ಸಕಲೇಶಪುರ; ಮೇ 5ರಿಂದ ಮೂರು ದಿನ ಕಾಪಿಟೆಕ್‌ ಎಕ್ಸ್ಪೋ: ಮೋಹನ್‌ ಕುಮಾರ್‌

ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣವಿರುತ್ತದೆ

Team Udayavani, May 4, 2022, 3:47 PM IST

ಸಕಲೇಶಪುರ; ಮೇ 5ರಿಂದ ಮೂರು ದಿನ ಕಾಪಿಟೆಕ್‌ ಎಕ್ಸ್ಪೋ: ಮೋಹನ್‌ ಕುಮಾರ್‌

ಸಕಲೇಶಪುರ: ಕಾಫಿ ಕೃಷಿಯಲ್ಲಿ ಕೂಲಿ ಕಾರ್ಮಿಕರ ಕೊರತೆ ಹೋಗಲಾಡಿಸಲು ಯಂತ್ರೋಪಕರಣಗಳನ್ನು ಹೆಚ್ಚು ಕೃಷಿಯಲ್ಲಿ ಬಳಸಬೇಕಾದ ಅಗತ್ಯವಿದ್ದು ಈ ಹಿನ್ನೆಲೆ ಬೆಳೆಗಾರರಿಗೆ ಕೃಷಿ ಯಂತ್ರೋಪಕರಣಗಳ ಕುರಿತು ಮಾಹಿತಿ ನೀಡಲು ಕಾಪಿಟೆಕ್‌ ಎಕ್ಸ್ಪೋ ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ಕೆಜಿಎಫ್ ಅಧ್ಯಕ್ಷ ಎಚ್‌.ಟಿ ಮೋಹನ್‌ ಕುಮಾರ್‌ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮೇ 5, 6 ಮತ್ತು 7ನೇ ತಾರೀಖಿನಂದು ಸಕಲೇಶಪುರ ಪಟ್ಟಣದ ಶ್ರೀನಿವಾಸ ಕನ್ವೆಷನ್‌ ಹಾಲ್‌ನಲ್ಲಿ ವಿವಿಧ
ಬೆಳೆಗಾರರ ಸಂಘಟನೆಗಳ ಸಹಯೋಗದಲ್ಲಿ ಕಾಪಿಟೆಕ್‌ ಎಕ್ಸ್ಪೋವನ್ನು ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ನೂತನ ಆವಿಷ್ಕಾರಗಳ ಬೃಹತ್‌ ಪ್ರದರ್ಶನ ಮೇಳ, ಗೃಹೋಪಯೋಗಿ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ, ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣವಿರುತ್ತದೆ. ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮ ಮೇ 5 ಗುರುವಾರ ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡ ಉದ್ಘಾಟಿಸಲಿದ್ದಾರೆ. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವ ಎಚ್‌ .ಡಿ ರೇವಣ್ಣ, ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಪ್ರಜ್ವಲ್‌ ರೇವಣ್ಣ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎಚ್‌.ಕೆ ಕುಮಾರಸ್ವಾಮಿ, ಬೇಲೂರು ಶಾಸಕ ಲಿಂಗೇಶ್‌, ಶೃಂಗೇರಿ ಶಾಸಕ ರಾಜೇಗೌಡ ಭಾಗವಹಿಸಲಿದ್ದಾರೆ.

6 ಮತ್ತು 7 ರಂದು ಕಾರ್ಯಾಗಾರ: 6ರಂದು ನಡೆಯುವ ಎರಡನೇ ದಿನ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಸಚಿವರಾದ ಡಾ.ಅಶ್ವತ್ಥ್ ನಾರಾಯಣ, ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಗೋಪಾಲಯ್ಯ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಹಾಗೂ ಶಾಸಕ ಸಿ.ಟಿ ರವಿ, ಹಾಸನ ಶಾಸಕ ಪ್ರೀತಂ ಗೌಡ, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ವಿಧಾನ ಪರಿಷತ ಸದಸ್ಯ ಪ್ರಾಣೇಶ್‌ ಸೇರಿದಂತೆ ಇತರ ಗಣ್ಯರು ಆಗಮಿಸಲಿದ್ದಾರೆ.

ಹಾಗೆಯೇ 7ರಂದು ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಉಪ ಸಭಾಪತಿ ಡಾ.ಬಿ.ಎಲ್‌. ಶಂಕರ್‌, ಮಾಜಿ ಮಂತ್ರಿಗಳಾದ ಡಾ.ಮೋಟಮ್ಮ, ಬಿ.ಬಿ. ನಿಂಗಯ್ಯ ಸೇರಿದಂತೆ ಇತರ ಗಣ್ಯರು ಆಗಮಿಸಲಿದ್ದಾರೆ. ಜೊತೆಗ ಪ್ರಸಿದ್ದ ನಟನಟಿಯರು ಆಗಮಿಸಿ ಸಾಂಸ್ಕೃತಿಕ ಕಾರ್ಯ ಕ್ರಮ ನೀಡಲಿದ್ದಾರೆ. ಈ ಹಿನ್ನೆಲೆ ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಎಲ್ಲಾ ಬೆಳೆಗಾರರು ಕುಟುಂಬ ಸಮೇತರಾಗಿ ಆಗಮಿಸಿ, ಹೆಚ್ಚಿನ ಜನಸಂಖ್ಯೆಯಲ್ಲಿ ಭಾಗವಹಿಸಿ ಎಂದರು.

ಕೆಜಿಎಫ್ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ಅರೇಹಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಮಂಜುನಾಥ್‌ ಶೆಟ್ಟಿ, ಕೆಜಿಎಫ್ ನಿರ್ದೇಶಕ ಮಲ್ಲಿಕಾರ್ಜುನ್‌, ಚಿಕ್ಕಮಗಳೂರು ಬೆಳೆಗಾರ ಮುಖಂಡ ರತೀಶ್‌ ಕುಮಾರ್‌, ಹಾಸನ ಜಿಲ್ಲಾ ಬೆಳೆಗಾರರ ಸಂಘದ ಮಾಜಿ ಖಚಾಂಚಿ ವಿಶ್ವನಾಥ್‌ ನಾಯಕ್‌ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.