ಜಿಲ್ಲೆಯಲ್ಲಿ ಬಿಜೆಪಿಗೆ 4 ಗೆಲುವ

Team Udayavani, Jan 11, 2018, 2:53 PM IST

has.jpg

ಅರಸೀಕೆರೆ: ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಅರಸೀಕೆರೆ ಸೇರಿದಂತೆ ನಾಲ್ಕಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಜಯ ಸಾಧಿಸಲಿದ್ದಾರೆಂದು ವಿಧಾನ ಪರಿಷತ್‌ ಸದಸ್ಯ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಚೆಲ್ಲಾಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಕಸಬಾ ಹೋಬಳಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ,
ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ರಾಜ್ಯದ ಚುನಾವಣೆ ಫ‌ಲಿತಾಂಶ ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಇಲ್ಲಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರನ್ನು ನಿದ್ದೆಗೆಡಿಸುತ್ತಿದೆ ಎಂದು ಟೀಕಿಸಿದರು.

ಸರ್ಕಾರಿ ಹಣದಲ್ಲಿ ಪ್ರಚಾರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ಕೈಗೊಂಡ ನೋಟ್‌ ಬ್ಯಾನ್‌ ಹಾಗೂ ಜಿಎಸ್‌ಟಿ ತೆರಿಗೆ ಪದ್ಧತಿ ಬಗ್ಗೆ ರಾಜ್ಯದ ಜನರಲ್ಲಿ ತಪ್ಪು ಭಾವನೆ ಉಂಟು ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಹುನ್ನಾರ ನಡೆಸುತ್ತಿದೆ. ರಾಜ್ಯ ಸರ್ಕಾರ ಹಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಧನಾ ಸಮಾವೇಶಗಳನ್ನು ಮಾಡುತ್ತಾ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿರುವುದು ಖಂಡನೀಯ. ರಾಜ್ಯದ ಜನತೆ ಮತದಾನದ ಮೂಲಕ ತಕ್ಕ ಉತ್ತರ ನೀಡಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ
ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಡೆಸಿರುವ ವ್ಯಾಪಕ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ನೀತಿಯನ್ನು ವಿರೋಧಿಸಿ ರಾಜ್ಯದ ಜನತೆ ಬಿಜೆಪಿ ಪಕ್ಷವನ್ನು ಬೆಂಬಲಿಸಲಿದ್ದಾರೆ. ಆದಕಾರಣ ಹಾಸನ ಮತ್ತು ಚಾಮರಾಜ ನಗರ ಜಿಲ್ಲೆಯ ಉಸ್ತುವಾರಿಯನ್ನು ತಾವು ವಹಿಸಿಕೊಂಡಿದ್ದು, ಈ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪ್ರತಿ ಕ್ಷೇತ್ರಗಳಲ್ಲಿ ಬೂತ್‌ಮಟ್ಟದ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತಿದೆ. ಪಕ್ಷದ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಪರಿವರ್ತನಾ ಯತ್ರೆಯೂ ಮುಗಿಯುತ್ತಿದ್ದಂತೆ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

7 ಕ್ಷೇತ್ರದಲ್ಲಿ ಸ್ಪರ್ಧೆ: ಹಾಸನ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಅರಸೀಕೆರೆ ವಿಧಾನಸಭಾ ಕ್ಷೇತ್ರ ಸೇರಿದಂತೆ ನಾಲ್ಕೈದು ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ವಿಜಯ ಸಾಧಿಸುವ
ದೃಢ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕರಾದ ಎ.ಎಸ್‌.ಬಸವರಾಜು, ಕೆ.ಪಿ.ಪ್ರಭುಕುಮಾರ್‌, ಹಿರಿಯ ಮುಖಂಡ ಸಿ.ರಾಮಚಂದ್ರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಯೋಗಾ ರಮೇಶ್‌ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ವಕ್ತಾರ ಎನ್‌.ಡಿ.ಪ್ರಸಾದ್‌, ತಾಲೂಕು ಮಾಜಿ ಅಧ್ಯಕ್ಷ ಡಿ.ಬಿ.ಗಂಗಾಧರ್‌, ಸಿ.ರಾಮಚಂದ್ರ ಅಗ್ಗುಂದ ಶಕ್ತಿ ಕೇಂದ್ರದ ದುಮ್ಮೇನಹಳ್ಳಿ ಲೋಕೇಶ್‌, ಜಿಪಂ ಮಾಜಿ ಸದಸ್ಯ ಕೃಷ್ಣನಾಯ್ಕ, ನಗರಾಧ್ಯಕ್ಷ ಮನೋಜ್‌ ಕುಮಾರ್‌, ಕಾರ್ಯದರ್ಶಿ ರವಿಕುಮಾರ್‌, ವಿಜಯಕುಮಾರ್‌, ಲಾಳನಕೆರೆ ಯೋಗೀಶ್‌ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.