟಿಸಿ ನೌಕರರಾದ ಮಲ್ಲಿಕಾರ್ಜುನ್‌, ದೇವರಾಜು, ಧರ್ಮ, ಚಂದ್ರಶೇಖರ್‌, ಗಿರೀಶ್‌, ಸತೀಶ್‌, ಯೋಗಾರಾಜು, ಆನಂದ್‌, ಭಾಗ್ಯಮ್ಮ, ಮತ್ತಿತರರು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.