ವರ್ತುಲ ರಸ್ತೆ ಕಾಮಗಾರಿ ಮತ್ತೆ ಸ್ಥಗಿತ

Team Udayavani, Jan 17, 2020, 12:47 PM IST

HASAN-TDY-1

ಹಾಸನ: ನಗರದ ಸಾಲಗಾಮೆ ರಸ್ತೆಯಿಂದ ಬೇಲೂರು ರಸ್ತೆಗೆ ಸಂಪರ್ಕ ಕಲ್ಪಿಸುವ ವರ್ತುಲ ರಸ್ತೆ ಕಾಮಗಾರಿ ಒಂದು ತಿಂಗಳ ಹಿಂದೆ ಭರದಿಂದ ಆರಂಭವಾಗಿತ್ತಾದರೂ ಕಾಮಗಾರಿ ಸ್ಥಗತವಾಗಿ ಮೂರು ವಾರಗಳೇ ಕಳೆದಿವೆ.

ಉದ್ದೂರು ಗ್ರಾಮದ ಬಳಿ ವರ್ತುಲ ರಸ್ತೆ ಕಾಮಗಾರಿಗೆ ಬಳಸಿಕೊಳ್ಳುವ ಭೂಮಿಗೆ ಪರಿಹಾರ ನೀಡದಿರುವುದರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಇದೇ ಕಾರಣಕ್ಕೆ ಕಳೆದ ಒಂದು ದಶಕದಿಂದಲೂ ವರ್ತುಲ ರಸ್ತೆ ಕಾಮಗಾರಿ ಸ್ಥಗಿತವಾಗಿತ್ತು. ಈಡೇರದ ಭರವಸೆ: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರ್ಕೆ ಬಂದ ನಂತರ ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರು ನನೆಗುದಿಗೆ ಬಿದ್ದಿದ್ದ ವರ್ತುಲ ರಸ್ತೆ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಲು ಮುಂದಾಗಿ ಕಾಮಗಾರಿಗೆ 10 ಕೋಟಿ ರೂ. ಮಂಜೂರು ಮಾಡಿಸಿರುವುದಾಗಿ ಹೇಳಿದ್ದರು. ಮಾರ್ಚ್‌ ಅಂತ್ಯದ ವೇಳೆಗೆ ವರ್ತುಲ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದೂ ಹೇಳಿದ್ದರು. ರಸ್ತೆ ನಿರ್ಮಾಣಕ್ಕೆ ಪ್ರಮುಖ ಅಡ್ಡಿಯಾಗಿದ್ದ ಉದ್ದೂರು ಗ್ರಾಮದ ಭೂ ಮಾಲೀಕರನ್ನು ಮನವೊಲಿಸಿ ರಸ್ತೆ ನಿರ್ಮಾಣಕ್ಕೆ ಅಡ್ಡಿಪಡಿಸದೆ ಭೂಮಿಯನ್ನು ಬಿಟ್ಟುಕೊಡಿ ಭೂ ಪರಿಹಾರದ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು.

ರೈತರಿಂದ ಕಾಮಗಾರಿಗೆ ಅಡ್ಡಿ: ಶಾಸಕರ ಭರವಸೆ ನಂಬಿದ ಉದ್ದೂರು ಮತ್ತು ತಮ್ಲಾಪುರ ಗ್ರಾಮಸ್ಥರು ರಸ್ತೆ ನಿರ್ಮಾಣಕ್ಕೆ ಅಡಚಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಹಾಗಾಗಿ ನವೆಂಬರ್‌ – ಡಿಸೆಂಬರ್‌ ನಲ್ಲಿ ಕಾಮಗಾರಿ ಭರದಿಂದ ನಡೆದಿತ್ತು. ಆದರೆ ರಸ್ತೆ ನಿರ್ಮಾಣವಾದ ನಂತರ ನಮಗೆ ಭೂ ಪರಿಹಾರ ಸಿಗುವುದು ಕಷ್ಟ ಎಂದು ಭಾವಿಸಿದ ಉದ್ದೂರು ಮತ್ತು ತಮ್ಲಾಪುರ ಗ್ರಾಮಸ್ಥರು ರಸ್ತೆ ನಿರ್ಮಾಣ ಕಾಮಗಾರಿಗೆ ತಡೆ ಯೊಡ್ಡಿದ ಪರಿಣಾಮ ಈಗ ಕಾಮಗಾರಿ ಸಂಪೂರ್ಣ ಸ್ಥಗಿತವಾಗಿದೆ. ರಸ್ತೆಯ ಒಂದು ಬದಿಯಲ್ಲಿ ಜೆಸಿಬಿ ಯಂತ್ರಗಳ ಮೂಲಕ ಚರಂಡಿಯನ್ನು ನಿರ್ಮಿಸಿದ ಮಣ್ಣನ್ನೇ ರಸ್ತೆಗೆ ಎಳೆದು ಸಮತಟ್ಟು ಮಾಡಿದ್ದರಿಂದ ರಸ್ತೆ ರೂಪುಗೊಂಡಿದೆ. ಆದರೆ ಒಂದು ಭಾಗದಲ್ಲಿ ಚರಂಡಿ ನಿರ್ಮಿಸಿಲ್ಲ.

ರಸ್ತೆ ದೂಳಮಯ: ಒಂದೆರಡು ವಾರಗಳ ಕಾಲ ರಸ್ತೆ ನಿರ್ಮಾಣದ ಕಾಮಗಾರಿ ನಡೆದು ಒಂದು ಭಾಗದಲ್ಲಿನ ಚರಂಡಿಯ ಮಣ್ಣನ್ನು ರಸ್ತೆಗೆ ಹರಡಿದ್ದರಿಂದ ಮಣ್ಣಿನ ರಸ್ತೆಯಲ್ಲಿ ವಾಹನಗಳು ಪ್ರಯಾಸಪಟ್ಟು ಸಂಚರಿಸಬಹುದು. ಆದರೆ ದೂಳಿನ ಆಪೋಷನ ಮಾಡಿಕೊಂಡೇ ವರ್ತುಲರ ರಸ್ತೆಯಲ್ಲಿ ಉದ್ದೂರು ಮೂಲಕ ವಾಹನಗಳ ಚಾಲಕರು ಬೇಲೂರು ರಸ್ತೆ ತಲಉಪಬಹುದು. ದ್ವಿಚಕ್ರ ವಾಹನ ಸವಾರರಂತೂ ದೂಳಿನಲ್ಲಿ ಮಿಂದುಕೊಂಡೇ ಸಂಚರಿವಂತಾಗಿದೆ. ಲಾರಿಗಳು ಸಂಚರಿಸಿರೆ ರಸ್ತೆ ಬದಿಯಲ್ಲಿ ನಿರ್ಮಾಣವಾಗಿರುವ ಮನೆಗಳಿಗೆ ದೂಳು ಆವರಿಸಿಕೊಳ್ಳುತ್ತದೆ.

ಚರಂಡಿ ಕಾಮಗಾರಿ ಸ್ಥಗಿತ: ತಮ್ಲಾಪುರದ ಸಮೀಪ ದಿಂದ ವರ್ತುಲ ರಸ್ತೆ ಬದಿ ಕಾಂಕ್ರೀಟ್‌ ಚರಂಡಿ ಕಾಮಗಾರಿ ಆರಂಭವಾಗಿತ್ತು. ರಸ್ತೆ ಕಾಮಗಾರಿ ಸ್ಥಗಿತವಾದ ಹಿನ್ನೆಲೆಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿಯೂ ಸ್ಥಗಿತವಾಗಿದೆ.ರಸ್ತೆಯಲ್ಲಿ ಜಲ್ಲಿ ಸಂಗ್ರಹಿಸಿರುವುದನ್ನು ಬಿಟ್ಟರೆ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗುವ ಯಾವ ಸೂಚನೆಯೂ ಕಾಣುತ್ತಿಲ್ಲ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.