ಅತಿವೃಷ್ಟಿ ಹಾನಿ ಬಗ್ಗೆ ವರದಿ ಪಡೆದ ಶಾಸಕ ಕೆಎಂಶಿ


Team Udayavani, Sep 11, 2022, 5:19 PM IST

ಅತಿವೃಷ್ಟಿ ಹಾನಿ ಬಗ್ಗೆ ವರದಿ ಪಡೆದ ಶಾಸಕ ಕೆಎಂಶಿ

ಅರಸೀಕೆರೆ: ರಾಜ್ಯದೆಲ್ಲೆಡೆ ಇತ್ತೀಚಿಗೆ ಸುರಿದ ಅತಿವೃಷ್ಟಿ ಮಳೆಯಿಂದಾಗಿ ತಾಲೂಕಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಸಮಗ್ರ ಮಾಹಿತಿ ನೀಡಿದರೇ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಮಂಜೂರು ಮಾಡಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ ಎಂ ಶಿವಲಿಂಗೇಗೌಡ ತಿಳಿಸಿದರು.

ನಗರದ ಶಾಸಕರ ಕಚೇರಿಯಲ್ಲಿ ಏರ್ಪಡಿಸಿದ್ದ ಪ್ರಕೃತಿ ವಿಕೋಪದಿಂದ ಉಂಟಾಗಿರುವ ಹಾನಿಯ ಬಗ್ಗೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಟಾಸ್ಕ್ ಪೊರ್ಸ್‌ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಅತಿವೃಷ್ಟಿ ಹಾನಿಗೆ ಪರಿಹಾರ ಕಲ್ಪಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ನೀವು ನೀಡುವ ವರದಿ ಆಧಾರಿಸಿ ಅನುದಾನ ಬಿಡುಗಡೆ ಮಾಡಿಸಲು ಪ್ರಾಮಾಣಿಕ ಪ್ರಯತ್ನಿಸುವೆ ಎಂದು ಹೇಳಿದರು.

ಹಾನಿ ಅಂಕಿಅಂಶ: ಸಭೆಯಲ್ಲಿ ಗ್ರೇಡ್‌ 2 ತಹಸೀಲ್ದಾರ್‌ ಪಾಲಾಕ್ಷ ಮಾತನಾಡಿ, ಇತ್ತೀಚಿನ ಅತಿವೃಷ್ಟಿ ಮಳೆಯಿಂದ ತಾಲೂಕಿನಲ್ಲಿ ಒಟ್ಟು 271 ಮನೆಗಳು ಹಾನಿಯಾಗಿದ್ದು 1.54.36535 ರೂ ಗಳ ಪರಿಹಾರವನ್ನು ಫ‌ಲಾನುಭವಿಗೆ ನೀಡಲಾಗಿದೆ ಎಂದರು.

ಸಮಗ್ರ ವರದಿ ನೀಡಲಾಗುವುದು: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್‌ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ 9.500 ಹೆಕ್ಟರ್‌ ಜಮೀನಿನಲ್ಲಿ ರಾಗಿ ಬೆಳೆಯಲಾಗಿದ್ದು. ಬೆಳಗ್ಗೆ ವಿಮಾ ಪಾಲಿಸಿ ಮಾಡಿಸಲಾಗಿದೆ ಇನ್ನುಳಿದ ಬೆಳೆಗಳು ಸಂಪೂರ್ಣ ನಾಶವಾಗಿದ್ದು ಈ ಬಗ್ಗೆ ಅಂಕಿ ಅಂಶಗಳ ಸಮೇತ ಸಮಗ್ರ ವರದಿ ನೀಡುವುದಾಗಿ ತಿಳಿಸಿದರು.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸತೀಶ್‌ ಮಾತನಾಡಿ, 683 ಹೆಕ್ಟರ್‌ ಜಮೀನಿನಲ್ಲಿ ಬೆಳೆದ ಆಲೂಗೆಡ್ಡೆ 152 ಹೆಕ್ಟೇರ್‌ ಟೊಮೊಟೊ ಹಾಗೂ 100 ಹೆಕ್ಟೇರ್‌ ಬಾಳೆಗಿಡಗಳು ಸಂಪೂರ್ಣ ನಾಶವಾಗಿದೆ. ತೆಂಗಿನ ಮರಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

ದುರಸ್ತಿಗೆ ಅಂದಾಜು ವೆಚ್ಚ: ಸಣ್ಣ ನೀರಾವರಿ ಇಲಾಖೆ ಅಭಿಯಂತರರಾದ ಸುಂದರ ರಾಜು ತಮ್ಮ ಇಲಾಖೆ ವ್ಯಾಪ್ತಿಯ 35 ಕೆರೆಗಳ ಪೈಕಿ 28 ಕೆರೆಗಳು ಭರ್ತಿಯಾಗಿದ್ದು ಕೆರೆಗಳ ದುರಸ್ತಿ ಕಾರ್ಯಕ್ಕೆ ತಲಾ 5 ಲಕ್ಷ ರೂ ಅಂದಾಜು ವೆಚ್ಚ ಬೇಕಾಗುತ್ತದೆ ಎಂದರು.

ಜಿಪಂ ವ್ಯಾಪ್ತಿಯ 126 ಕೆರೆಗಳ ಪೈಕಿ 19 ಕೆರೆಗಳು ಭರ್ತಿಯಾಗಿದ್ದು ದುರಸ್ತಿ ಕಾರ್ಯಕ್ಕೆ 290 ಲಕ್ಷ ರೂ ಬೇಕಾಗುತ್ತದೆ. 110 ಕಿ. ಮಿ ರಸ್ತೆ ಹಾಳಾಗಿದ್ದು ರಸ್ತೆ ರೀಪೇರಿಗಾಗಿ 5 ಕೋಟಿ ಹಣ ಬೇಕಾಗಿದೆ ಎಂದು ಜಿಪಂ ಎಂಜೀನಿಯರ್‌ ವಿಭಾಗದ ಅಭಿಯಂತರರಾದ ಬಸವರಾಜು ಮಾಹಿತಿ ನೀಡಿದರು.

ಬಿಇಒ ಮೋಹನ್‌ ಕುಮಾರ್‌ ಮಾಹಿತಿ ನೀಡಿ, ತಾಲೂಕಿನಲ್ಲಿ 119 ಶಾಲಾ ಕೊಠಡಿಗಳು ಸಂಪೂರ್ಣ ಹಾಳಾಗಿವೆ. 168 ಶಾಲಾ ಕೊಠಡಿಗಳನ್ನು ದುರಸ್ತಿ ಮಾಡಿಸಬೇಕಾಗಿದೆ ಒಟ್ಟು 23.50 ಕೋಟಿ ಅನುದಾನ ಬೇಕಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಂಕರಮೂರ್ತಿ ಮಾಹಿತಿ ನೀಡಿ 36 ಅಂಗನವಾಡಿ ಕಟ್ಟಡಗಳು ಶಿಥಿಲಾ ವಸ್ಥೆಯಲ್ಲಿದೆ. 67 ಕಟ್ಟಡಗಳನ್ನು ರಿಪೇರಿ ಮಾಡಿಸ ಬೇಕಾಗಿದೆ 7.31 ಕೋಟಿ ಅನುದಾನ ಬೇಕಾಗಿದೆ ಎಂದು ತಿಳಿಸಿದರು.

ಪಶುವೈದ್ಯ ಆಸ್ಪತ್ರೆ 8 ಕಟ್ಟಡ ಗಳು ಶಿಥಿಲಗೊಂಡಿದ್ದು ದುರಸ್ತಿ ಕಾರ್ಯ ಮಾಡಬೇಕಾಗಿದೆ ಎಂದು ಪಶು ವೈದ್ಯ ಇಲಾಖೆ ಡಾ. ಮಂಜುನಾಥ್‌ ಮಾಹಿತಿ ನೀಡಿದರು. ಸಭೆ ಯಲ್ಲಿ ಗ್ರೇಡ್‌-2 ತಹಶೀಲ್ದಾರ್‌ ಪಾಲಾಕ್ಷ ಶಿರಸ್ತೇ ದಾರ್‌ ತಾಪಂ ಇಒ ನಾಗರಾಜು, ಶಿವಶಂಕರ್‌, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.