ಗುಣಮಟ್ಟದ ಸೇವೆ: ಮೊದಲ ಸ್ಥಾನಕ್ಕೆ ಕ್ರಾಫ‌ರ್ಡ್‌ ಆಸ್ಪತ್ರೆ ಪೈಪೋಟಿ

Team Udayavani, Jan 12, 2020, 3:00 AM IST

gunamattada-

ಸಕಲೇಶಪುರ: ಗುಣಮಟ್ಟದ ಸೇವೆ ನೀಡುವ ವಿಭಾಗದಲ್ಲಿ ಪಟ್ಟಣದ ಕ್ರಾಫ‌ರ್ಡ್‌ ಆಸ್ಪತ್ರೆ ಉತ್ತಮ ರ್‍ಯಾಂಕ್‌ ಪಡೆಯುವತ್ತ ದಾಪುಗಾಲಿಟ್ಟಿದ್ದು , ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳ ಜೊತೆ ಮೊದಲ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿದೆ.

ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ಕ್ರಾಫ‌ರ್ಡ್‌ ಆಸ್ಪತ್ರೆ ವಿಶಿಷ್ಟ ವಾಸ್ತು ಶೈಲಿ ಹೊಂದಿದ್ದು, ಕಳೆದ 3ವರ್ಷಗಳ ಹಿಂದಷ್ಟೆ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯ ನವೀಕರಣ ಮಾಡಲಾಗಿತ್ತು. ಕಳೆದ ಒಂದು ವರ್ಷದ ಹಿಂದೆ ಶಾಸಕರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಪ್ರಯತ್ನದಿಂದ ಆಸ್ಪತ್ರೆಗೆ ಐಸಿಯು, ಡಯಾಲಿಸಿಸ್‌, ರಕ್ತನಿಧಿ, ಡಿಜಿಟಲ್‌ ಎಕ್ಸ್‌ರೇ ಸೇರಿದಂತೆ ಇನ್ನು ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.

ಸ್ವಚ್ಛತೆ ಬಗ್ಗೆ ತೀವ್ರ ನಿಗಾ: ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಉತ್ತಮವಾಗಿ ಕಾಪಾಡಿಕೊಂಡು ಬರಲಾಗಿದ್ದು, ಬಹುತೇಕ ತಾಲೂಕು ಆಸ್ಪತ್ರೆಗಳು ಜಿಪಂ ಅಡಿಯಲ್ಲಿ ಬಂದರೆ ಈ ಆಸ್ಪತ್ರೆ ಕರ್ನಾಟಕ ಆರೋಗ್ಯ ಇಲಾಖೆಯಡಿ ಬರುತ್ತದೆ. ಆಸ್ಪತ್ರೆಯಲ್ಲಿ ವೈದ್ಯರ ತೀವ್ರ ಕೊರತೆ ಬಿಟ್ಟರೆ ಬೇರೆ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟದ ಕುರಿತು ಅಳೆಯುವ ಸ್ಪರ್ಧೆಯಲ್ಲಿ ಸಕಲೇಶಪುರ ತಾಲೂಕು ಆಸ್ಪತ್ರೆ ಅರ್ಜಿ ಸಲ್ಲಿಸಿದ್ದು ಈಗಾಗಲೇ ಎರಡು ತಂಡಗಳು ಬಂದು ಪರಿಶೀಲಿಸಿದ್ದು ಮತ್ತೂಂದು ತಂಡ ಫೆಬ್ರವರಿಯಲ್ಲಿ ಆಗಮಿಸಿ ಗುಣಮಟ್ಟದ ಪರೀಕ್ಷೆ ಮತ್ತೂಮ್ಮೆ ನಡೆಸಲಿದೆ.

ಮೌಲ್ಯ ಮಾಪನ ತಂಡದಿಂದ ಶ್ಲಾಘನೆ: ರಾಷ್ಟ್ರೀಯ ಗುಣಮಟ್ಟ ಖಾತ್ರಿ ವಿಭಾಗದಿಂದ ಪಟ್ಟಣಕ್ಕೆ ಆಗಮಿಸಿದ ಜಿಲ್ಲಾ ಸಮಿತಿ ಸದಸ್ಯರಾದ ಡಾ.ಸಂಧ್ಯಾ ಹಾಗೂ ಡಾ.ಹರೀಶ್‌ ನೇತೃತ್ವದ ತಂಡ ಕ್ರಾಫ‌ರ್ಡ್‌ ಆಸ್ಪತ್ರೆಯ ಮೌಲ್ಯಮಾಪನ ನಡೆಸಿತು. ಆಸ್ಪತ್ರೆಯನ್ನು ಒಟ್ಟು 8 ವಿಭಾಗಗಳನ್ನಾಗಿ ಮಾಡಿ ಪ್ರತಿ ವಿಭಾಗಕ್ಕೆ ನಾಲ್ಕುನೂರು ಪ್ರಶ್ನೆಗಳನ್ನು ಮುಂದಿಟ್ಟು ಮಾಲ್ಯಮಾಪನ ನಡೆಸಿದ ತಂಡ ಆಸ್ಪತ್ರೆ ನಿರ್ವಹಣೆಯ ಬಗ್ಗೆ ಮೆಚ್ಚುಗೆ ಸೂಚಿಸಿದೆ.

ಪ್ರತಿವರ್ಷ ಆಸ್ಪತ್ರೆಗಳ ಮೌಲ್ಯಮಾಪನ ನಡೆಸಲಾಗುತ್ತಿದೆ. ಆದರೆ ಇದೆ ಮೊದಲ ಬಾರಿಗೆ ಕ್ರಾಫ‌ರ್ಡ್‌ ಆಸ್ಪತ್ರೆ ತಾಲೂಕು ಮಟ್ಟದಲ್ಲಿ ಮೊದಲ ರ್‍ಯಾಂಕ್‌ಗಾಗಿ ಪೈಪೊಟಿ ನಡೆಸುತ್ತಿದ್ದು ಮೊದಲ ರ್‍ಯಾಂಕ್‌ ಪಡೆದ ಆಸ್ಪತ್ರೆಗಳಿಗೆ ಕೇಂದ್ರದ ಅನುದಾನ ನೇರವಾಗಿ ಆಸ್ಪತ್ರೆಗೆ ಬರಲಿರುವುದರಿಂದ ಆಸ್ಪತ್ರೆ ಅಭಿವೃದ್ಧಿಗೆ ಸಹಾಯಕವಾಗಲಿದೆ.
-ಡಾ.ಮಹೇಶ್‌, ತಾಲೂಕು ಆರೋಗ್ಯಾಧಿಕಾರಿ

ಕ್ರಾಫ‌ರ್ಡ್‌ ಆಸ್ಪತೆಗೆ ಎಲ್ಲಾ ಸೌಲಭ್ಯ ಒದಗಿಸಲಾಗಿದೆ. ಇಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರ ಕೂಡಲೇ ವೈದ್ಯರನ್ನು ನೇಮಿಸಲು ಮುಂದಾಗಬೇಕು.
-ಎಚ್‌.ಕೆ.ಕುಮಾರಸ್ವಾಮಿ, ಶಾಸಕರು

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.