ಅಪೌಷ್ಟಿಕತೆ ನಿವಾರಣೆಗೆ ಮಾತೃಪೂರ್ಣ ಯೋಜನೆ ಸಹಕಾರಿ
Team Udayavani, Mar 17, 2020, 3:00 AM IST
ಸಕಲೇಶಪುರ: ಮಹಿಳೆಯರಲ್ಲಿ ರಕ್ತ ಹೀನತೆ ಮತ್ತು ಅಪೌಷ್ಟಿಕತೆ ನಿವಾರಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾತೃಪೂರ್ಣ ಯೋಜನೆ ಮತ್ತು ಪೋಷಣ್ ಕಾರ್ಯಕ್ರಮದಡಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ದಿಲೀಪ್ ಹೇಳಿದರು.
ತಾಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿಯಿಂದ ಮೇಳಳ್ಳಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಮಹಿಳಾ ಗ್ರಾಮ ಸಭೆಯಲ್ಲಿ “ಮಹಿಳೆ ಮತ್ತು ಸರ್ಕಾರದ ಯೋಜನೆಗಳು’ ವಿಷಯ ಕುರಿತು ಮಾತನಾಡಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಅಡಿಯಲ್ಲಿ ಅಂಗನವಾಡಿಗಳ ಮುಖಾಂತರ ಮೊಟ್ಟೆ ಹೆಸರುಕಾಳು, ಮೊಳಕೆ ಕಟ್ಟಿದ ಕಾಳು ಸೇರಿದಂತೆ ಬಿಸಿಯೂಟ ನೀಡಲಾಗುತ್ತಿದೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು ಎಂದರು.
ಸೌಲಭ್ಯದ ಬಗ್ಗೆ ಮಾಹಿತಿ: ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಹರೀಶ್ ಮಾತನಾಡಿ, ಗ್ರಾಪಂಚಾಯಿತಿಯಿಂದ ಉದ್ಯೋಗ ಖಾತ್ರಿ ಯೋಜನೆ, ವಸತಿ ಯೋಜನೆ, ಆಯುಷ್ಮಾನ್ ಕಾರ್ಡ್ ವಿತರಣೆ, ದಿವ್ಯಾಂಗರಿಗೆ ನೀಡುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಮಹಿಳೆಯರಿಗೆ ಪಂಚಾಯತ್ ರಾಜ್ ಕಾಯಿದೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸಲು ಶೇ.50ರಷ್ಟು ಮೀಸಲಾತಿ ನೀಡಲಾಗಿದೆ.
ಗ್ರಾಮ ಪಂಚಾಯಿತಿಯಿಂದ ನಡೆಯುವ ವಾರ್ಡ್ ಸಭೆಗಳು, ಗ್ರಾಮ ಸಭೆಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದಲೇ ಸರ್ಕಾರ ಮಹಿಳಾ ಗ್ರಾಮ ಸಭೆಗಳನ್ನು ನಡೆಸುತ್ತಿದೆ. ಆಯಾ ಗ್ರಾಮದ ಮಹಿಳೆಯರು ಮೂಲ ಸೌಕರ್ಯಗಳ ಬಗ್ಗೆ ಪಂಚಾಯಿತಿ ಆಡಳಿತದ ಗಮನಕ್ಕೆ ತಂದು ಸೌಲಭ್ಯ ಪಡೆಬೇಕು ಎಂದರು.
ಮಹಿಳಾ ದೌರ್ಜನ್ಯ ಕಾಯಿದೆ ಹಾಗೂ ಪೋಕ್ಸೋ ಕಾಯಿದೆ ಬಗ್ಗೆ ನ್ಯಾಯವಾದಿ ಜ್ಯೋತಿ ರಾಜ್‌ಕುಮಾರ್ ಮಾಹಿತಿ ನೀಡಿದರು. ಕುಂಬರಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಘಟಕದ ವೈದ್ಯಾಧಿಕಾರಿ ಡಾ. ಮಂಜುನಾಥ್ ಮಹಿಳೆಯರ ಆರೋಗ್ಯದ ಕುರಿತು ಮಾತನಾಡಿದರು.
ಗರ್ಭಿಣಿಯರಿಗೆ ಸೀಮಂತ: ಹೆಬ್ಬಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ 8 ಮಂದಿ ಗರ್ಭಿಣಿಯರಿಗೆ ಸೀಮಂತ ಕಾರ್ಯ ನಡೆಸಲಾಯಿತು. ಕೂಲಿ ಕಾರ್ಮಿಕ ಕುಟುಂಬದ ಮಹಿಳೆಯರಿಗೆ ಸರ್ಕಾರದ ಸೌಲಭ್ಯಗಳನ್ನು ಸ್ವಯಂ ಪ್ರೇರಿತರಾಗಿ ಒದಗಿಸುತ್ತಿರುವ ಸಮಾಜ ಸೇವಕಿ ಶಾಶ್ವತ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮಕ್ಕೂ ಮೊದಲು ಮಹಿಳೆಯರಿಗೆ ಆಟೋಟ ಸ್ಪರ್ಧೆ ಹಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಬಹುಮಾನ ನೀಡಲಾಯಿತು. ಗ್ರಾಪಂ ಅಧ್ಯಕ್ಷೆ ಮೈಮುನಾ, ಉಪಾಧ್ಯಕ್ಷ ವೆಂಕಟೇಶ್, ಅಭಿವೃದ್ಧಿ ಅಧಿಕಾರಿ ಎಚ್.ವಿ. ವತ್ಸಲಾ ಕುಮಾರಿ ಹಾಗೂ ಸದಸ್ಯರು ಇದ್ದರು. ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ