ಉನ್ನತ ಶಿಕ್ಷಣದ ಅಭಿವೃದ್ಧಿಗೆ ಆದ್ಯತೆ ನೀಡುವೆ

Team Udayavani, Feb 10, 2019, 7:20 AM IST

ಹೊಳೆನರಸೀಪುರ: ತಾವು ಉನ್ನತ ಶಿಕ್ಷಣ ಸಚಿವರಾದ ಮೇಲೆ ರಾಜ್ಯದಲ್ಲಿನ ಉನ್ನತ ಶಿಕ್ಷಣದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವುದಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಮಹಿಳಾ ಗೃಹ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಕಾನೂನು ಕಾಲೇಜಿನ ದಶಮಾ ನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಸಚಿವ ಸಂಪುಟ ಸೇರುವ ಮುನ್ನ ಉನ್ನತ ಶಿಕ್ಷಣ ಖಾತೆ ವಹಿಸಿಕೊಳ್ಳಲು ಹಿಂದೇಟು ಹಾಕಿದೆ.

ಅದಕ್ಕೆ ಕಾರಣ ಆ ಖಾತೆಯನ್ನು ನಿಭಾ ಯಿಸಲು ಸಾಧ್ಯವೇ ಎಂಬ ಅನುಮಾನ ಬಂದಿತ್ತು. ಆದರೆ ಅಂದು ಮಾಜಿ ಪ್ರಧಾನಿ ದೇವೇಗೌಡ ಮತ್ತು ಸಚಿವ ಎಚ್.ಡಿ.ರೇವಣ್ಣ ಅವರು ತಮ್ಮೊಂದಿಗೆ ಒತ್ತಾಸೆಯಾಗಿ ನಿಂತಿರು ವುದರಿಂದ ತಾವು ಕಳೆದ ಎಂಟು ತಿಂಗಳಿಂದ ಉನ್ನತ ಶಿಕ್ಷಣ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿರುವುದಾಗಿ ತಿಳಿಸಿದರು. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗುರಿಯಿರ ಬೇಕು. ಇದಕ್ಕೆ ಮಾಜಿ ಪ್ರಧಾನಿ ದೇವಾಗೌಡರೇ ಸಾಕ್ಷಿಯಾಗಿದ್ದಾರೆಂದರು.

ತಾಂತ್ರಿಕ ವಿವಿ ಕನಸು, ನನಸು: ವಿಧಾನ ಪರಿಷತ್‌ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ಸಚಿವ ರೇವಣ್ಣ ಅವರ ಬಹುದಿನದ ಕನಸಾದ ತಾಂತ್ರಿಕ ವಿಶ್ವವಿದ್ಯಾಲಯವನ್ನು ಹಾಸನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಹಾಸನಕ್ಕೆ ಪ್ರತ್ಯೇಕ ವಿಶ್ವವಿದ್ಯಾಲಯ ವನ್ನು ಆರಂಭಿಸಿ ಅದನ್ನು ಹೊಳೆನರಸೀಪುರ ದಲ್ಲಿಯೇ ಸ್ಥಾಪಿಸುವಂತಾಗಲಿ ಎಂದು ಆಶಿದರು.

ದಶಮಾನೋತ್ಸವ: ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ಮಾತನಾಡಿ, 2006ರಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಪಟ್ಟಣದಲ್ಲಿ ಈ ಮೂರು ಕಾಲೇಜುಗಳನ್ನು ಆರಂಭಿಸಿದ್ದರು. ಈ ಕಾಲೇಜುಗಳು ಈಗ ಹನ್ನೆರಡನೇ ವರ್ಷಕ್ಕೆ ಪಾದಾರ್ಪಣೆ ಮಾಡಿವೆ. ಕಳೆದ ವರ್ಷವೇ ದಶಮಾನೋತ್ಸವ ಆಚರಿಸ ಬೇಕಿತ್ತು. ವಿಧಾನಸಭಾ ಚುನಾವಣೆ ಪ್ರಕಟ ಗೊಂಡಿದ್ದರಿಂದ ಆ ವರ್ಷ ದಶಮಾನೋತ್ಸವ ಆಚರಿಸಲು ಸಾಧ್ಯವಾಗದಿದ್ದರಿಂದ ಈಗ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ಪ್ರಸಕ್ತ ವರ್ಷ ರಾಜ್ಯದಲ್ಲಿ ಎಲ್‌ಕೆಜಿ ಯಿಂದ ಪಿಯುಸಿ ವರೆಗೆ 1 ಸಾವಿರ ಶಾಲೆಗಳಲ್ಲಿ ಆಂಗ್ಲ ಮಾದ್ಯಮ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಅದಕ್ಕೆ ತಾವು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.

ಮಾಜಿ ಪ್ರಧಾನಿ ದೇವೇಗೌಡ ಹುಟ್ಟೂರು ಹರದನಹಳ್ಳಿಯಲ್ಲಿ ಪ್ರಸಕ್ತ ವರ್ಷದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸುತ್ತಿದ್ದು ಆರಂಭದಲ್ಲೇ ಬಿಎ, ಬಿಎಸ್ಸಿ, ಬಿಕಾಂ ವಿಷಯಗಳು ಆರಂಭವಾಗಲಿದೆ, ಅದಕ್ಕಾಗಿ ಪ್ರಸಕ್ತ ವರ್ಷ 15 ಕೋಟಿ ಹಣವನ್ನು ಕಟ್ಟಡ ಮತ್ತು ಮೂಲ ಸೌಕರ್ಯಕ್ಕಾಗಿ ಮೀಸಲಾಗಿಡಲಾಗಿದೆ ಎಂದರು.

ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಉದ್ಘಾಟಿಸಿದರು. ಕಾರ್ಯ ಕ್ರಮದಲ್ಲಿ ಶ್ರವಣಬೆಳಗೊಳ ಶಾಸಕ ಸಿ.ಎನ್‌.ಬಾಲಕೃಷ್ಣ, ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ, ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ, ಶಿಕ್ಷಣ ಇಲಾಖೆಯ ಆಯುಕ್ತೆ ಡಾ.ಮಂಜುಳಾ, ಮೂರು ಕಾಲೇಜುಗಳ ಪ್ರಾಂಶುಪಾಲರಾದ ಡಾ.ಲಲಿತಾದೇವಿ, ಜಯಲಕ್ಷ್ಮೀ, ಹಾಗೂ ಲಲಿತಾಬಾಯಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಜಿಪಂ.ತಾಪಂ ಪುರಸಭೆ ಸದಸ್ಯರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಮೂರು ಕಾಲೇಜಿನ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಪಟ್ಟಣದ ಸಾರ್ವಜನಿಕರು ಆಗಮಿಸಿದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ