ಸೆ.1ರಿಂದ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆ ನಿಷೇಧ


Team Udayavani, Aug 25, 2019, 12:16 PM IST

hasan-tdy-1

ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್‌ ಬಿ.ಅಡಿ, ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದರು.

ಹಾಸನ: ಜಿಲ್ಲೆಯಲ್ಲಿ ಸೆ.1 ರಿಂದಲೇ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬ್ಯಾಗುಗಳ ಬಳಕೆಯನ್ನು ನಿಷೇಧಿಸಬೇಕು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್‌ ಬಿ.ಅಧಿಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ನಗರ ಪಟ್ಟಣಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ ಕಟ್ಟುನಿಟ್ಟಾಗಿ ಜಾರಿಯಾಗಿದೆ. ಆದರೆ ಹಾಸನ ನಗರ ಮತ್ತು ಜಿಲ್ಲೆಯಲ್ಲಿ ಮಾತ್ರ ಇನ್ನೂ ಆಗಿಲ್ಲ. ಸೆ.1 ರಿಂದ ಪ್ಲಾಸ್ಟಿಕ್‌ ಬಾಗುಗಳ ಬಳಕೆ ನಿಷೇಧವನ್ನು ಕಟ್ಟು ನಿಟ್ಟಾಗಿ ಜಾರಿ ಗೊಳಿಸುವುದಾಗಿ ಹಾಸನ ನಗರಸಭೆ ಒಪ್ಪಿಕೊಂಡಿದೆ ಎಂದು ಹೇಳಿದರು.

ಪ್ಲಾಸ್ಟಿಕ್‌ ಬ್ಯಾಗ್‌ ಬಳಸುವ ವ್ಯಾಪಾರಿಗಳು, ಅಂಗಡಿಗಳ ಮಾಲೀಕರಿಗೆ ಭಾರೀ ಪ್ರಮಾಣದ ದಂಡ ವಿಧಿಸುವುದರ ಜೊತೆಗೆ ಟ್ರೇಡ್‌ ಲೈಸೆನ್ಸ್‌ ರದ್ದು ಮಾಡಿ ಕಾನೂನು ಕ್ರಮಗಳನ್ನೂ ಕೈಗೊಳ್ಳಲು ಸೂಚಿಸಲಾಗಿದೆ. ವ್ಯಾಪಾರಿಗಳಿಗಷ್ಟೇ ಆಲ್ಲ. ಪ್ಲಾಸ್ಟಿಕ್‌ ಬ್ಯಾಗ್‌ ಬಳಸುವ ಗ್ರಾಹಕರಿಗೂ ದಂಡ ವಿಧಿಸಲು, ಹಾಸನ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಹಸಿ, ಒಣ ಕಸ ವಿಂಗಡಣೆ ಕಡ್ಡಾಯ: ಸೆ.1 ರಿಂದಲೇ ಮನೆಗಳಿಂದ ಕಸ ಸಂಗ್ರಹಿಸುವಾಗ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ಸಂಗ್ರಹಿಸ ಬೇಕು. ಹಸಿ ಕಸವನ್ನು ಪ್ರತಿದಿನವೂ ಮನೆಗಳಿಂದ ಸಂಗ್ರಹಿಸಬೇಕು . ಒಣ ಕಸವನ್ನು ವಾರದಲ್ಲಿ ಮೂರು ದಿನ ಸಂಗ್ರಹಿಸಬೇಕು ಒಣ ಕಸದಲ್ಲಿ ಪೇಪರ್‌, ಮೆಟಲ್ ಸೇರಿದಂತೆ ಗಟ್ಟಿ ಕಸವನ್ನು ವಿಂಗಡಿಸಬೇಕು. ಡೈಪರ್‌, ಸ್ಯಾನಿಟರಿ ಪ್ಯಾಡ್‌, ಮೆಡಿಕಲ್ ವೇಸ್ಟ್‌ನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಈ ಪ್ರಕ್ರಿಯೆ ಸೆ.1 ರಿಂದಲೇ ಆರಂಭವಾಗಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕಸವನ್ನು ಸಂಸ್ಕರಿಸುವ ಕೆಲಸವನ್ನು ಸ್ಥಳೀಯ ಸಂಸ್ಥೆ ಗಳು ಕಡ್ಡಾಯವಾಗಿ ಮಾಡಬೇಕು. ಹಸಿ ಕಸದಲ್ಲಿ ಉತ್ಪತ್ತಿಯಾಗುವ ಗೊಬ್ಬರವನ್ನು ರೈತರಿಗೆ ಮಾರುಕಟ್ಟೆ ದರಕ್ಕಿಂತ ಶೇ.50 ಕಡಿಮೆ ದರದಲ್ಲಿ ಮಾರಾಟ ಮಾಡಬೇಕೆಂದು ಸೂಚನೆ ನೀಡಲಾಗಿದೆ ಎಂದರು.

ಹಳೇ ಕಟ್ಟಡದ ತ್ಯಾಜ್ಯವನ್ನು ಪರವಾನಗಿ ಪಡೆದ ನಿಗದಿತ ವಾಹನಗಳಲ್ಲಿಯೇ ತುಂಬಿಸಿ ನಿಗದಿಪಡಿಸಿದ ಪ್ರದೇಶದಲ್ಲಿಯೇ ಸುರಿಯಬೇಕು. ಇದು ಕಡ್ಡಾಯ. ಹಳೇ ಕಟ್ಟಡಗಳ ತ್ಯಾಜ್ಯ ಸುರಿಯಲು ಸ್ಥಳವನ್ನು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ನಿವೇಶನ ಮಾಲೀಕರಿಗೆ ದಂಡ: ನಗರ, ಪಟ್ಟಣ ಪ್ರದೇಶಗಳಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟು ಕೊಳ್ಳದೇ ಕಸ ಸುರಿಯಲು ಅವಕಾಶ ಮಾಡಿರುವ ಮಾಲೀಕರಿಗೆ ಭಾರೀ ಪ್ರಮಾಣದ ದಂಡ ವಿಧಿಸಲು ಸೂಚನೆ ನೀಡಲಾಗಿದೆ.

ಸೂಚನೆ ನೀಡಿದ ನಂತರವೂ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದ ಮಾಲೀಕರಿಗೆ ಮೊದಲ ಬಾರಿ 25 ಸಾವಿರ ರೂ. ದಂಡ ಮತ್ತು ಕಾನೂನು ಕ್ರಮಕೈಗೊಳ್ಳಲು ಸ್ಥಳೀಯ ಸಂಸ್ಥೆ ಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಅಕ್ರಂಪಾಷಾ, ಪ್ರಭಾರ ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.