ಆ. 15ರಂದು ಪ್ಲಾಸ್ಟಿಕ್‌ ಮುಕ್ತ ಪಟ್ಟಣ ಘೋಷಣೆ

ಜೂ. 1ರಿಂದ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಲು ಉಪವಿಭಾಗಾಧಿಕಾರಿ ನಾಗರಾಜು ಸೂಚನೆ

Team Udayavani, May 18, 2019, 3:16 PM IST

hasan-tdy-2..

ಹೊಳೆನರಸೀಪುರ ಪುರಸಭೆ ಸಭಾಂಗಣದಲ್ಲಿ ನಡೆದ ಪ್ಲಾಸ್ಟಿಕ್‌ ನಿಷೇಧ ಕುರಿತ ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ್‌ ಶ್ರೀನಿವಾಸ್‌ ಮಾತನಾಡಿದರು. ಉಪ ವಿಭಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೇರಿದಂತೆ ಸಾರ್ವಜನಿಕರಿದ್ದರು.

ಹೊಳೆನರಸೀಪುರ: ಪಟ್ಟಣವನ್ನು ಆಗಸ್ಟ್‌ 15 ರಂದು ಪ್ಲಾಸ್ಟಿಕ್‌ ಮುಕ್ತ ಪಟ್ಟಣದ ಎಂದು ಘೋಷಣೆ ಮಾಡಲಾಗುತ್ತಿದ್ದು, ಅದಕ್ಕಾಗಿ ಜೂನ್‌ ಒಂದರಿಂದ ಪಟ್ಟಣದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸುವ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಪಟ್ಟಣದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಪರಿಸರಕ್ಕೆ ತೀವ್ರ ದಕ್ಕೆ ಉಂಟಾಗಿದೆ. ಆದ್ದರಿಂದ ಶನಿವಾರದಿಂದಲೇ ಪ್ಲಾಸ್ಟಿಕ್‌ ನಿಷೇಧಕ್ಕೆ ಚಾಲನೆ ನೀಡಲು ಬಂದಿರುವುದಾಗಿ ತಿಳಿಸಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಸಮಾಜದ ಮೇಲೆ ತೀವ್ರವಾದ ಪರಿಣಾಮ ಬೀರಿದ್ದು ಪ್ಲಾಸ್ಟಿಕ್‌ ತಡೆಗಟ್ಟಲು ಕಾನೂನಿನ ಕ್ರಮದ ಜೊತೆಗೆ ಸಮಾಜದ ಪ್ರತಿಯೊಬ್ಬರು ಸಹ ಕಟಿಬದ್ಧರಾಗಿ ನಿಷೇಧ ಜಾರಿಗೆ ತರುವಲ್ಲಿ ಕೈಜೋಡಿಸುವಂತೆ ಕೋರಿದರು.

ಜೂನ್‌ ಒಂದರಿಂದ ಪಟ್ಟಣದಲ್ಲಿ ಶಾಶ್ವತವಾಗಿ ಪ್ಲಾಸ್ಟಿಕ್‌ ಮುಕ್ತಗೊಳಿಸಲು ತಾಲೂಕು ಆಡಳಿತ ಹತ್ತು ತಂಡಗಳನ್ನು ರಚಿಸಿ ನಿತ್ಯವೂ ಪಟ್ಟಣದಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವ ಮತ್ತು ಅದನ್ನು ಉಪಯೋಗಿಸುವ ವರ್ತಕರ ಅಂಗಡಿಗಳ ಮೇಲೆ ದಾಳಿ ನಡೆಸಲಾಗುವುದು ಅದಕ್ಕಾಗಿ ಈಗಾಗಲೇ ತಂಡಗಳನ್ನು ರಚಿ ಸಿದ್ದು, ಪ್ರತಿ ತಂಡದಲ್ಲಿ ಸರ್ಕಾರಿ ಇಲಾಖೆಯ ಒರ್ವ ಅಧಿಕಾರಿ , ಪುರಸಭೆ ಅಧಿಕಾರಿ ಮತ್ತಿತರರು ಇರಲಿದ್ದಾರೆ ಎಂದರು.

ಸಭೆಯಲ್ಲಿ ಹಾಜರಿದ್ದ ತಾಲೂಕು ವರ್ತಕರ ಸಂಘದ ಕಾರ್ಯದರ್ಶಿ ಮಾತನಾಡಿ, ಈ ಹಿಂದೆ ಪುರಸಭೆ ಮುಖ್ಯಾಧಿ ಕಾರಿ ಗಳು ಮತ್ತಿತರರು ಕರೆದಿದ್ದ ಸಭೆಯಲ್ಲಿ ವರ್ತಕ ಸವ ುುದಾಯದ ಮುಖಂಡುರಿದ್ದು, ಆ ಸಭೆಯಲ್ಲಿ ಪ್ಲಾಸ್ಟಿಕ್‌ ನಿಷೇಧ ಕುರಿತ ಚರ್ಚೆಯಲ್ಲಿ ಏಕಾಏಕಿ ಪ್ಲಾಸ್ಟಿಕ್‌ ನಿಷೇಧ ಮಾಡುವುದು ಬೇಡ ಜೂನ್‌ ಒಂದರವರೆಗೆ ವರ್ತಕರಿಗೆ ತಿಳಿ ಹೇಳಿ ಪ್ಲಾಸ್ಟಿಕ್‌ ಬಳಕೆ ಮತ್ತು ವ್ಯಾಪಾರ ಮಾಡುವುದು ಬೇಡೆವೆಂದು ಅರಿವು ಮೂಡಿಸುತ್ತೇವೆ ಎಂದರು.

ಅದಕ್ಕೆ ಸಹಮತ ವ್ಯಕ್ತ ಪಡಿಸಿದ ಉಪವಿಭಾಗಾಧಿಕಾರಿ ಡಾ. ಎಚ್.ಎಲ್.ನಾಗರಾಜು ಇದಕ್ಕೆ ಬೇಕಾದ ಕಾರ್ಯಕ್ರಮಗ ಳನ್ನು ಹಮ್ಮಿಕೊಂಡು ಸಾರ್ವಜನಿಕರು ಮತ್ತು ವರ್ತಕರುಗಳಿಗೆ ಅರಿವು ಮೂಡಿಸಲು ವರ್ತಕರ ಸಂಘ ಸಹಕರಿಸುವಂತೆ ತಿಳಿಸಿದರು.

ಈ ಸಭೆಗೆ ಕೇವಲ ಒಂದೇ ಒಂದು ವರ್ತಕ ಸಂಘದ ಹಾಜ ರಾತಿ ಇದೆ, ಆದರೆ ಪಟ್ಟಣದ ಇನ್ನು ಮೂರು-ನಾಲ್ಕು ಸಂಘ ಗಳಿದ್ದು, ಅವುಗಳನ್ನು ಈ ನಿಷೇಧ ಕಾರ್ಯಕ್ರಮಕ್ಕೆ ಸೇರ್ಪಡೆ ಮಾಡಿಕೊಳ್ಳುವುದರಿಂದ ಪ್ಲಾಸ್ಟಿಕ್‌ ನಿಷೇಧದ ಕಾರ್ಯಕ್ರಮ ಸಫಲತೆ ಕಾಣಲು ಸಾಧ್ಯವಿದೆ ಎಂದು ಸಭೆ ನಿರ್ಧರಿಸಿತು.

ಸಾರ್ವಜನಿಕರುಗಳು ತಮ್ಮಲ್ಲಿನ ಅನಿಸಿಕೆಗಳನ್ನು ವ್ಯಕ್ತ ಪಡಿಸಿ ಪ್ಲಾಸ್ಟಿಕ್‌ ನಿಷೇಧಕ್ಕೆ ಮೊದಲು ಅದಕ್ಕೆ ಪರ್ಯಾಯ ವ್ಯವಸ್ಥೆ ಬಗ್ಗೆ ತೀವ್ರವಾಗಿ ಚರ್ಚೆ ನಡೆಯಿತು. ಉಪವಿಭಾಧಿಕಾರಿ ಎಚ್.ಎಲ್.ನಾಗರಾಜು ಅವರೊಂದಿಗೆ ಆಗಮಿಸಿದ್ದ ಅಧಿಕಾರಿಗಳು ಪ್ಲಾಸ್ಟಿಕ್‌ಗೆ ಪರ್ಯಾಯÊಾಗಿ ಬೇಕಾದ ಸಲಕರಣೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ವರ್ತಕರ ಸಂಘದ ಅಧ್ಯಕ್ಷ ಕೆ. ಶ್ರೀಧರ್‌, ತಾಲೂಕು ಸ್ವಾಮಿ ವಿವೇಕಾನಂದ ಯುವ ವೇದಿಕೆ ಅಧ್ಯಕ್ಷ ಎಂ.ಎಂ.ಎ.ರಹೆಮಾನ್‌ ಸೇರಿದಂತೆ ಪಟ್ಟಣದ ಬೆರ ಳೆಣಿಕೆಯಷ್ಟು ಮಂದಿ ವರ್ತಕರು ಮತ್ತು ವಿವಿಧ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ತಾಲೂಕು ವೈದ್ಯಾಧಿಕಾರಿ ಎಚ್.ಎನ್‌.ರಾಜೇಶ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Persistent attacks by more than thirty-two elephants

ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಘಟನೆಯಲ್ಲಿ ಓರ್ವ ಸಾವು 6 ಮಂದಿಗೆ ಗಾಯ „ ಆರೋಪಿ ನವೀನ್‌ ಬಂಧನ

ಬುದ್ಧಿ ಹೇಳಿದಕ್ಕೆ ಕಾರು ಹತ್ತಿಸಿ ಕೊಂದ!

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

Sakleshpur: Destroy paddy crop for forest attack

ಸಕಲೇಶಪುರ: ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.