ಹಾಸನ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ನರಳಾಡಿ ಪ್ರಾಣ ಬಿಟ್ಟ ಸವಾರ
Team Udayavani, Aug 7, 2022, 7:12 PM IST
ಹಾಸನ: ಜಿಲ್ಲೆಯ ಮಳೆ ಮತ್ತು ಗಾಳಿಯ ಅಬ್ಬರ ಮುಂದುವರಿದಿದ್ದು ಗಾಳಿಗೆ ಬೈಕ್ ಮೇಲೆ ಮರ ಬಿದ್ದು ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲೂಕು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (40) ಮೃತ ದುರ್ದೈವಿ.
ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಹರ್ ಫರ್ ತಿರಂಗ: ಕಿಚ್ಚ ಸುದೀಪ್ ಗೆ ಧ್ವಜ ನೀಡಿದ ನಳಿನ್ ಕುಮಾರ್
ಮರದ ಕೆಳಗೆ ಸಿಲುಕಿ ನರಳಾಡಿ ರಂಗಶೆಟ್ಟಿ ಸಾವನ್ನಪ್ಪಿದ್ದಾರೆ. ಬೈಕ್ನಲ್ಲಿ ಚನ್ನರಾಯಪಟ್ಟಣದಿಂದ ತನ್ನ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಮೇಲೆ ಮರ ಬಿದ್ದಿದ್ದು ಮರದಡಿ ಸಿಲುಕಿ ಕೆಲಕಾಲ ಒದ್ದಾಡಿ ಸಾವನ್ನಪ್ಪಿದ್ದಾರೆ.
ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ವ್ಯಕ್ತಿಯ ಶವವನ್ನು ಅಗ್ನಿಶಾಮಕದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ.
ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದೆ.
ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ