ಸರ್ಕಾರದ ನಡೆಯನ್ನು ಕಾದು ನೋಡುವೆ: ರೇವಣ್ಣ


Team Udayavani, Aug 30, 2019, 3:00 AM IST

sarkarda

ಹಾಸನ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದ್ವೇಷದ ರಾಜಕರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಹಾಸನ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಅಡೆ-ತಡೆಯಾವುದಿಲ್ಲ ಎಂಬ ಭಾವನೆಯಿದೆ. ಸ್ವಲ್ಪ ದಿನ ಕಾದು ನೋಡುತ್ತೇವೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲೇ ಶಿವಮೊಗ್ಗ ಜಿಲ್ಲೆ ಮತ್ತು ಶಿಕಾರಿಪುರ ತಾಲೂಕಿಗೆ 2ಸಾವಿರ ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿದರು. ಆದರೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳ ಬಗ್ಗೆಯೂ ಮುಖ್ಯಮಂತ್ರಿಯವರು ಗಮನಹರಿಸಲಿ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ದೇವೇಗೌಡರ ಕುಟುಂಬದವರು ಏನೂ ಮಾಡಲಿಲ್ಲ ಎಂದು ದೂರುತ್ತಲೇ ಬಂದಿದ್ದಾರೆ. ಈಗ ಬಿಜೆಪಿ ಸರ್ಕಾರವಾದರೂ ಉತ್ತರ ಕರ್ನಾಟಕದ ಜಿಲ್ಲೆಗಳನ್ನು ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

ತೋಟಗಾರಿಕೆ ಕಾಲೇಜಿಗೆ ತಡೆ: ಹಾಸನ ತಾಲೂಕಿನ ಸೋಮನಹಳ್ಳಿಯಲ್ಲಿ 63 ಕೋಟಿ ರೂ. ತೋಟಗಾರಿಕೆ ಕಾಲೇಜು ಪ್ರಾರಂಭಿಸಲು ಕಳೆದ ಜು.18 ರಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯಾಗಿರುವುದನ್ನು ತಡೆ ಹಿಡಿದ್ದಾರೆ. ದ್ವೇಷದ ರಾಜಕಾರಣದಿಂದ ಏನೂ ಸಾಧಿಸಲಾಗುವುದಿಲ್ಲ. ಈ ರಾಜ್ಯದ ರಾಜಕಾರಣ ಯಾವ ಸಂದರ್ಭದಲ್ಲಿ ಹೇಗೇಗೆ ಮಗ್ಗಲು ಬದಲಿಸುತ್ತದೆ ಎಂಬುದು ನನಗೆ ಗೊತ್ತಿದೆ.

ಈಗಲೇ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಅನುದಾನ ಕೊಡಿ ಎಂದು ಕೇಳುವುದಿಲ್ಲ. ನಮಗೇನೂ ಆತುರವಿಲ್ಲ. ಈಗ ರಾಜ್ಯದ 12 ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಜನರು ತತ್ತರಿಸಿ ಹೋಗಿದ್ದಾರೆ. ಹಾಸನ ಜಿಲ್ಲೆಯೂ ಸೇರಿದಂತೆ ಮೊದಲು ಪ್ರವಾಹ ಸಂತ್ರಸ್ತರ ಪರಿಹಾರ ಕಾರ್ಯಕಗಳಿಗೆ ಸರ್ಕಾರ ಆದ್ಯತೆ ನೀಡಲಿ. ಆನಂತರ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನ ಹರಿಸಲಿ ಎಂದು ರೇವಣ್ಣ ಅವರು ಸಲಹೆ ನೀಡಿದರು.

ಜಿಲ್ಲೆಯ ಅಭಿವೃದ್ಧಿಯೇ ಗುರಿ: ನನಗಿನ್ನೂ ವಯಸ್ಸಾಗಿಲ್ಲ. ನನಗೆ ವಯಸ್ಸಿದೆ. ಹಾಸನ ಜಿಲ್ಲೆಯನ್ನು ರಾಜ್ಯದಲ್ಲಿಯೇ ನಂ.1 ಮಾದರಿ ಜಿಲ್ಲೆಯಾಗಿ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಗುರಿ. ಹಾಸನ ಜಿಲ್ಲೆಯ ಜನರು ನಮ್ಮ ಕುಟುಂಬಕ್ಕೆ ರಾಜಕೀಯ ಶಕ್ತಿ ನೀಡಿದ್ದಾರೆ. ಅವರ ಋಣ ತೀರಿಸಬೇಕು. ಆ ನಿಟ್ಟಿನಲ್ಲಿ ಹಾಸನ ನಗರ ಸೇರಿದಂತೆ ಹಾಸನ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದರೂ ಪಕ್ಷಪಾತ ಮಾಡದೇ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈಗ ಬಿಜೆಪಿ ಶಾಸಕರು ಅನುದಾನ ತರಲಿ ಎಂದು ಲೇವಡಿ ಮಾಡಿದರು.

ಸವಾಲು ಸ್ವೀಕರಿಸಿರುವೆ: ನಾನು ಇನ್ನು ಹಾಸನ ಜಿಲ್ಲೆಗೆ ಸೀಮಿತವಾಗಿರಲ್ಲ ಎಂದು ಹೇಳಿದ್ದೇನೆ. ರಾಜ್ಯದ ಕನಿಷ್ಠ 5 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ಹೊತ್ತುಕೊಂಡು ಅಲ್ಲಿನ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸುವ ಸವಾಲು ಸ್ವೀಕರಿಸಿದ್ದೇನೆ. ಎಚ್‌.ಡಿ.ಕುಮಾರಸ್ವಾಮಿಯವರ ಹೋರಾಟಕ್ಕೆ ಭುಜ ಕೊಟ್ಟು ರಾಜ್ಯದಲ್ಲಿ ಹೋರಾಟ ಮಾಡುವೆ ಎಂದರು. ರಾಜ್ಯ ಜೆಡಿಎಸ್‌ ಅಧ್ಯಕ್ಷ, ಶಾಸಕ ಎಚ್‌.ಕೆ.ಕುಮಾರಸ್ವಾಮಿ, ವಿಧಾನ ಪರಿಷತ್ತು ಮಾಜಿ ಸದಸ್ಯ ಪಟೇಲ್‌ ಶಿವರಾಂ ಅವರೂ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.