Udayavni Special

ಬಿತ್ತನೆ ಆಲೂಗಡ್ಡೆ ದರ ನಿಗದಿ ಮಾಡಿ: ರೇವಣ್ಣ

ತಕ್ಷಣ ಶಾಸಕರ ಸಭೆ ಕರೆದು ಬಿತ್ತನೆ ಆಲೂಗಡ್ಡೆ ಮಾರಾಟ ವ್ಯವಸ್ಥೆ ಬಗ್ಗೆ ಡಿಸಿ ‌ರ್ಚಿಸಲಿ

Team Udayavani, May 7, 2020, 4:50 PM IST

ಬಿತ್ತನೆ ಆಲೂಗಡ್ಡೆ ದರ ನಿಗದಿ ಮಾಡಿ: ರೇವಣ್ಣ

ಸಾಂದರ್ಭಿಕ ಚಿತ್ರ

ಹಾಸನ: ಶಾಸಕರನ್ನು ಕಡೆಗಣಿಸಿ ವರ್ತಕರ ಸಭೆ ನಡೆಸಿ ಬಿತ್ತನೆ ಆಲೂಗಡ್ಡೆ ಮಾರಾಟದ ದಿನ ನಿಗದಿಪಡಿಸಿರುವ ಜಿಲ್ಲಾಧಿಕಾರಿ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್‌ ಮುಖಂಡ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು, ತಕ್ಷಣವೇ ಶಾಸಕರ ಸಭೆ ಕರೆದು ಬಿತ್ತನೆ ಆಲೂಗಡ್ಡೆ ದರ ನಿಗದಿಪಡಿಸಬೇಕು ಎಂದು ಆಗ್ರಹಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿಗಳು ಶಾಸಕರು, ರೈತ ಮುಖಂಡರು, ವರ್ತಕರ ಸಭೆ ಕರೆದು ಬಿತ್ತನೆ ಆಲೂಗಡ್ಡೆ ದರ ನಿಗದಿ ಹಾಗೂ ಮಾರಾಟ ವ್ಯವಸ್ಥೆ ಮಾಡುತ್ತಿದ್ದರು ಆದರೆ ಜಿಲ್ಲಾಧಿಕಾರಿ ಗಿರೀಶ್‌ ಅವರು ಆಲೂಗಡ್ಡೆ ವರ್ತಕರ ಸಭೆ ನಡೆಸಿ ಆಲೂಗಡ್ಡೆ ಮಾರಾಟದ ಬಗ್ಗೆ ನಿರ್ಧಾರ ಮಾಡಿದ್ದಾರೆ. ಆಲೂಗಡ್ಡೆಯನ್ನು ರೈತರು ಬಿತ್ತನೆ ಮಾಡಿದ ನಂತರ ಹಾನಿಯಾದರೆ ಅದಕ್ಕೆ ಹೊಣೆ ಯಾರು ? ಬಿತ್ತನೆ ಆಲೂಗಡ್ಡೆ ದರ ನಿಗದಿ ಮಾಡದಿದ್ದರೆ ವರ್ತಕರು ಮನಬಂದ ದರ ನಿಗದಿ ಪಡಿಸಿ ಮಾರಾಟ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಈಗ ಆಲೂಗಡ್ಡೆ ದರ ಕೇಜಿಗೆ 15 ರೂ. ಇದೆ. ಇದರ ಆಧಾರದ ಮೇಲೆ ದರ ನಿಗದಿಪಡಿಸಬೇಕು ಎಂದರು.

ಕಡ್ಡಾಯವಾಗಿ ರಶೀದಿ ನೀಡಿ: ರೈತರಿಗೆ ಗುಣಮಟ್ಟದ ಬಿತ್ತನೆ ಆಲೂಗಡ್ಡೆ ಮಾರಾಟದ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ರೈತರಿಗೆ ವರ್ತಕರು ಕಡ್ಡಾಯವಾಗಿ ರಶೀದಿ ನೀಡುವು
ದನ್ನು ಕಡ್ಡಾಯ ಮಾಡಬೇಕು. ರಶೀದಿಯಲ್ಲಿ ಬಿತ್ತನೆ ಆಲೂಗಡ್ಡೆ ಎಂಬುದನ್ನು ನಮೂದು ಮಾಡಬೇಕು. ಬಿತ್ತನೆ ಬೀಜದ ಜೊತೆಗೆ ಆಲೂಗಡ್ಡೆ ಬೆಳೆಗಾರರಿಗೆ ತಾಂತ್ರಿಕ ಮಾಹಿತಿ, ಔಷಧ, ರಸಗೊಬ್ಬರ ಒಂದೇ ಕಡೆ ಆಲೂಗಡ್ಡೆ ಮಾರುಕಟ್ಟೆಯಲ್ಲಿಯಲ್ಲಿಯೇ ಸಿಗುವ ವ್ಯವಸ್ಥೆ ಆಗಬೇಕು. ಈ ಎಲ್ಲ ಕ್ರಮಗಳ ಬಗ್ಗೆ ಚರ್ಚಿಸಲು ಗುರುವಾರ ಶಾಸಕರ ಸಭೆ ಕರೆಯಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ಜನಪ್ರತಿನಿಧಿಗಳನ್ನು ಕಡೆಗಣಿಸದಿರಿ: ಜನ ಪ್ರತಿನಿಧಿಗಳನ್ನು ಕಡೆಗಣಿಸಿ ಬಿತ್ತನೆ ಆಲೂಗಡ್ಡೆ ಮಾರಾಟದ ನಿರ್ಧಾರ ಮಾಡಿರುವ ಜಿಲ್ಲಾಡಳಿತವು ಮುಂದೆ ಅನಾಹುತವಾದರೆ
ಜಿಲ್ಲಾಧಿಕಾರಿ, ಎಸ್ಪಿ, ಎಪಿಎಂಸಿ ಕಾರ್ಯದರ್ಶಿಯವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ರೈತರ ಪರವಾಗಿರಬೇಕು. ವರ್ತಕರು, ಪುಡಾರಿಗಳ ಮಾತುಕೇಳಿ ನಿರ್ಧಾರ ತೆಗೆದುಕೊಳ್ಳಬಾರದು. ಆಲೂಗಡ್ಡೆ ಮಾರಾಟದ ಬಗ್ಗೆ ಹಿಂದಿನ ಜಿಲ್ಲಾಧಿಕಾರಿ ಯವರು ನಡೆಸಿದ ಸಭೆಯ ನಡವಳಿಕೆ ಗಳು ಹಾಗೂ ಶಾಸಕರ ಸಲಹೆ ಸೂಚನೆ ಗಳಿಗೆ ಮನ್ನಣೆ ನೀಡಿ ಕ್ರಮ ಕೈಗೊಳ್ಳಬೇಕು ಎಂದರು.

ಅನುದಾನ ಏನಾಗಿದೆ?
ಕೋವಿಡ್ ನಿಯಂತ್ರಣ ಕ್ರಮಗಳಿಗೆ ಹಾಸನ ಜಿಲ್ಲೆಗೆ 2.10 ಕೋಟಿ ರೂ. ಬಿಡುಗಡೆಯಾಗಿದೆ. ಆ ಮೊತ್ತವನ್ನು ಏನಾಗಿದೆ ಎಂಬುದೂ ಗೊತ್ತಿಲ್ಲ. ಬಹುಶಃ ಜಿಲ್ಲಾ ಖಜಾನೆಯಲ್ಲಿಯೇ ಆ ಮೊತ್ತ ಭದ್ರವಾಗಿರಬಹುದು ಎಂದು ವ್ಯಂಗ್ಯ ವಾಡಿದರು. ಲಾಕ್‌ಡೌನ್‌ ಸಂದರ್ಭದಲ್ಲಿ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ- ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಿದ್ದನ್ನು ಬಿಟ್ಟರೆ ಜಿಲ್ಲಾಡಳಿತ ದಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ. ಸರ್ಕಾರವೂ ಕೇವಲ ಓಟ್‌ಬ್ಯಾಂಕ್‌ ರಾಜಕಾರಣ ಮಾಡಬಾರದು. ಬಿಜೆಪಿಯವರಿಗೆ ಮಾತ್ರ ನೆರವಾಗುವಂತೆ ನಡೆದುಕೊಳ್ಳದೇ ಪಕ್ಷಾತೀತ ವಾಗಿ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು ಎಂದರು.

ಟಾಪ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HASANA NEWS

ಯಗಚಿ ಜಲಾಶಯಕ್ಕೆ  ಕಾಯಕಲ್ಪ ಯಾವಾಗ?

250 cases in a single day: Rs 1.25 lakh Fine

ಒಂದೇ ದಿನಕೆ 250 ಕೇಸ್‌: 1.25 ಲಕ್ಷ ರೂ. ದಂಡ

14

ಅಧಿಕಾರ ದುರುಪಯೋಗ: ಎಫ್ಐಆರ್‌

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.