ಜಲಮೂಲ ರಕ್ಷಣೆಗೆ ಮುಂದಾಗಿ: ಪರಮೇಶ್‌


Team Udayavani, Mar 18, 2020, 3:00 AM IST

jalmoola

ಚನ್ನರಾಯಪಟ್ಟಣ: ವಿಶ್ವ ಜಲದಿನ ಹಾಗೂ ವಿಶ್ವ ಭೂದಿನದಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಜಲಮೂಲ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಹಸಿರು ಭೂಮಿ ಪ್ರತಿಷ್ಠಾನ ನಡೆಸಿದ ಜಲ ಸಂಕಷ್ಟದಿಂದ ಜಲ ಸಂಮೃದ್ಧಿಯಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾ.22 ರಂದು ವಿಶ್ವ ಜಲದಿನ ಮಾ.22 ರಂದು ವಿಶ್ವ ಭೂಮಿ ದಿನಾಚರಣೆಯನ್ನು ವಿನೂತನವಾಗಿ ಆಚರಿಸಬೇಕು ಎಂದು ಹೇಳಿದರು.

ಕೆರೆ, ಕಟ್ಟೆ, ಕಲ್ಯಾಣಿ ಸ್ವಚ್ಛಗೊಳಿಸಿ: ತಾಲೂಕು 41 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಲ್ಯಾಣಿ, ಕಟ್ಟೆಗಳ ಸ್ವಚ್ಛತೆ ಹಾಗೂ ಅಭಿವೃದ್ಧಿ ಪಡಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು. ಕೆರೆ, ಕಲ್ಯಾಣಿಗಳ ಪುನಶ್ಚೇತನಕ್ಕೆ ಗ್ರಾಮಗಳ ಸ್ತ್ರೀಶಕ್ತಿ ಸಂಘಗಳು ಹಾಗೂ ಸಂಘ ಸಂಸ್ಥೆಗಳ ನೆರವು ಪಡೆಯಬೇಕು ಎಂದರು.

ನರೇಗಾ ಸದ್ಬಳಕೆಯಾಗಲಿ: ನರೇಗಾ ಮೂಲಕ ಜನಸಂವರ್ಧನೆಗೆ ಯೋಜನೆ ರೂಪಿಸುವುದರಿಂದ ಕೂಲಿ ಕಾರ್ಮಿಕರಿಗೆ ಹಾಗೂ ಜಾಬ್‌ ಕಾರ್ಡ್‌ ಹೊಂದಿರುವವರಿಗೆ ಉದ್ಯೋಗ ಖಾತ್ರಿ ಮೂಲಕ ಕೂಲಿ ಕೆಲಸ ನೀಡಬಹುದಾಗಿದೆ. ಜಿಲ್ಲೆಯಲ್ಲಿ 2.47 ಲಕ್ಷ ಮಂದಿ ಜಾಬ್‌ ಕಾರ್ಡ್‌ದಾರರಿದ್ದಾರೆ, ಇನ್ನು ಎಂಟರಿಂದ ಒಂಬತ್ತು ಲಕ್ಷ ಮಂದಿ ಕೂಲಿ ಕಾರ್ಮಿಕರು ಇದ್ದಾರೆ ಅವರಿಗೆ ವಾರ್ಷಿಕ 100 ದಿವಸ ಕೂಲಿ ಕೊಡಬೇಕಾಗಿದೆ ಎಂದು ಹೇಳಿದರು.

ಹಸಿರುಭೂಮಿ ಪ್ರತಿಷ್ಠಾನದಿಂದ ಬಹುಮಾನ: ಹಾಸನ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಲ ಮರುಪೂರಣ ಯೋಜನೆಯನ್ನು ಉತ್ತಮವಾಗಿ ಮಾಡಿದರೆ ಹಸಿರು ಭೂಮಿ ಪ್ರತಿಷ್ಠಾನದಿಂದ ಬಹುಮಾನ ನೀಡಲಾಗುವುದು. ಜಿಲ್ಲೆಯ ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ತಾಲೂಕು ನೀರಿನ ಸಮಸ್ಯೆ ಹೊಂದಿದೆ ಅಲ್ಲಿನ ಪಿಡಿಒಗಳು ಉತ್ತಮ ಕೆಲಸ ಮಾಡಿ ನಗದು ಬಹುಮಾನ ಪಡೆಯಲಿ ಎನ್ನುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು.

ಸರ್ಕಾರದ ಯೋಜನೆಗಳನ್ನು ಗುರಿ ಸಾಧನೆಗೆ ಮಾತ್ರ ಸೀಮಿತ ಮಾಡುತ್ತಿರುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿ ಯೋಜನೆಗಳು ನಡೆಯುತ್ತಿಲ್ಲ. ಪ್ರತಿ ಮನೆಯಲ್ಲಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ನೀರಿನ ಬಜೆಟ್‌ ತಯಾರು ಮಾಡಿಕೊಳ್ಳುವುದು ಸೂಕ್ತ ಇದರಿಂದ ನೀರಿನ ಮಹತ್ವ ಪ್ರತಿಯೊಬ್ಬರಿಗೂ ತಿಳಿಯಲಿದೆ ಎಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಸಿಇಒ ಮಹೇಶ್‌, ಯೋಜನಾಧಿಕಾರಿ ನಾಗರಾಜು, ಇಒ ಚಂದ್ರಶೇಖರ್‌, ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷ ಅಪ್ಪಾಜಿಗೌಡ, ಸಿ.ಎನ್‌.ಅಶೋಕ, ಗ್ರಾಮ ಪಂಚಾಯಿತಿ ಪಿಡಿಒ, ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಲ ಜಾಗೃತಿ ಮೂಡಿಸಲು ಕ್ರಮ: ಹಸಿರು ಭೂಮಿ ಪ್ರತಿಷ್ಠಾನ ಸಂಸ್ಥೆಯ ಸಂಸ್ಥಾಪಕಿ ರೂಪಾ ಹಾಸನ ಮಾತನಾಡಿ, ಮಾ.22 ರಿಂದ ಏ.22ರ ವರೆಗೆ ಒಂದು ತಿಂಗಳು ನಿರಂತರವಾಗಿ ಜಲದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆ ನಡೆಸಿ ಜಲ ಸಂವರ್ಧನೆಗೆ ಯಾವ ರೀತಿಯಲ್ಲಿ ಕಾರ್ಯೋನ್ಮುಖರಾಗ ಬೇಕು ಎನ್ನುವು ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಲಾಗುತ್ತಿದೆ ಇದನ್ನು ನೋಡಿದ ಪಿಡಿಒಗಳು ಇಂದಿನಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದರು.

ಜಲ ಮರುಪೂರಣ ಮಾಡಿ: ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸಾವಿರಾರು ಲೀ. ಲಕ್ಷಾಂತ ಲೀಟರ್‌ ನೀರನ್ನು ಚರಂಡಿಗೆ ಹರಿಸುತ್ತಿದ್ದೇವೆ. ಗ್ರಾಮಗಳಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ನೀರಿಂಗಿಸುವ ಮೂಲಕ ಅಂತರ್ಜಲ ಮರುಪೂರಣ ಮಾಡುವ ಬಗ್ಗೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು. ಇದಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಂಜಿನಿಯರ್‌ಗಳು ಸಹಕಾರ ನೀಡಬೇಕು ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.