Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Team Udayavani, Mar 28, 2024, 10:06 PM IST

29

ಹಾಸನ: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ  ನಾಮಪತ್ರ ಸಲ್ಲಿಸಿದರು.

ಗುರುವಾರ ಬೆಳಗ್ಗೆ 11.15ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಒಂದು ಸೆಟ್‌ ಉಮೇದುವಾರಿಕೆ ಸಲ್ಲಿಸಿದರು. ಪ್ರಜ್ವಲ್‌ ತಂದೆ ಹಾಗೂ ಶಾಸಕ ಎಚ್‌.ಡಿ.ರೇವಣ್ಣ, ಜಿಲ್ಲೆಯ ಪಕ್ಷದ ಶಾಸಕರಾದ ಎ.ಮಂಜು, ಸಿ.ಎನ್‌.ಬಾಲಕೃಷ್ಣ, ಎಚ್‌.ಪಿ.ಸ್ವರೂಪ್‌ ಪ್ರಕಾಶ್‌ ಅವರು ಜತೆಗಿದ್ದರು.

 ದೇವೇಗೌಡರ ಆಶೀರ್ವಾದ:

ಪ್ರಜ್ವಲ್‌ ರೇವಣ್ಣ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುವ ಮೊದಲು ಹರದನಹಳ್ಳಿಯ ನಿವಾಸದಲ್ಲಿ ತಂಗಿದ್ದ ತಾತ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ದೇವೇಗೌಡರು ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದರು.

ಎ.4ರಂದು ಅಧಿಕೃತ ನಾಮಪತ್ರ :

ಪ್ರಜ್ವಲ್‌ ರೇವಣ್ಣ ಮಾತನಾಡಿ, ಗುರುವಾರ ಶುಭದಿನವೆಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಎ.4ರಂದು ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಜತೆ ಬೃಹತ್‌ ರ್ಯಾಲಿ ನಡೆಸಿ ನಾಮಪತ್ರ ಸಲ್ಲಿಸುತ್ತೇನೆ. ಅಂದು ಎಚ್‌.ಡಿ.ದೇವೇಗೌಡರು, ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಪ್ರಜ್ವಲ್‌ 18 ಕೋ. ರೂ. ಆಸ್ತಿ ಒಡೆಯ :
ಹಾಸನ: ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಹಾಸನ ಲೋಕಸಭೆ ಕ್ಷೇತ್ರದ ಚುನಾವಣೆಗೆ ಗುರುವಾರ ಸಂಸದ ಪ್ರಜ್ವಲ್‌ ರೇವಣ್ಣ ಅವರು ನಾಮಪತ್ರ ಸಲ್ಲಿಸಿದ್ದು, ಅವರು 18,52, 21, 267 ಕೋಟಿ ರೂ. ಆಸ್ತಿ ಹೊಂದಿರುವುದನ್ನು ಉಲ್ಲೇಖೀಸಿದ್ದಾರೆ.

5.44 ಕೋ. ರೂ. ಚರ ಹಾಗೂ 4.43 ಕೋ. ರೂ. ಸ್ಥಿರ ಆಸ್ತಿ ಸಹಿತ ಒಟ್ಟು 18.52 ಕೋ. ರೂ. ಮೌಲ್ಯದ ಆಸ್ತಿ ಹೊಂದಿದ್ದು, ಸದ್ಯ 9.29 ಲಕ್ಷ ರೂ. ನಗದು ಇರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ವಿವಿಧ ಬ್ಯಾಂಕ್‌ ಖಾತೆಗಳಲ್ಲಿ 56 ಲಕ್ಷ ರೂ. ಇರುವುದಾಗಿ ತಿಳಿಸಿದ್ದಾರೆ.

ಐದು ವರ್ಷಗಳಲ್ಲಿ ಕೃಷಿಯಿಂದ 2.75 ಕೋಟಿ ರೂ. ಆದಾಯ, ಕೃಷಿಯೇತರ ಮೂಲದಿಂದ 1.33 ಕೋಟಿ ರೂ. ಆದಾಯ ಗಳಿಸಿದ್ದೇನೆ. 31 ಹಸು, 4 ಎತ್ತು, ಒಂದು ಟ್ರ್ಯಾಕ್ಟರ್‌, ಬೆಂಗಳೂರು ಮೈಸೂರು ಸಹಿತ ವಿವಿಧೆಡೆೆ ವಾಣಿಜ್ಯ ಕಟ್ಟಡ, ಹಾಸನ ಹಾಗೂ ಬೆಂಗಳೂರಿನ ನೆಲಮಂಗಲದಲ್ಲಿ ಆಸ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ.

ಕುಟುಂಬದವರಿಂದಲೇ ಸಾಲ ಪಡೆದ ಸಂಸದ ಸೋದರತ್ತೆ ಅನಸೂಯಾ ಅವರಿಂದ 22 ಲಕ್ಷ ರೂ., ಮತ್ತೂಬ್ಬ ಸೋದರತ್ತೆ ಶೈಲಜಾ ಅವರಿಂದ 10 ಲಕ್ಷ ರೂ. ತಂದೆ ರೇವಣ್ಣ ಅವರಿಂದ 86 ಲಕ್ಷ ಹಾಗೂ ಸಹೋದರ, ವಿಧಾನ ಪರಿಷತ್‌ ಸದಸ್ಯ ಡಾ| ಸೂರಜ್‌ ರೇವಣ್ಣ ಅವರಿಂದ 1 ಕೋಟಿ ರೂ. ಸಹಿತ ಒಟ್ಟು 4.48 ಕೋಟಿ ಸಾಲ ಹೊಂದಿರುವುದಾಗಿ ತಿಳಿಸಿದ್ದಾರೆ. ಸರಕಾರಕ್ಕೆ 3.04 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿರುವ ಅವರು, ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.