ಚುನಾವಣಾ ಪ್ರಚಾರಕ್ಕೆ ಪ್ರಜ್ವಲ್ ರೇವಣ್ಣ ಎಂಟ್ರಿ
Team Udayavani, Mar 13, 2019, 5:57 AM IST
ಹಾಸನ: ಮಾಜೀ ಪ್ರಧಾನಿ ದೇವೇಗೌಡರ ಮೂರನೇ ತಲೆಮಾರು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗಿದೆ. ಒಂದೆಡೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖೀಲ್ ಕುಮಾರಸ್ವಾಮಿ ಅವರು ಈ ಬಾರಿಯ ಸಂಸತ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇನ್ನೊಂದೆಡೆ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ಹಾಸನ ಕ್ಷೇತ್ರದಲ್ಲಿ ಜೆ.ಡಿ.ಎಸ್. ಪಕ್ಷದ ಪರವಾಗಿ ಪ್ರಚಾರ ಪ್ರಾರಂಭಿಸುವ ಮೂಲಕ ತಮ್ಮ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಬುಧವಾರ ಬೆಳಿಗ್ಗೆ ಹೊಳೇನರಸೀಪುರದ ಮೂಡಲಹಿಪ್ಪೆ ಮತ್ತು ಪಡವಲಹಿಪ್ಪೇ ಗ್ರಾಮಗಳಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಜ್ವಲ್ ಅವರು ಪಕ್ಷದ ಕಾರ್ಯಕರ್ತರು ಮತ್ತು ನಾಯಕರೊಂದಿಗೆ ಲೋಕಸಭಾ ಪ್ರಚಾರ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ‘ಜೆಡಿಎಸ್ ಪಕ್ಷದ ಪರವಾಗಿ ನಾನಿಂದು ಪ್ರಚಾರಕ್ಕೆ ಇಳಿಯುತ್ತಿದ್ದೇನೆ. ಹಾಸನ ಕ್ಷೇತ್ರದಿಂದ ಪಕ್ಷವು ಯಾರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೂ ನಾನು ಅವರ ಪರ ಪ್ರಚಾರ ಮಾಡುತ್ತೇನೆ, ನಮಗೆಲ್ಲಾ ಜೆಡಿಎಸ್ ಗೆಲುವು ಮುಖ್ಯ’ ಎಂದು ಹೇಳಿದರು.
ಹಾಸನ ಲೋಕಸಭಾ ಕ್ಷೇತ್ರಕ್ಕೆ ಜೆ.ಡಿ.ಎಸ್. ಅಭ್ಯರ್ಥಿ ಯಾರೆಂದು ಇನ್ನೂ ಫೈನಲ್ ಆಗಿಲ್ಲವಾದರೂ ಬಹುತೇಕ ಸಚಿವ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರೇ ಇಲ್ಲಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಇಂದು ಪ್ರಜ್ವಲ್ ಅವರು ಭರ್ಜರಿಯಾಗಿ ತಮ್ಮ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ