ಇಂದಿನಿಂದ ಬೀದಿ ಬದಿ ವ್ಯಾಪಾರ ಬಂದ್‌

Team Udayavani, Mar 14, 2020, 4:03 PM IST

hasan-tdy-1

ಹೊಳೆನರಸೀಪುರ: ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವುದನ್ನು ತಪ್ಪಿಸುವ ಸಲುವಾಗಿ ಪಟ್ಟಣದಲ್ಲಿನ ಬೀದಿ ಬದಿ ವ್ಯಾಪಾರಿಗಳು ಶುಕ್ರವಾರ ದಿಂದ ವ್ಯಾಪಾರ ವಹಿವಾಟು ನಿಲ್ಲಿಸಿ ತಾಲೂಕು ಆಡಳಿತದ ಜೊತೆಯಲ್ಲಿ ಕೈಜೋಡಿಸ ಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಸಿ.ಬಸವರಾಜು ಮನವಿ ಮಾಡಿದರು.

ಪುರಸಭೆ ಸಭಾಂಗಣದಲ್ಲಿ ಪಟ್ಟಣದ ಬೀದಿ ಬದಿ ವ್ಯಾಪಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಕೊರಾನಾ ಸಾಂಕ್ರಮಿಕ ರೋಗ ಬೀದಿ ಬದಿಯಲ್ಲಿ ಮಾರಾಟ ಮಾಡುವ ತಿಂಡಿ ತಿನಿಸು ಗಳಿಂದಲೂ ಹರಡುವ ಸಾಧ್ಯತೆ ಅಧಿಕ ವಾಗಿರುವುದರಿಂದ ವ್ಯಾಪಾರಿಗಳು ತಮ್ಮೊಂದಿಗೆ ಸಹಕಾರ ನೀಡುವಂತೆ ಮನವಿ ಮಾಡಿ, ಜಿಲ್ಲೆಯಲ್ಲಿ ಇಂಥ ರೋಗದ ಲಕ್ಷಣಗಳು ಇಲ್ಲವಾಗಿದ್ದರೂ ಮುಂಜಾಗ್ರತೆಯಿಂದ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದರು.

ತಾವುಗಳು ನಮ್ಮೊಂದಿಗೆ ನಾಲ್ಕಾರು ದಿನಗಳು ಸಹಕರಿಸಿ ಅನಂತರ ಮುಂದಿನ ಪರಿಸ್ಥಿತಿ ನೋಡಿ ಕೊಂಡು ತಿಂಡಿ ತಿನಿಸು ಗಳ ಬೀದಿ ಬದಿ ವ್ಯಾಪಾರ ಮಾಡಬೇಕೆ ಬೇಡವೇ ಎಂದು ತೀರ್ಮಾನಿಸೋಣ. ಅದಕ್ಕಾಗಿ ತಾವುಗಳು ನಮ್ಮೊಂದಿಗೆ ಸಹಕಾರದ ಹಸ್ತ ನೀಡಬೇಕೆಂದು ಮನವಿ ಮಾಡಿದ ಅವರು ಶುಕ್ರವಾರದಿಂದ ಪ್ರಾಥಮಿಕ ಶಾಲೆ ಮಕ್ಕಳಿಗೆ ರಜೆ ಘೋಷಣೆ ಮಾಡುತ್ತಿದೆ ಎಂಬ ಮಾಹಿತಿ ನೀಡಿದರು. ಪುರಸಭೆ ಪರಿಸರ ಎಂಜಿನಿಯರ್‌ ಅಶ್ವಿ‌ನಿ ಮಾತನಾಡಿ, ಈ ಸಾಂಕ್ರಾಮಿಕ ರೋಗ ಎಲ್ಲಡೆ ಹರಡುತ್ತಿರುವುದರಿಂದ ಬೀದಿ ಬದಿಯಲ್ಲಿನ ವ್ಯಾಪಾರಿಗಳು ಶುಕ್ರವಾರದಿಂದಲೇ ಕೆಲವು ದಿನಗಳು ವ್ಯಾಪಾರ ಮಾಡುವು ದನ್ನು ಕೈಬಿಟ್ಟು ಪುರಸಭೆಯೊಂದಿಗೆ ಸಹಕಾರದ ಹಸ್ತ ನೀಡಬೇಕೆಂದು ಮನವಿ ಮಾಡಿದರು.

ಕೆಲವು ವ್ಯಾಪಾರಿಗಳು ತಾವು ಹಣ್ಣಿನ ವ್ಯಾಪಾರಿಯಾಗಿದ್ದು ಲಕ್ಷಾಂತರ ರೂ. ಬಂಡವಾಳ ಹಾಕಿ ಹಣ್ಣುಗಳು ಬಂದಿದೆ, ಅವುಗಳನ್ನು ಮಾರಾಟ ಮಾಡುವುದು ಬೇಡವೆಂದರೆ ಹೇಗೆ? ಎಂಬ ಪ್ರಶ್ನೆಗೆ ಉತ್ತರಿಸಿದ ಪರಿಸರ ಎಂಜಿನಿಯರ್‌ ಹಣ್ಣಿನ ವ್ಯಾಪಾರ ಮಾಡಬೇಡಿ ಎಂದು ಹೇಳುತ್ತಿಲ್ಲ, ಆದರೆ ಅವುಗಳನ್ನು ಕತ್ತರಿಸಿ ಮಾರಾಟ ಮಾಡುವುದು ಬೇಡಿ ಹುಂಡಿಯಾಗಿ ಹಣ್ಣು ಗಳನ್ನು ಮಾರಾಟ ಮಾಡಿಕೊಳ್ಳಿ, ತಮಗೆ ನಮ್ಮ ಈ ನಿರ್ಧಾರದಿಂದ ಬೇಸರ ಉಂಟಾಗಿದೆ ಎಂಬ ಅಂಶ ನಮಗೂ ಅರಿವಿದೆ. ಆದರೆ ಈ ಎಲ್ಲ ಮಾನವೀಯತೆ ಮಧ್ಯೆ ಪ್ರತಿಯೊಬ್ಬರ ಪ್ರಾಣವನ್ನು ಕಾಪಾಡುವುದು ನಮ್ಮಗಳೆಲ್ಲರ ಕರ್ತವ್ಯವಾಗಬೇಕು. ಆದ್ದರಿಂದ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ಬೇಯಿಸಿ ಮಾಡುವ ಪದಾರ್ಥಗಳನ್ನು ಖಂಡಿತವಾಗಿ ಮಾರಾಟ ಮಾಡುವುದು ಬೇಡ. ಈ ನಿರ್ಧಾರದಿಂದ ಸಾಂಕ್ರಾಮಿಕ ರೋಗ ತಡೆಗಟ್ಟಲು ಸಾಧ್ಯವಾದರೆ ಅದೇ ನಾವು ನೀವುಗಳು ಸಮಾಜಕ್ಕೆ ನೀಡುವ ಬಳುವಳಿ ಆಗಿದೆ ಎಂದರು.

ತುರ್ತು ಸಭೆಯಲ್ಲಿ ಪಟ್ಟಣದ ನೂರಾರು ಮಂದಿ ಬೀದಿ ಬದಿ ವ್ಯಾಪಾರಸ್ಥರು ಆಗಮಿಸಿ ಪುರಸಭೆ ಅಧಿಕಾರಿಗಳು ನೀಡಿದ ಸೂಚನೆಯನ್ನು ಪರಿಪಾಲಿಸು ವುದಾಗಿ ತಿಳಿಸಿ ನಿಮ್ಮೊಂದಿಗೆ ನಾವುಗಳು ಕೈಜೋಡಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.