ಬಿಜೆಪಿಗೆ ಎಚ್‌ಡಿಕೆ ಎದಿರೇಟು: ರೇವಣ್ಣ
Team Udayavani, Sep 15, 2018, 6:40 AM IST
ಹಾಸನ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮುಂದಾದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಕ್ಕ ಎದಿರೇಟು ನೀಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್‌ನಲ್ಲಿ ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್‌ನಲ್ಲಿರುವ ಎಲ್ಲ ಗೊಂದಲಗಳನ್ನು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ನಿವಾರಿಸಿ, ಸರ್ಕಾರ ಸುಭದ್ರವಾಗಿ ನಡೆಯುವಂತೆ ನೋಡಿಕೊಳ್ಳಲಿದ್ದಾರೆ.
ಬಿಜೆಪಿಯವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ಆದರೆ, ಬಿಜೆಪಿಯ ಕೆಲವು ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ. ಬಿಜೆಪಿಯವರು ಸರಕಾರ ಅಸ್ಥಿರಗೊಳಿಸಲು ಮುಂದಾದರೆ, ಕುಮಾರಸ್ವಾಮಿ ಅವರು ಅದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ
ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ