Udayavni Special

ಹಾಸನ ಜಿಪಂಗೆ ರಾಷ್ಟ್ರೀಯ ಪ್ರಶಸ್ತಿ ಗರಿ

Team Udayavani, Apr 25, 2021, 4:17 PM IST

ಹಾಸನ ಜಿಪಂಗೆ ರಾಷ್ಟ್ರೀಯ ಪ್ರಶಸ್ತಿ ಗರಿ

ಹಾಸನ: ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದ ಹಾಸನ ಜಿಪಂಗೆ ಶನಿವಾರ ಅಸ್ಮರಣೀಯ ದಿನ. ರಾಜ್ಯದಲ್ಲಿ ಉತ್ತಮ ಸಾಧನೆಗಾಗಿ ಈ ವರ್ಷ ರಾಷ್ಟ್ರೀಯ ಪ್ರಶಸ್ತಿಯನ್ನು ಶನಿವಾರ ಪ್ರದಾನ ಮಾಡಲಾಯಿತು.

ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನದ ಅಂಗವಾಗಿ ನವ ದೆಹಲಿಯಲ್ಲಿ ನಡೆಯಬೇಕಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೊರೊನಾ ಹಿನ್ನೆಲೆಯಲ್ಲಿ ವರ್ಚುವಲ್‌ ವೇದಿಕೆ ಮುಖಾಂತರ ನಡೆಸಲಾಯಿತು.ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿಸಚಿವ ನರೇಂದ್ರ ಸಿಂಗ್‌ ತೋಮರ್‌, ರಾಜ್ಯದ ಮುಖ್ಯಮಂತ್ರಿ ಬಿ. ಎಸ್‌ಯಡಿಯೂರಪ್ಪ ಹಾಗೂವಿವಿಧ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಸಶಕ್ತೀಕರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ದೆಹಲಿಯಲ್ಲಿ ಕಾರ್ಯಕ್ರಮವನ್ನು ಪ್ರಧಾನಿನರೇಂದ್ರ ಮೋದಿ ಅವರು ಉದ್ಘಾಟಿಸಿ ಪ್ರಶಸ್ತಿ ವಿಜೇತ ಜಿಪಂ ,ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅದರ ಅಧಿಕಾರಿಗಳಿಗೆ ಶುಭ ಕೋರಿದರು.

ಬಳಿಕ ಮಾತನಾಡಿ, ದೇಶದ ಶಕ್ತಿ ಗ್ರಾಮಗಳಲ್ಲಿದ್ದು ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಸಂಪೂರ್ಣ ಪ್ರಗತಿ ಸಾಧ್ಯ. ಹಳ್ಳಿಗಳು ಮತ್ತುಬಡವರ ಉದ್ದಾರ ಸರ್ಕಾರದ ಆದ್ಯತೆ. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿಗೆ ಅನೇಕ ಯೋಜನೆಗಳನ್ನುರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ ಅವುಗಳನ್ನುಸಕಾಲದಲ್ಲಿ ಅರ್ಹರಿಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರು ಗ್ರಾಪಂ ಸಶಕ್ತೀಕರಣ ಯೋಜನೆಯ ಉದ್ದೇಶ , ಆಶಯ, ಆಯ್ಕೆ ಸ್ವರೂಪ ,ಪ್ರಶಸ್ತಿ ಪಡೆವ ಸಂಸ್ಥೆಗಳ ಜವಾಬ್ದಾರಿಗಳನ್ನು ವಿವರಿಸಿ ಎಲ್ಲಾ ಪ್ರಶಸ್ತಿ ಪುರಸ್ಕ ೃತ ಜಿಪಂ ಹಾಗೂ ಗ್ರಾಮೀಣಸ್ಥಳೀಯ ಸಂಸ್ಥೆಗಳ ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಅಭಿನಂದಿಸಿದರು.

ದೆಹಲಿಯಲ್ಲಿ ಸಾಂಕೇತಿಕವಾಗಿ ಪ್ರಶಸ್ತಿ ವಿತರಣೆ ಮಾಡಲಾಗಿದ್ದು, ಪ್ರಶಸ್ತಿ ಮೊತ್ತವನ್ನು ಆಯಾಯಜಿಪಂಗಳಿಗೆ ಆನ್‌ಲೈನ್‌ ಮೂಲಕ ವರ್ಗಾವಣೆಮಾಡಲಾಗಿದೆ ಎಂದರು. ದೆಹಲಿಯಲ್ಲಿ ಕಾರ್ಯಕ್ರಮ ನಡೆದರೆ ಇತ್ತ ಹಾಸನ ಜಿಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ಜಿಪಂ ಸಿಇಒ ಬಿ.ಎ. ಪರಮೇಶ್‌ ಅವರಿಗೆ ಪ್ರಶಸ್ತಿ ಫ‌ಲಕವನ್ನು ಹಸ್ತಾಂತರ ಮಾಡಿ ಅಭಿನಂದಿಸಿದರು.

ಇದೊಂದು ಹೆಮ್ಮೆಯ ಸಾಧನೆ.ಜಿಲ್ಲೆಗೆ ಸಂದಗೌರವ ಇದಕ್ಕೆ ಕಾರಣರಾದ ಜನಪ್ರತಿನಿಧಿಗಳುಹಾಗೂ ಜಿಪಂ ಸಿಇಒ ಇತರ ಜಿಲ್ಲಾ ಹಾಗೂತಾಲೂಕು ಮತ್ತು ಗ್ರಾಪಂ ಮಟ್ಟದ ಅಧಿಕಾರಿಗಳನ್ನುತಾವು ಅಭಿನಂದಿಸುವುದಾಗಿ ಆರ್‌.ಗಿರೀಶ್‌ ಹೇಳಿದರು.

ಜಿಪಂ ಸಿಇಒ ಪರಮೇಶ್‌ ಅವರು ಸಹ ಪ್ರಶಸ್ತಿಬಂದ ಬಗ್ಗೆ ಸಂತಸ ವ್ಯಕ್ತಪಡಿಸಿ, ಈ ಸಾಧನೆಗೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ಶಾಸಕರು, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಸಮರ್ಪಿಸುವುದಾಗಿತಿಳಿಸಿದರು.

ಉಪ ಕಾರ್ಯದರ್ಶಿಗಳಾದ ಚಂದ್ರ ಶೇಖರ್‌, ಮಹೇಶ್‌, ಮುಖ್ಯ ಯೋಜನಾಧಿಕಾರಿ ನಾಗರಾಜ್‌, ಯೋಜನಾ ನಿರ್ದೇಶಕರಾದ ವಿಠಲಕಾವಳೆ, ಜಿಲ್ಲಾ ವಾರ್ತಾಧಿಕಾರಿ ವಿನೋದ್‌ ಚಂದ್ರ ಇತರರಿದ್ದರು.

ಟಾಪ್ ನ್ಯೂಸ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

10-18

ಸಾಂತರಸರ ಕಾಲದ ವೀರಗಲ್ಲು ಪತ್ತೆ

auto

ವಾಹನ ತಪಾಸಣೆ ವೇಳೆ ಕಾನ್ಸ್‌ಟೇಬಲ್‌ ಸಮೇತ ಆಟೋ ಚಾಲಕ ಎಸ್ಕೇಪ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Strict lockdown enforcement from today

ಇಂದಿನಿಂದ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿ

Tissue cultivation

ಅಂಗಾಂಶ ಕೃಷಿ ಪದ್ದತಿಯ ಕುಡಿ ಕಾಂಡ ಸಸಿಗಳ ತಾಂತ್ರಿಕತೆ ಜಾರಿಗೆ ಪ್ರಯತ್ನ

Proposal for Oxygen Plant

ಆಕ್ಸಿಜನ್‌ ಪ್ಲಾಂಟ್‌ಗೆ ಪ್ರಸ್ತಾವನೆ

Strictly enforce the lockdown

ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಿ

Despite the letter to the CM, the situation has not improved

ಸಿಎಂಗೆ ಪತ್ರ ಬರೆದರೂ ಪರಿಸ್ಥಿತಿ ಸುಧಾರಿಸಿಲ್ಲ

MUST WATCH

udayavani youtube

ನವಮಂಗಳೂರು ಬಂದರಿಗೆ ಆಗಮಿಸಿದ ಮೆಡಿಕಲ್ ಆಕ್ಸಿಜನ್ ಹೊತ್ತ ಕುವೈತ್ ಹಡಗು

udayavani youtube

ಕರುನಾಡಿಗೆ ಯಾಕೆ ಈ ಪರಿಸ್ಥಿತಿ ಬಂತು?

udayavani youtube

ವೈದ್ಯರ ಏಪ್ರಾನ್ ಧರಿಸಿ ತರಕಾರಿ ಖರೀದಿಗೆ ಬಂದಿದ್ದ ಯುವಕ

udayavani youtube

ಲಾಠಿ ಏಟಿನ ಭೀತಿ : ತಲೆಗೆ ಹೆಲ್ಮೆಟ್‌, ಬೆನ್ನಿಗೆ ತಗಡಿನ ಶೀಟ್‌ ಕಟ್ಟಿಕೊಂಡ ಸೈಕಲ್‌ ಸವಾರ

udayavani youtube

ಸರ್ಕಾರ ತನ್ನ ಕೆಲಸ ನಿರ್ವಹಿಸಿದ್ದರೆ, ಈ ಸ್ಥಿತಿ ಬರುತ್ತಿರಲಿಲ್ಲ

ಹೊಸ ಸೇರ್ಪಡೆ

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

10-20

ಅನಗತ್ಯವಾಗಿ ಓಡಾಡಿದವರಿಗೆ ಪೊಲೀಸರಿಂದ ಲಾಠಿ ಬಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.