ಪಠ್ಯೇತರ ಚಟುವಟಿಕೆಯಿಂದ ವ್ಯಕ್ತಿತ್ವ ವಿಕಸನ


Team Udayavani, Jan 28, 2020, 3:00 AM IST

patyetara

ಬೇಲೂರು: ಮಕ್ಕಳು ಓದಿನ ಜೊತೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ ಮೊದಲಾದ ಪಠ್ಯೇತರ ಚಟಿವಟಿಕೆಯಲ್ಲಿ ಪಾಲ್ಗೊಂಡರೆ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಶಾಸಕ ಕೆ.ಎಸ್‌.ಲಿಂಗೇಶ್‌ ಹೇಳಿದರು. ಪಟ್ಟಣದ ವೈಕುಂಠ ಬೀದಿಯಲ್ಲಿರುವ ಸಾಹಿತಿ ಬೇಲೂರು ಕೃಷ್ಣಮೂರ್ತಿ ಅವರ ನಿವಾಸದಲ್ಲಿ ಮಕ್ಕಳ ಸಾಹಿತ್ಯ ಪರಿಷತ್‌ ಏರ್ಪಡಿಸಿದ್ದ 9ನೇ ಮನೆ ಮನೆ ಕವಿಗೋಷ್ಠಿಯಲ್ಲಿ ಮಾತನಾಡಿದರು.

ಪೋಷಕರು ಹಾಗೂ ಶಿಕ್ಷಕರು ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು ಎಂದರು. ಕೆಲವೊಂದು ಮಕ್ಕಳಲ್ಲಿ ಪ್ರತಿಭೆ ಇದ್ದರೂ ಕೂಡ ಅದರ ಅನಾವರಣಕ್ಕೆ ಪ್ರೋತ್ಸಾಹ ಸಿಗುತ್ತಿಲ್ಲ. ಮಕ್ಕಳ ಸಾಹಿತ್ಯ ಪರಿಷತ್‌ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ಹೊಮ್ಮಿಸಲು ಕವಿಗೋಷ್ಠಿ ಏರ್ಪಡಿಸಿರುವುದು ಶ್ಲಾಘನೀಯ ಎಂದರು.

ಕಲೆ, ಸಂಸ್ಕೃತಿ ಉಳಿಸಿ: ಸಾಹಿತಿ ಬೇಲೂರು ಕೃಷ್ಣಮೂರ್ತಿ ಮಾತನಾಡಿ, ಪಾಶ್ಚಿಮಾತ್ಯ ಕಲೆಗಳಿಗೆ ನಮ್ಮ ಯುವ ಜನಾಂಗ ಮಾರುಹೋಗುತ್ತಿರುವುದು ವಿಷಾದರ ಸಂಗತಿಯಾಗಿದೆ ಎಂದರು. ನಮ್ಮ ಕಲೆ, ಸಂಸ್ಕೃತಿಗಳನ್ನು ನಾವು ಮರೆಯುತ್ತಿದ್ದೇವೆ. ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದೂರವಿರಬೇಕು. ನಮ್ಮ ಸಂಸ್ಕೃತಿಗಳನ್ನು ಉಳಿಸಬೇಕು ಎಂದರು. ಹಿಂದಿನ ಕಾಲದಲ್ಲಿ ನಾಟಕಗಳಲ್ಲಿ ಅಭಿನಯಿಸುವುದರಿಂದ ವೇದಿಕೆಯ ಮೇಲೆ ಮಾತನಾಡಲು ಧೈರ್ಯ ಬರುತ್ತಿತ್ತು.

ಅಭಿನಯಿಸುವ ಚಾತುರ್ಯವೂ ಕರಗತವಾಗುತ್ತಿತ್ತು. ಆದರೆ ಈಗ ಮಕ್ಕಳಲ್ಲಿ ಕೇವಲ ಓದಿನ ಕಡೆ ಗಮನ ಹರಿಸಿ ಉತ್ತಮ ಅಂಕಗಳನ್ನು ಪಡೆಯುತ್ತಾರೆ ಹೊರತು ಹೊರಗಿನ ಪ್ರಾಪಂಚಿಕ ಜ್ಞಾನವೇ ಇರುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌, ಸಿ.ಆರ್‌.ಪಿ. ಜಯಣ್ಣ, ಮಕ್ಕಳ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಎಂ, ಆಶಾ ,ಕಾರ್ಯದರ್ಶಿ ನಳಿನಾ ,ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಆನಂದ್‌,ಇತರರು ಇದ್ದರು.

ಮಕ್ಕಳಿಗೆ ಮೊಬೈಲ್‌, ಟೀವಿ ಮಾರಕ: ಈಗಿನ ಮಕ್ಕಳು ಮೊಬೈಲ್‌, ಟೀವಿ ಬಗ್ಗೆ ಹೆಚ್ಚು ಆಸಕ್ತರಾಗಿದ್ದು, ಓದಿನ ಕಡೆ ಗಮನ ನೀಡದಿರುವುದು ವಿಷಾದಕರ ಸಂಗತಿಯಾಗಿದೆ ಎಂದು ಶಾಸಕ ಲಿಂಗೇಶ್‌ ಹೇಳಿದರು. ಹಿಂದೆ ನಾವು ಓದುವಾಗ ಕ್ರೀಡೆ,ಕಲೆ,ಸಾಹಿತ್ಯ ,ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದೆವು. ಆದರೆ ಈಗ ಶಿಕ್ಷಣ ಅಂಕ ಗಳಿಕೆಗೆ ಸೀಮಿತವಾಗಿದ್ದು, ಪೋಷಕರು ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹ ನೀಡದಿರುವುದು ವಿಷಾದಕರ ಸಂಗತಿಯಾಗಿದೆ ಎಂದರು.

ಮಕ್ಕಳಿಗೆ ಓದಿನ ಜೊತೆಯಲ್ಲಿ ಪೌರಾಣಿಕ ಕಥೆ, ಸಾಹಿತ್ಯ,ಕಲೆ, ಸಂಪ್ರದಾಯ ಗಳನ್ನು ಹೇಳಿಕೊಟ್ಟಾಗ ಸಮಾಜದಲ್ಲಿ ಉತ್ತಮ ಹೆಸರು ಪಡೆಯಲು ಸಾಧ್ಯ.
-ಬೇಲೂರು ಕೃಷ್ಣಮೂರ್ತಿ, ಸಾಹಿತಿ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.