ಲೋಕಸಭಾ ಚುನಾವಣೆ: ಮತ ಎಣಿಕೆಗೆ ಸಿದ್ಧತೆ

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತ ಎಣಿಕೆಗೆ 14 ಟೇಬಲ್‌ ವ್ಯವಸ್ಥೆ ,18 ರಿಂದ 23 ಸುತ್ತುಗಳಲ್ಲಿ ಮತ ಎಣಿಕೆ: ಡೀಸಿ

Team Udayavani, May 19, 2019, 2:44 PM IST

hasan-tdy-1.

ಹಾಸನ ಲೋಕಸಭಾ ಕ್ಷೇತ್ರದ ಮತಗಳ ಎಣಿಕೆ ಸಿದ್ಧತೆಯ ಬಗ್ಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಜಿಲ್ಲಾ ರಕ್ಷಣಾಧಿಕಾರಿ ಚೇತನ್‌ಸಿಂಗ್‌ ರಾಥೋಡ್‌ ಅವರೂ ಉಪಸ್ಥಿತರಿದ್ದರು.

ಹಾಸನ: ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಾಸನ ಲೋಕಸಭಾ ಕ್ಷೇತ್ರಗಳ ಮತಗಳ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮೇ 23 ರಂದು ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹೇಳಿದರು.

ಮತಗಳ ಎಣಿಕೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಜಿಲ್ಲಾ ಚುನಾವಣಾಧಿಕಾರಿಯೂ ಆದ ಅವರು, ಪ್ರತಿ ವಿಧಾನಸಭಾ ಕ್ಷೇತದ ಮತಗಳ ಎಣಿಕೆ ಒಂದೊಂದು ಕೊಠಡಿಯಲ್ಲಿ ನಡೆಯಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆಗೆ 14 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು 112 ಟೇಬಲ್ಗಳಲ್ಲಿ ನಡೆಯಲಿದೆ.

ಅಂಚೆ ಮತಪತ್ರಗಳು ಹಾಗೂ ಸೇವಾ ಮತದಾರರ ಮತಗಳ ಎಣಿಕೆಗೆ 10 ಟೇಬಲ್ಗಳ ವ್ಯವಸ್ಥೆ ಮಾಡ ಲಾಗಿದೆ. ಪ್ರತಿ ಎಣಿಕಾ ಟೇಬಲ್ನಲ್ಲೂ 3 ಮಂದಿ ಸಿಬ್ಬಂದಿ ಎಣಿಕೆ ಕಾರ್ಯನಿರ್ವಹಿಸಲಿದ್ದು, ಒಟ್ಟು 408 ಸಿಬ್ಬಂದಿ ಎಣಿಕೆ ಕಾರ್ಯನಿರ್ವಹಿಸುವರು ಎಂದರು.

18ರಿಂದ 23 ಸುತ್ತುಗಳಲ್ಲಿ ಮತ ಎಣಿಕೆ: ಅಯಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳನ್ನಾಧರಿಸಿ ಮತಗಳ ಎಣಿಕೆ 18ರಿಂದ 23 ಸುತ್ತುಗಳಲ್ಲಿ ಮುಗಿ ಯಲಿದೆ. ಕಡೂರು ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ 18 ಸುತ್ತುಗಳಲ್ಲಿ ಪೂರ್ಣಗೊಂಡರೆ ಅತಿ ಹೆಚ್ಚು ಮತಗಟ್ಟೆಗಳಿರುವ ಹೊಳೆನರಸೀಪುರ ಕ್ಷೇತ್ರದ ಮತ ಗಳ ಎಣಿಕೆ 23 ಸುತ್ತುಗಳಲ್ಲಿ ಮುಗಿಯಲಿದೆ. ಎಲೆಕ್ಟ್ರಾನಿಕ್‌ ಮತ ಯಂತ್ರಗಳಲ್ಲಿ ದಾಖಲಾದ ಮತಗಳ ಎಣಿಕೆಯ ನಂತರ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲೂ 5 ಮತಗಟ್ಟೆಗಳಲ್ಲಿನ ವಿ.ವಿ.ಪ್ಯಾಟ್‌ನ ಮತ ಚೀಟಿಗಳನ್ನು ಎಣಿಕೆ ಆರಂಭವಾಗಲಿದೆ. ವಿ.ವಿ.ಪ್ಯಾಟ್‌ಗಳ ಎಣಿಕೆಗೆ ಲಾಟರಿ ಮೂಲಕ ಮತಗಟ್ಟೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿ ಪ್ಯಾಟ್‌ನ ಚೀಟಿ ಗಳ ಎಣಿಕೆ ಮಾಡಿದ ನಂತರ ಚುನಾವಣಾ ಫ‌ಲಿ ತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ವಿವರ ನೀಡಿದರು.

ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿ ಗಳಿಗೆ ಪ್ರವೇಶ: ಮತ ಎಣಿಕೆ ಕೇಂದ್ರಕ್ಕೆ ಮತಗಳ ಎಣಿಕೆ ಸಿಬ್ಬಂದಿ, ಅಯಾ ಅಭ್ಯರ್ಥಿಗಳಿಂದ ಸೂಚಿ ಸಿದ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿ ಗಳಿಗೆ ಮಾತ್ರ ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಅನು ಮತಿ ನೀಡಿದ್ದು, ಇವರೆಲ್ಲರಿಗೂ ಗುರುತಿನ ಚೀಟಿ ನೀಡಲಾಗಿದೆ. ಗುರ್ತಿನ ಚೀಟಿ ಹೊಂದಿದವರು ಮಾತ್ರ ಎಣಿಕೆ ಕೇಂದ್ರ ಪ್ರವೇಶಿಸಲು ಅವಕಾಶ ಇರುತ್ತದೆ ಎಂದು ಹೇಳಿದರು.

ಒಣ ದಿನ ಘೋಷಣೆ: ಮತಗಳ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮೇ 22ರ ಮಧ್ಯರಾತ್ರಿ 12 ಗಂಟೆಯಿಂದ ಮೇ 24ರ ಮುಂಜಾನೆವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.