ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವುದಿಲ್ಲ

Team Udayavani, Jun 20, 2019, 1:24 PM IST

hasan-tdy-3..

ಸಕಲೇಶಪುರ: ಜನ ಮತ ನೀಡಲಿ ಬಿಡಲಿ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.

ತಾಲೂಕಿನ ಹೆತ್ತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ 1×8 ಎಂ.ವಿ.ಎ 66/11 ಕೆ.ವಿ ವಿದ್ಯುತ್‌ ಉಪ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸಚಿವನಾಗಿದ್ದ ವೇಳೆಯಲ್ಲಿ ಈ ಭಾಗದ ಜನರ ವಿದ್ಯುತ್‌ ಸಮಸ್ಯೆಯನ್ನು ಕಂಡು ಹೆತ್ತೂರಿಗೆ ವಿದ್ಯುತ್‌ ಉಪಕೇಂದ್ರವನ್ನು ಮಂಜೂರು ಮಾಡಿಸಿದ್ದೆ. ಆದರೆ ನಾವು ಅಧಿಕಾರ ದಲ್ಲಿರದ ಕಾರಣ ಕಾಮಗಾರಿ ಮುಗಿಯುವುದು ವಿಳಂಬವಾಗಿದೆ. ದೇವೇೕಗೌಡರಿಗೆ ರಾಜಕೀಯ ವಾಗಿ ಪುನರ್‌ ಶಕ್ತಿ ನೀಡಿದ್ದು ಹೆತ್ತೂರು ಭಾಗದ ಜನ ಈ ಹಿನ್ನೆಲೆಯಲ್ಲಿ ಇಲ್ಲಿನ ಜನರ ಋಣ ನಾನು ಎಂದಿಗೂ ಮರೆಯುವುದಿಲ್ಲ ಎಂದರು.

ಉಚ್ಚಂಗಿ ಗ್ರಾಮದಲ್ಲೂ ಸಹ ಇದೇ ರೀತಿಯ ವಿದ್ಯುತ್‌ ಉಪಕೇಂದ್ರವನ್ನು ಮಾಡಲು ಯೋಜಿ ಸಿದ್ದು ಕೆಪಿಟಿಸಿಎಲ್ ಅಧಿಕಾರಿಗಳು ಯೋಜನೆಯ ನೀಲ ನಕ್ಷೆ ತಯಾರಿಸಬೇಕೆಂದರು.

ರೈತರ ಸಮಸ್ಯೆ ನಿವಾರಿಸಲು ಕ್ರಮ: ಬೆಳೆಗಾರರ ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ದೇವೇ ಗೌಡರು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ ದ್ದರು. ಈ ಹಿಂದೆ ಕೇಂದ್ರದಲ್ಲಿ ವಾಣಿಜ್ಯ ಸಚಿವ ರಾಗಿದ್ದ ಸುರೇಶ್‌ ಪ್ರಭು ಅವರಿಗೆ ಮನವಿ ಸಲ್ಲಿಸಿದ್ದೆವು. ಅವರು ಸಮಸ್ಯೆಯನ್ನು ಬಗೆಹರಿ ಸಲು ಆಸಕ್ತಿ ತೋರಿದ್ದರು. ಆದರೆ ಲೋಕಸಭಾ ಚುನಾವಣೆ ಘೋಷಣೆಯಗಿದ್ದರಿಂದ ಸಮಸ್ಯೆ ಬಗೆಹರಿಯಲಿಲ್ಲ. ಕಾಡಾನೆ ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ಹಲವು ಬಾರಿ ಕೇಂದ್ರ ಸರ್ಕಾರ ಮನವಿ ಮಾಡಿದರೂ ಸ್ಪಂದಿಸದ ಕಾರಣ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಕಾಡಾನೆ ಸಮಸ್ಯೆಯನ್ನು ಬಗೆಹರಿಸಲು ಕುಮಾರಣ್ಣನ ನೇತೃತ್ವದಲ್ಲಿ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಯಾವ ರೀತಿಯಲ್ಲೂ ತೊಂದರೆ ಯಾಗದಂತೆ ಉತ್ತಮ ಯೋಜನೆ ಗಳನ್ನು ರೂಪಿಸುವಂತೆ ಸಿಎಂ ಕುಮಾರಣ್ಣ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಅಧಿಕಾರಿಗಳು ಸಹ ರೈತಪರ ವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಗುಣಮಟ್ಟದ ವಿದ್ಯುತ್‌ ಸರಬರಾಜು: ಶಾಸಕ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಹೆತ್ತೂರು ಸುತ್ತಮುತ್ತಲಿನ ಗ್ರಾಮಗಳಾದ ಐಗೂರು, ಬ್ಯಾಕರವಳ್ಳಿ, ವನಗೂರು, ಹಾಡ್ಯ ಹಾಗೂ ಹೊಂಗಡಹಳ್ಳ ಸೇರಿದಂತೆ ಇತರ ಕಡೆಗಳಿಗೆ ಉತ್ತಮ ಗುಣಮಟ್ಟದ ವಿದ್ಯುತ್‌ ಸರಬರಾಜು ಮಾಡಲು ಈ ವಿದ್ಯುತ್‌ ಸರಬರಾಜು ಕೇಂದ್ರ ಸಹಾಯಕಾರಿಯಾಗಿದೆ. ಜೊತೆಗೆ ಯಸಳೂರು ವಿದ್ಯುತ್‌ ವಿತರಣಾ ಕೇಂದ್ರ ಹೊರೆಯನ್ನು ಕಡಿಮೆ ಮಾಡುವುದರಿಂದ 11 ಕೆ.ವಿ. ಮಾರ್ಗ ದಲ್ಲಾಗುವ ವಿದ್ಯುತ್‌ ನಷ್ಟವೂ ಕಡಿಮೆಯಾಗುತ್ತದೆ ಎಂದರು.

ಈ ಭಾಗದಲ್ಲಿ ಮಳೆ ಬಹಳ ಕಡಿಮೆ ಯಾಗಿರುವುದು ಆತಂಕವಾಗಿದೆ. ಕೊಡಗಿಗೆ ಹೇಗೆ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದೀರೋ ಹಾಗೆಯೆ ಸಕಲೇಶಪುರ ಅಭಿವೃದ್ಧಿ ಪ್ರಾಧಿಕಾರ ಮಾಡಲು ಮುಖ್ಯಮಂತ್ರಿಗಳು ಗಮನಹರಿಸ ಬೇಕು. ಸಕಲೇಶಪುರ ತಾಲೂಕಿನಲ್ಲಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಶಾಸಕರು ಒತ್ತಾಯಿಸಿದರು.

ನೂತನ ಲೋಕ ಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರು ಈ ಭಾಗದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿಷ್ಟಾಚಾರ ಉಲ್ಲಂಘನೆ: ಜಿಪಂ ಸದಸ್ಯೆ ಉಜ್ಮಾ ರುಜ್ವಿ ಮಾತನಾಡಿ, ಈ ಭಾಗದ ಜನರ ಅನು ಕೂಲಕ್ಕಾಗಿ ತಮ್ಮ ಪತಿ ಸುದರ್ಶನ್‌ ಅವರು 2.20 ಎಕರೆ ಜಾಗವನ್ನು ಕೆಪಿಟಿಸಿಎಲ್ಗೆ ನೀಡಿದ್ದರು. ಆದರೆ ಇಂದಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಈ ಭಾಗದ ಜನಪ್ರತಿನಿಧಿಯಾದ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಕೆಪಿಟಿಸಿಎಲ್ ಅಧಿಕಾರಿ ಗಳು ಹಾಕದೆ ಅಪಮಾನವೆಸಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ ರೇವಣ್ಣ ನವರು ನನ್ನ ಮನವೊಲಿಸಿ ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ಇಲ್ಲದಿದ್ದಲ್ಲಿ ನಾನು ಇಲ್ಲಿಗೆ ಬರುತ್ತಿರಲಿಲ್ಲ ಎಂದು ಹೇಳಿದರು.

ಈ ಸಂದ‌ರ್ಭದಲ್ಲಿ ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಮ್ಮ, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಮುಖ್ಯ ಅಭಿಯಂತರ ಕೊಟ್ರೇಶ್‌, ಮುಖ್ಯ ಅಧೀಕ್ಷಕ ಉಮೇಶ್‌, ಕಾರ್ಯಪಾಲಕ ಅಭಿಯಂತರ ಲೋಕೇಶ್‌, ಉಪ ಅಭಿಯಂತರ ರಂಜನ್‌, ಜಾತ್ಯತೀತ ಜನತಾದಳ ಮುಖಂಡರಾದ ಸಚಿನ್‌ ಪ್ರಸಾದ್‌, ನಾಗರಾಜ್‌, ದಿವಾಕರ್‌, ರಾಜೇಗೌಡ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.