2 ತಿಂಗಳ ನಂತರ ಸಚಿವರ ಅಧ್ಯಕ್ಷತೆಯಲ್ಲಿ ಇಂದು ಸಭೆ

ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ,ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್‌ ಮುಖಾಮುಖೀಯಾಗುವುದು ಅನಿವಾರ್ಯ

Team Udayavani, May 13, 2019, 12:06 PM IST

hasan-tdy-1..

ಹಾಸನ ಜಿಲ್ಲಾ ಪಂಚಾಯಿತಿ ಕಚೇರಿ.

ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಮೇ13 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲೆಯ ಬರಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಸಚಿವ ಎಚ್.ಡಿ.ರೇವಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರು ಮೊದಲ ಬಾರಿಗೆ ಮುಖಾ ಮುಖೀಯಾಗಲಿ ದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎನ್‌.ವಿಜಯಪ್ರಕಾಶ್‌ ಅವರು ಮೊದಲ ಬಾರಿಗೆ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಡೀಸಿ, ಸಚಿವರ ವಾಕ್ಸಮರ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಯವರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವುದು ಸಹಜ. ಆದರೆ ಲೋಕಸಭಾ ಚುನಾವಣೆ ಪ್ರಕ್ರಿಯೆ ಆರಂಭ ವಾದ ನಂತರ ಚುನಾವಣಾ ಆಯೋಗದ ನಿರ್ದೇಶ ನದ ಮೇರೆಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಿಸಿತ್ತು. ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಯಾಗಿ ನೇಮಕವಾದ ನಂತರ ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಆವರಿಗೆ ಮುಜುಗರವಾಗುವಂತೆ ಹಲವು ಬಾರಿ ನಡೆದುಕೊಂಡಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ಬಿಜೆಪಿ ಏಜೆಂಟರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಜಿಲ್ಲೆಯ ಬರಿಪರಿಹಾರ ಕಾರ್ಯಗಳ ನಿರ್ವ ಹಣೆಯಲ್ಲೂ ಜಿಲ್ಲಾಧಿಕಾರಿಯವರು ವಿಫ‌ಲವಾಗಿ ದ್ದಾರೆ ಎಂದು ಸಚಿವ ರೇವಣ್ಣ ಅವರೂ ಜಿಲ್ಲಾಧಿಕಾರಿ ಯವರವ ಮೇಲೆ ಹರಿಹಾಯ್ದು ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಡ ಹೇರಿದ್ದರು. ಈ ನಡುವೆಯೇ ಮೇ13 ರಂದು ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಆವರ ಅಧ್ಯಕ್ಷತೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ಪಾಲ್ಗೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿರುವುದು ಕುತೂಹಲ ಕೆರಳಿಸಿದೆ.

ಅಭಿವೃದ್ಧಿ ಕಾಮಗಾರಿ ಬಗ್ಗೆ ಚರ್ಚೆ: ಕಳೆದ 6 ತಿಂಗಳನಿಂದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾಮಗಾರಿಗಳ ವೇಗದಲ್ಲೂ ಕುಂಠಿತವಾಗಿದೆ. ಲೋಕಸಭಾ ಚುನಾವಣಾ ನೀತಿಸಂಹಿತೆ ಜಾರಿಯಾದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸದಿದ್ದರಿಂದ ಅಧಿಕಾರಿಗಳೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯತ್ತ ಗಮನ ಹರಿಸಿಲ್ಲ. ಈ ಅಂಶಗಳ ಬಗ್ಗೆಯೂ ಶಾಸಕರು ಸಭೆಯಲ್ಲಿ ಪ್ರಸ್ತಾಪ ಮಾಡುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

9-uv-fusion

College Days: ಕಾಲೇಜೆಂಬ ನೆನಪಿನ ದೋಣಿಯಲಿ

new-parli

Lok Sabha, Assembly ಕ್ಷೇತ್ರಗಳ ಪುನರ್ವಿಂಗಡಣೆ: ದಕ್ಷಿಣ ತಕರಾರು ಏನು?ಮಾಹಿತಿ ಇಲ್ಲಿದೆ

8-uv-fusion

UV Fusion: ತುಳುನಾಡಿನ ಹೆಮ್ಮೆ ಕಂಬಳ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.