ಎತ್ತಿನ ಹೊಳೆ ಸಂತ್ರಸ್ತರಿಗೆ ಅನ್ಯಾಯವಾಗಲ್ಲ


Team Udayavani, Nov 15, 2019, 3:41 PM IST

hasan-tdy-2

ಅರಸೀಕೆರೆ: ಎತ್ತಿನ ಹೊಳೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಂತ್ರಸ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಸೂಕ್ತ ಪರಿಹಾರ ಕೊಡಿಸುವುದಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ ನೀಡಿದರು.

ಜಿಲ್ಲಾಡಳಿತ ಹಾಗೂ ಎತ್ತಿನ ಹೊಳೆ ಯೊಜನೆ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಹಾರನಹಳ್ಳಿ ಯಲ್ಲಿ ಗುರುವಾರ ನಡೆದ ಎತ್ತಿನಹೊಳೆ ಕಾಮಗಾರಿ ಅನುಷ್ಠಾನಕ್ಕಾಗಿ ಶೇ.50ಕ್ಕೂ ಹೆಚ್ಚು ಕೃಷಿಭೂಮಿಯನ್ನ ಕಳೆದುಕೊಂಡ ರೈತರ ಪುನರ್ವಸತಿ ಹಾಗೂ ಪುನರ್‌ ವ್ಯವಸ್ಥೆಯ ಪಟ್ಟಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

7 ಜಿಲ್ಲೆಗಳಿಗೆ ವರದಾನ: ಸತತ ಬರಗಾಲ ಪೀಡಿತ ಪ್ರದೇಶವಾದ ಮಧ್ಯ ಕರ್ನಾಟಕ ವ್ಯಾಪ್ತಿಯ ಏಳು ಜಿಲ್ಲೆ ಹಾಗೂ 29 ತಾಲೂಕುಗಳಿಗೆ ಎತ್ತಿನಹೊಳೆ ಯೋಜನೆ ವರದಾನವಾಗಿದೆ ಎಂದರು.ಈಗಾಗಲೇ ಕಾಮಗಾರಿ ಬಿರುಸಿನಿಂದ ಸಾಗಿದೆ. ಶೇ.50 ಕ್ಕೂ ಹೆಚ್ಚು ಭೂಮಿ ಕಳೆದುಕೊಂಡ ರೈತರಿಗೆ ಪುನರ್ವಸತಿ ಕಲ್ಪಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಪರಿಹಾರ ತಾರತಮ್ಯ ಸರಿಪಡಿಸಲು ಆಗ್ರಹ: ಈ ವೇಳೆ ಮಧ್ಯ ಪ್ರವೇಶಿಸಿದ ಜಿಲ್ಲಾ ರೈತ ಸಂಘದ ಸಂಚಾಲಕ ಪ್ರಸನ್ನ ಕುಮಾರ್‌ ಮಾತನಾಡಿ ಎತ್ತಿನಹೊಳೆ ಕಾಮಗಾರಿಗೆ ಭೂಮಿ ಕಳೆದುಕೊಂಡ ಕೆಲ ರೈತರ ಹೆಸರು ಫ‌ಲಾನುಭವಿಗಳಪಟ್ಟಿಯಲ್ಲಿ ಕಾಣುತ್ತಿಲ್ಲ. ಸಕಲೇಶ ಪುರ ಮಾದರಿಯಲ್ಲೇ ತಾಲೂಕಿನ ರೈತರಿಗೂ ಪರಿಹಾರ ದೊರಕಬೇಕು ಹಾಗೂ ಒಂದೇ ಕಂತಿನಲ್ಲಿ ಪರಿಹಾರದ ಹಣ ರೈತರ ಖಾತೆಗೆ ಜಮಾ ಆಗಬೇಕು ಎಂದು ಸಭೆಯ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಶಿವಲಿಂಗೇಗೌಡ ಸರಕಾರಿ ಯೋಜನೆ ಹಾಗೂ ಜನಪರ ಕಾರ್ಯಗಳಿಗೆ ಸರಕಾರ ವಶಪಡಿಸಿಕೊಳ್ಳುವ ಭೂಮಿಗೆ ಸರಕಾರ ಕೆಲವು ಮಾನದಂಡಗಳನ್ನು ನಿಗದಿ ಮಾಡಿ ಪರಿಹಾರವನ್ನು ನೀಡುತ್ತದೆ. ಇದನ್ನು ಉಲ್ಲಂ ಸಲು ಯಾರಿಂದಲೂ ಸಾಧ್ಯ ವಿಲ್ಲ ಎಂದರು. ಕ್ಷೇತ್ರದ ಶಾಸಕನಾಗಿ ತಾವಿದ್ದು, ನನ್ನ ಕ್ಷೇತ್ರದ ಜನತೆಗೆ ಅನ್ಯಾಯವಾಗಲೂ ಎಂದಿಗೂ ನಾನು ಬಿಡುವುದಿಲ್ಲ. ಜನಪರ ಕಾಮಗಾರಿಯ ಅನುಷ್ಠಾನಕ್ಕೆ ಸರ್ವರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.

ಅಧಿಕಾರಿ ಭರವಸೆ: ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ ಕೃಷಿ ಭೂಮಿ ಕಳೆದುಕೊಂಡ ರೈತರಿಗೆ ಅನ್ಯಾಯವಾಗದಂತೆ ಸೂಕ್ತ ರೀತಿಯಲ್ಲೇ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.

 ಸಂತ್ರಸ್ತರೊಂದಿಗೆ ಸಮಾಲೋಚನೆ: ಎತ್ತಿನಹೊಳೆ ವಿಶೇಷ ಭೂಸ್ವಾದೀನ ಅಧಿಕಾರಿ ಗಿರೀಶ್‌ ನಂದನ್‌ ಮಾತ ನಾಡಿ, ಈಗಾಗಲೇ ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರೊಂದಿಗೆ ಹಲವು ಬಾರಿ ಸಮಾಲೋಚನೆ ಮಾಡಲಾಗಿದೆ. ಯೋಜನೆಗೆ ಭೂಮಿ ನೀಡಿರುವ ರೈತರ ಹೆಸರು ಮತ್ತು ಸ್ವಾಧೀನವಾಗಿರುವ ಭೂಮಿಯ ಪ್ರಮಾಣ ಮತ್ತು ದೊರೆಯಬೇಕಾದ ಪರಿಹಾರ ಡಲಾಗಿದೆ. ಈ ಪಟ್ಟಿಯಲ್ಲಿ ಹೆಸರು ಬಿಟ್ಟಿದ್ದರೆ ಸೂಕ್ತ ದಾಖಲೆ ನೀಡಿದರೆ ಅಂತಹ ರೈತರ ಹೆಸರನ್ನು ಫ‌ಲಾನುಭವಿಗಳ ಪಟ್ಟಿಗೆ ಸೇರಿಸಲಾಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್‌ ಸಂತೋಷ್‌ಕುಮಾರ್‌ ಎತ್ತಿನಹೊಳೆ ಯೋಜನೆ ಎಇಇ ಸುರೇಂದ್ರಾಚಾರ್‌, ಹಾರನಹಳ್ಳಿ ಗ್ರಾಪಂ ಅಧ್ಯಕ್ಷ ಯೋಗೀಶ್‌, ಮಾಜಿ ಅಧ್ಯಕ್ಷ ಕರೀಮ್‌ ಸಾಬ್‌, ಗ್ರಾಪಂ ಸದಸ್ಯ ಗುರುಮೂರ್ತಿ ಇದ್ದರು

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.