ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಿ
Team Udayavani, Jun 24, 2020, 7:20 AM IST
ಹಾಸನ: ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಎಲ್ಲ ತಾಲೂಕುಗಳ ತಹಶೀಲ್ದಾರರಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಭೆಯಲ್ಲಿ ಮಾತನಾಡಿದರು.
ಎಲ್ಲ ಗ್ರಾಮಗಳಿಗೆ ಪೈಪ್ಲೈನ್ ಮೂಲಕ ನೀರು ಪೂರೈಕೆ ಮಾಡಬೇಕು. ತುರ್ತು ಅಗತ್ಯವಿರುವ ಗ್ರಾಮಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಸಬೇಕು ಎಂದು ನಿರ್ದೇಶನ ನೀಡಿದರು. ಹಿಂಗಾರು, ಮುಂಗಾರು ಹಾಗೂ ಬೇಸಿಗೆ ಬೆಳೆಗಳ ಸಮೀಕ್ಷೆ ನಡೆಸಿ ರೈತರು ಬೆಳೆಯುವ ಬೆಳೆಗಳ ಬಗ್ಗೆ ಪೂರಕ ಮಾಹಿತಿ ನೀಡಬೇಕು ಮತ್ತು ಬೆಳೆದ ಬೆಳೆಗಳ ಕುರಿತು ಮಾಹಿತಿ ಸಂಗ್ರಹಿಸಬೇಕು.
ಪ್ರಕೃತಿ ವಿಕೋಪದಡಿ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡಬೇಕು. ಗಾಳಿ ಮಳೆಗೆ ಶೇ.30ಕ್ಕಿಂತ ಹೆಚ್ಚಿನ ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ರುದ್ರ ಭೂಮಿ ಗುರುತಿಸಿ. ಇಲ್ಲದೇ ಇರುವ ಕಡೆಗಳಲ್ಲಿ ಖಾಸಗಿ ಜಮೀನು ಖರೀದಿಸಿ ಈ ಉದ್ದೇಶಕ್ಕೆ ಮೀಸಲಿರಿಸಬೇಕು.
ಬಾಕಿ ಉಳಿದಿರುವ ಭೂ ಸ್ವಾಧೀನ ಸ್ಥಳ ಶೀಘ್ರವಾಗಿ ಇಂಡೀಕರಣಗೊಳಿಸಿ ಎಂದು ನಿರ್ದೇಶಿಸಿದರು. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಸರ್ಕಾರಿ ಕಟ್ಟಡಗಳು ಹಾಗೂ ಶಾಲಾ ಕಟ್ಟಡಗಳ ಕಾಮಗಾರಿಗಳಿಗೆ ಕಾರ್ಯಪಾಲಕ ಅಭಿಯಂತರರು ಭೇಟಿ ನೀಡಿ ಪರಿಶೀಲಿಸಿ ತುರ್ತಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಉಪವಿಭಾಗಾಧಿಕಾರಿಗಳಾದ ಡಾ.ನವೀನ್ ಭಟ್, ಗಿರೀಶ್ ನಂದನ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ