ರೈಲ್ವೆ ಕಾಮಗಾರಿಗೆ ತ್ವರಿತ ‌ಭೂ ಸ್ವಾಧೀನ: ಸಿಎಸ್‌ ಸೂಚನೆ

Team Udayavani, Nov 1, 2019, 4:13 PM IST

ಹಾಸನ: ರೈಲ್ವೆ ಕಾಮಗಾರಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ(ಸಿಎಸ್‌) ಟಿ.ಎಂ. ವಿಜಯಭಾಸ್ಕರ್‌ ಅವರು ಸೂಚಿಸಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ರೈಲ್ವೆ ಕಾಮಗಾರಿಗೆ ಸಂಬಂಧಿಸಿದ ಭೂ ಸ್ವಾಧೀನ ಕುರಿತುಒಂದು ವಾರದೊಳಗಾಗಿ ಸ್ವಾಧೀನಕ್ಕೆ ನಿಗದಿಪಡಿಸಿರುವ ಜಾಗವನ್ನುಸಂಬಂಧಿತ ಅಧಿಕಾರಿಗಳ ವ್ಯಾಪ್ತಿಗೆ ಪಡೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ವಿಡಿಯೋ ಸಂವಾದ ಸಭೆಯ ನಂತರ ಅಧಿಕಾರಿಗಳೊಂದಿಗೆ  ಮಾತನಾಡಿದ ಜಿಲ್ಲಾಧಿಕಾರಿ ಆರ್‌. ಗಿರೀಶ್‌, ರೈಲ್ವೇ ಕಾಮಗಾರಿಗಾಗಿ ಗೊತ್ತು ಪಡಿಸಿರುವ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ತಕರಾರುಗಳಿದ್ದಲ್ಲಿ, ಭೂಮಿಯ ಮಾಲೀಕರನ್ನು ಕರೆದು ಸಂಧಾನ ಸಭೆ ನಡೆಸಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಕು ಎಂದು ಸಂಬಂಧಿತ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಗಿರೀಶ್‌ ಅವರು ತಾಕೀತು ಮಾಡಿದರು.

ತಕರಾರುಗಳು ಎದುರಾದರೆ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಜಾಗವನ್ನು ಸ್ವಾಧೀನಕ್ಕೆ ಪಡೆಯುವಂತೆಯೂ ಸೂಚಿಸಿದರು. ಎಡೀಸಿ ಕವಿತಾ ರಾಜಾರಾಂ, ಜಿಪಂ ಸಿಇಒ ಬಿ.ಎ. ಪರಮೇಶ್‌, ಉಪಭಾಗಾಧಿಕಾರಿಗಳಾದ ನವೀನ್‌ ಭಟ್‌ ಮತ್ತು ಗಿರೀಶ್‌ ನಂದನ್‌, ತಹಶೀಲ್ದಾರ್‌ ಪಾರ್ಥಸಾರಥಿ, ಎಸ್‌ಎಲ್‌ಎಒ ಗಳಾದ ಮಂಜುನಾಥ್‌ ಮತ್ತು ಶ್ರೀನಿವಾಸಗೌಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಹಿರಿಯಭೂ ವಿಜ್ಞಾನಿ ಜಿ. ಶ್ರೀನಿವಾಸ್‌ ಉಪಸ್ಥಿತರಿದ್ದರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ