100ಕ್ಕೂ ಹೆಚ್ಚು ಶಾಲಾ ಕೊಠಡಿಗಳು ಶಿಥಿಲ

ಸಿಎಂ ಕುಮಾರಣ್ಣ ನಮ್ಮೂರ ಶಾಲೆಯಲ್ಲಿ ಒಂದು ದಿವಸ ವಾಸ್ತವ್ಯ ಮಾಡಿ ಸಮಸ್ಯೆ ಅರಿಯಿರಿ: ಪೋಷಕರ ಆಗ್ರಹ

Team Udayavani, Jul 5, 2019, 10:53 AM IST

hasan-tdy-2..

ಚನ್ನರಾಯಪಟ್ಟಣ ತಾಲೂಕು ಶ್ರವಣಬೆಳಗೊಳ ಹೋಬಳಿ ಕಮರವಳ್ಳಿ ಗ್ರಾಮ ಪ್ರಾಥಮಿಕ ಶಾಲೆ ಗೋಡೆ ಬಿರುಕು ಬಿಟ್ಟಿರುವುದು.

ಚನ್ನರಾಯಪಟ್ಟಣ: ತಾಲೂಕಿನಲ್ಲಿ 41 ಸರ್ಕಾರಿ ಪ್ರೌಢಶಾಲೆ ಸೇರಿದಂತೆ 366 ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳಿದ್ದು ನೂರು ಶಾಲಾ ಕೊಠಡಿ ಸಂಪೂರ್ಣ ಹಾಲಾಗಿದ್ದು ಜರೂರಾಗಿ ದುರಸ್ತಿ ಮಾಡಬೇಕಿದೆ. 16 ಶಾಲೆಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿವೆ. 172 ಶಾಲಾ ಕೊಠಡಿಗಳ ದುರಸ್ತಿ ಅಗತ್ಯವಿದೆ.

ಜಿಲ್ಲಾಡಳಿತಕ್ಕೆ ಶಿಥಿಲ ಶಾಲೆಗಳ ಪಟ್ಟಿ: ಸ್ವಾತಂತ್ರ್ಯ ಪೂರ್ವದ ಕೆಲ ಹಾಗೂ 50-60 ವರ್ಷದ ಹಳೆಯ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ದುರಸ್ತಿಯಲ್ಲಿರುವ ಹಾಗೂ ಶಿಥಿಲಾವಸ್ಥೆಯ ಕಟ್ಟಡಗಳನ್ನು ಕ್ಷೇತ್ರ ಶಿಕ್ಷಣ ಇಲಾಖೆ ಪಟ್ಟಿಮಾಡಿ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತಕ್ಕೆ ನೀಡಿದೆ. ಜಿಲ್ಲೆಯಲ್ಲಿ ಲೋಕೋಪಯೋಗಿ ಸಚಿವರು ಇರುವುದರಿಂದ ನೂತನ ಕೊಠಡಿಗಳು ನಿರ್ಮಾಣ ಆಗುವ ಆಶಾದಾಯಕದಲ್ಲಿ ಶಿಕ್ಷಕರು ಗ್ರಾಮಸ್ಥರು ಕಳೆದ ಒಂದು ವರ್ಷದಿಂದ ದಿನ ಕಳೆಯುತ್ತಿದ್ದರು ಯಾವುದೇ ಪ್ರಯೋಜನವಾಗಿಲ್ಲ.

ಹೋಬಳಿವಾರು ವಿವಿರ: ಬಾಗೂರು ಹೋಬಳಿಯಲ್ಲಿ 31 ಗ್ರಾಮದ ಸರ್ಕಾರಿ ಶಾಲೆಗಳನ್ನು ದುರಸ್ತಿ ಮಾಡ‌ಬೇಕಿದೆ. 4 ಗ್ರಾಮದ ಶಾಲೆಗಳ ಸಂಪೂರ್ಣ ಶಿಥಿಲಗೊಂಡಿವೆ. ಹಿರೀಸಾವೆ ಹೋಬಳಿಯ 29 ಶಾಲೆಗಳ ದುರಸ್ತಿ ಆಗಬೇಕಿದ್ದು 4 ಶಾಲೆಗಳ ಶಿಥಿಲವಾಗಿವೆ. ನುಗ್ಗೇಹಳ್ಳಿ ಹೋಬಳಿಯಲ್ಲಿ 27 ದುರಸ್ತಿ ಮಾಡಬೇಕಿದ್ದು ಒಂದು ಶಾಲೆ ಶಿಥಿಲಗೊಂಡಿದೆ. ದಂಡಿಗನಹಳ್ಳಿ ಹೋಬಳಿಯಲ್ಲಿ 32 ದುರಸ್ತಿ ಮಾಡಬೇಕಿದ್ದು 2 ಶಿಥಿಲವಾಗಿದೆ. ಕಸಬಾ ಹೋಬಳಿಯಲ್ಲಿ 23 ದುರಸ್ತಿ 2 ಶಿಥಿಲ, ಶ್ರವಣಬೆಳಗೊಳ ಹೋಬಳಿಯ 30 ಗ್ರಾಮದ ಸರ್ಕಾರಿ ಶಾಲೆಗಳ ದುರುಸ್ಥಿಯಾಗಬೇಕಿದ್ದು 3 ಶಾಲೆ ಶಿಥಿಲವಾಗಿವೆ.

ಸೋರುವ ಶಾಲೆಗಳು: 172 ಶಾಲಾ ಕೊಠಡಿಗಳಲ್ಲಿ ಕೆಲವು ಮಳೆಯಿಂದ ಸೋರುತ್ತಿದ್ದರೆ ಹಲವು ಕೊಠಡಿಗಳಿಗೆ ಬಣ್ಣ ಹಚ್ಚಬೇಕಿದೆ. ಹತ್ತಾರು ಶಾಲೆಗಳಿಗೆ ತಡೆಗೋಡೆ ಇಲ್ಲದಿರುವುದರಿಂದ ಗ್ರಾಮದ ರಾಸುಗಳು ಶಾಲಾ ಆವರಣ ಪ್ರವೇಶ ಮಾಡುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸಣ್ಣ ಪುಟ್ಟ ತೊಂದರೆಗಳನ್ನು ಶೀಘ್ರವಾಗಿ ನಿವಾರಣೆ ಮಾಡಲು ತಾಲೂಕು ಆಡಳಿತ ಮುಂದಾಗಬೇಕು.

ಕೊಠಡಿಯಿಲ್ಲದೇ ಬೇರೆಡೆ ಪಾಠ: 16 ಶಾಲಾ ಕೊಠಡಿಗಳು ಸಂಪೂರ್ಣ ಶಿಥಿಲವಾಗಿದ್ದು, ಅಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿವೆ. ಆದ್ದರಿಂದ ಗ್ರಾಮದಲ್ಲಿನ ಸಮುದಾಯ ಭವನ, ಸ್ಥಗಿತವಾಗಿರುವ ಅಂಗನವಾಡಿ ಕೇಂದ್ರ, ದೇವಾಲಯ ಇಲ್ಲವೇ ಗ್ರಾಮದಲ್ಲಿ ಯಾವ ಮನೆ ಕಾಲಿ ಇದೆ ಅಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ. ಗ್ರಾಮದಲ್ಲಿನ ಸಾರ್ವಜನಿಕ ಕಟ್ಟಡಲ್ಲಿ ಶಾಲೆ ನಡೆಯುತ್ತಿವೆ. ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿಯೂ ಶಾಲೆ ನಡೆಯುತ್ತಿದ್ದು, ಹಾಲಿನ ವಾಸನೆಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುವಂತಾಗಿದೆ.

ನಮ್ಮ ಶಾಲೆಗೆ ಬನ್ನಿ ಸಿಎಂ: ರಾಜ್ಯದ ಮುಖ್ಯ ಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ಶಾಲೆಗಳಲ್ಲಿ ವಾಸ್ತವ್ಯ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಹಾಸನ ಜಿಲ್ಲೆ ಹೇಳಿ ಕೇಳಿ ಕುಮಾರಣ್ಣನ ತವರು ಜಿಲ್ಲೆ, ರಾಜಕೀಯವಾಗಿ ಜನ್ಮ ಪಡೆಯದೆ ಇದ್ದರು, ಇದೇ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಅವರು ಬಾಲ್ಯವನ್ನು ಕಳೆದಿದ್ದಾರೆ. ಬಾಲ್ಯದ ನೆನಪಿಗಾದರೂ ಹಾಸನ ಜಿಲ್ಲೆ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡುವ ಮೂಲಕ ಜಿಲ್ಲೆ ಹಾಗೂ ತಾಲೂಕಿನಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲಾ ಕಟ್ಟಡ ದುರಸ್ತಿಗೆ ಮುಂದಾಗಬೇಕು ಎಂದು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉದ‌ಯವಾಣಿ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.

ಸಚಿವರೇ ಇತ್ತ ಕಣ್ಣುಹಾಯಿಸಿ: ರಾಜ್ಯದ ಸೂಪರ್‌ ಸಿಎಂ ಎಂಬ ಖ್ಯಾತಿ ಪಡೆದಿರುವ ಜಿಲ್ಲಾ ಮಂತ್ರಿ ಎಚ್. ಡಿ.ರೇವಣ್ಣ ಮೈತ್ರಿ ಸರ್ಕಾರದಲ್ಲಿ ಪ್ರಭಾವಿ ಖಾತೆ ಯಾಗಿರುವ ಲೋಕೋಪಯೋಗಿ ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಹೊಸ ಯೋಜನೆಗೆ ಒತ್ತು ನೀಡುವ ಇವರು ಸರ್ಕಾರಿ ಶಾಲೆ ಕಡೆ ಕಣ್ಣು ಹಾಯಿಸಿದರೆ ಶಿಥಿಲಶಾಲಾ ತೆರವು ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬಹುದು.

● ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.