ಸ್ತ್ರೀಗೆ ಸಮಾನ ಹಕ್ಕು ಸಾವಿತ್ರಿ ಫ‌ುಲೆ ಹೋರಾಟದ ಫ‌ಲ

Team Udayavani, Jan 4, 2021, 2:54 PM IST

HASAN-TDY-1

ಹಾಸನ: ಶಿಕ್ಷಣ ಹಾಗೂ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಸಮಾನ ಹಕ್ಕು ಪಡೆಯಲು ಮಾತೆ ಸಾವಿತ್ರಿಭಾಯಿ ಪುಲೆ ಕಾರಣ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌.ನಂದಿನಿ ಅಭಿಪ್ರಾಯಪಟ್ಟರು.

ನಗರದ ಸ್ವಾಭಿಮಾನ ಭವನದಲ್ಲಿ ನವ-ಭಾರತ ಸೇವಾ ಕನ್ನಡಿ ಚಾರಿಟಬಲ್‌ ಟ್ರಸ್ಟ್‌ ಭಾನುವಾರ ಹಮ್ಮಿಕೊಂಡಿದ್ದ ಅಕ್ಷರ ದಾತೆ ಸಾವಿತ್ರಿಬಾಯಿ ಫ‌ುಲೆ ಅವರ 190ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ ಇಂದು ಶಿಕ್ಷಣ ದೊರಕುತ್ತಿರುವುದು ಸಾವಿತ್ರಿಬಾಯಿಫ‌ುಲೆ ಅವರ ಹೋರಾಟದ ಫ‌ಲ ಎಂದು ಹೇಳಿದರು.1831 ಜನವರಿ 3ರಂದು ಮಹಾರಾಷ್ಟ್ರದಲ್ಲಿ ಜನಿಸಿದ ಸಾವಿತ್ರಿಬಾಯಿ ಫ‌ುಲೆ ಅವರು ಸಮಾಜ ಸುಧಾರಣೆಗೆ ಮಹಿಳೆಯರಿಗೆ ಉತ್ತಮ ಶಿಕ್ಷಣ ಸಿಗುವಂತಾಗಬೇಕು ಎಂಬ ಪ್ರತಿಪಾದನೆಯೊಂದಿಗೆ ಹೋರಾಟ ಆರಂಭಿಸಿದರು. ಆಸಂದರ್ಭದಲ್ಲಿ ಎದುರಾದ ಪ್ರತಿರೋಧವನ್ನು ಲೆಕ್ಕಿಸದೆ ಹೋರಾಟ ಮಾಡಿದರು ಎಂದು ತಿಳಿಸಿದರು.

ಅವರು ಪಾಠಶಾಲೆಗೆ ಹೊರಟಾಗ ಅವರ ಮೇಲೆ ಕೆಸರು,ಸಗಣಿ ಎರಚಿ, ಕಲ್ಲು ತೂರುತ್ತಿದ್ದರು. ಇದರಿಂದ ಧೃತಿಗೆಡದಸಾವಿತ್ರಿಬಾಯಿ ಯಾವಾಗಲೂ ಒಂದು ಸೀರೆಯೊಂದನ್ನುತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು. ತಮ್ಮ ಮೇಲೆ ಎರಚುವಸಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ,ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿಇಟ್ಟುಕೊಂಡಿರುತ್ತಿದ್ದ ಮತ್ತೂಂದು ಸೀರೆಯನ್ನು ಉಟ್ಟುಕೊಂಡುಪಾಠಕ್ಕೆ ಅಣಿಯಾಗುತ್ತಿದ್ದರು ಎಂದು ಸಾವಿತ್ರಿಬಾಯಿ ಫ‌ುಲೆ ಅವರ ಹೋರಾಟವನ್ನು ನೆನಪಿಸಿದರು.

ಚಿರಋಣಿ ಆಗಿರಬೇಕು: ಹೆಣ್ಣು ಮಕ್ಕಳು ಶಿಕ್ಷಣ ಪಡೆಯಲು ಮನೆಯಿಂದಲೇ ವಿರೋಧ ವ್ಯಕ್ತವಾಗುತ್ತಿದ್ದ ವೇಳೆ, ಇಡೀಸಮಾಜದ ವಿರೋಧದ ನಡುವೆಯೂ ಅದರಲ್ಲೂ ಮೇಲ್ವರ್ಗದ ವಿರೋಧವನ್ನು ಸಹಿಸಿಕೊಂಡು ಮಹಿಳೆಯರಿಗೆ ಹಕ್ಕು ಸಿಗುವಂತಾಗಲು ಒಂದು ಅಸಾಧಾರಣ ಹೋರಾಟವನ್ನುಮಾಡಿರುವ ಸಾವಿತ್ರಿಬಾಯಿ ಫ‌ುಲೆ ಅವರಿಗೆ ಇಂದಿನಮಹಿಳೆಯರು ಚಿರಋಣಿಯಾಗಿರಬೇಕು ಎಂದು ಹೇಳಿದರು. ಮನೆಯಲ್ಲಿ ಮಕ್ಕಳು ಗಂಡಿರಲಿ, ಹೆಣ್ಣಿರಲಿ ಇಬ್ಬರಿಗೂ ಶಿಕ್ಷಣ ಕೊಡಬೇಕು. ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕೆ ಪ್ರೋತ್ಸಾಹ ಕೊಡುವ ಮೂಲಕ ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಎನ್ನುವ ಭೇದವನ್ನು ದೂರಮಾಡಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ನವ ಭಾರತ ಸೇವಾ ಕನ್ನಡಿಚಾರಿಟಬಲ್‌ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಯು.ಎಂ. ಪ್ರಕಾಶ್ಕುಮಾರ್‌, ಜ.3 ಭಾರತದ ಮೊದಲ ಮಹಿಳಾ ಶಿಕ್ಷಕಿಯಜನ್ಮದಿನ. ಶಿಕ್ಷಣವೆಂದರೆ ತಿಳಿಯದ, ಅಕ್ಷರಗಳೆಂದರೆ ಗೊತ್ತಿಲ್ಲದ ಕಾಲದಲ್ಲಿ ಶಾಲೆಗಳನ್ನು ತೆರೆದು, ಭಾರತದಲ್ಲಿ ಅಕ್ಷರ ಕ್ರಾಂತಿಆರಂಭಿಸಿದ ಮೊದಲ ಮಹಿಳೆ ಸಾತ್ರಿಬಾಯಿ ಫ‌ುಲೆ ಎಂದರು.

ಭಾರತದ ಶಿಕ್ಷಣ ವ್ಯವಸ್ಥೆಗೆ ಫ‌ುಲೆ ದಂಪತಿಗಳ ಕೊಡುಗೆಅಪಾರ. ದಾಸ್ಯ ವಿಮೋಚನೆಗೆ ಭಾರತದ ಸ್ವಾತಂತ್ರ ಸಂಗ್ರಾಮಕ್ಕೂ ಮೊದಲೇ ಇವರು ಅಜ್ಞಾನ ವಿಮೋಚನೆಗೆ ಅಕ್ಷರ ಕ್ರಾಂತಿ ಆರಂಭಿಸಿದ್ದರು. 1848ರಲ್ಲಿ ತಮ್ಮ  ಮನೆಯಲ್ಲಿಯೇ ಶಾಲೆಯನ್ನು ಆರಂಭಿಸುವ ಮೂಲಕ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟು ಶೂದ್ರರು-ಅತಿ ಶೂದ್ರರು ಮತ್ತು ಮಹಿಳೆಯರಿಗೆ ವಿದ್ಯಾದಾನ ಮಾಡುವ ಮೂಲಕ ಹೊಸ ಮನ್ವಂತರವೊಂದಕ್ಕೆ ನಾಂದಿ ಹಾಡಿದರು ಎಂದು ಹೇಳಿದರು.

ಸಾಹಿತಿ ರೂಪ ಹಾಸನ್‌, ಪ್ರಾಧ್ಯಾಪಕಿ ಪಿ.ಭಾರತಿದೇವಿ, ನವ ಭಾರತ ಸೇವಾ ಕನ್ನಡಿ ಚಾರಿಟಬಲ್‌ ಟ್ರಸ್ಟ್‌ ಉಪಾಧ್ಯಕ್ಷ ಕುಮಾರ್‌ಗೌರವ್‌ ಹೆತ್ತೂರ್‌, ಲೇಖಕಿ ಶಾಂತ ಅತ್ನಿ, ರಜಪೂತ ಸಂಸ್ಕಾರ ಸಮಿತಿ ಜಿಲ್ಲಾಧ್ಯಕ್ಷೆ ವೇದಾವತಿ, ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಎಚ್‌.ಎಂ.ಕಾವ್ಯಶ್ರೀ, ವೈದ್ಯಾಧಿಕಾರಿ ಡಾ.ಪುಷ್ಪಲತಾ, ಇಂಸಿಇ ಕಾಲೇಜು ಪ್ರಾಧ್ಯಾಪಕ ಡಾ.ಅತ್ನಿಕೃಷ್ಣ, ಸಹಾಯಕ ಕೃಷಿ ನಿರ್ದೇಶಕ ಎಂ.ಎಸ್‌.ಜನಾರ್ದನ್‌, ದಲಿತಮುಖಂಡ ಎಚ್‌.ಕೆ.ಸಂದೇಶ್‌, ಕೆನರಾ ಬ್ಯಾಂಕ್‌ ವ್ಯವಸ್ಥಾಪಕ ಲೋಕೇಶ್‌, ಕ್ರಾಂತಿಸೇನೆ ಸಂಸ್ಥಾಪಕ ಡಾ.ಅಣ್ಣಾ ಪರಮೇಶ್‌, ಸೀರಾರಾಮು, ರಂಗಸ್ವಾಮಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.