Udayavni Special

ಕ್ಷೇತ್ರ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಅನುದಾನ

Team Udayavani, Feb 19, 2020, 2:45 PM IST

hv-tdy-2

ಹಾನಗಲ್ಲ: ಮಧ್ಯವರ್ತಿಗಳ ಹಾವಳಿಯಿಂದ ಲೂಟಿಯಾಗುತ್ತಿರುವ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪುವಂತೆ ಮಾಡಿದ್ದರ ಫಲವಾಗಿ ದೇಶದ 1.15 ಲಕ್ಷ ಕೋಟಿ ರೂ.ಗೂ ಅಧಿಕ ಹಣ ಸದ್ಬಳಕೆಯಾಗುವಂತೆ ಮಾಡಿರುವ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ತಾಲೂಕಿನ ಯಳವಟ್ಟಿ ಗ್ರಾಮದಲ್ಲಿ 36 ಲಕ್ಷ ರೂ. ವೆಚ್ಚದಲ್ಲಿ ಮುಖ್ಯಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ಸಿಮೆಂಟ್‌ ಕಾಂಕ್ರಿಟ್‌ ರಸ್ತೆ ನಿರ್ಮಾಣ ಕಾಮಗಾರಿ, 5 ಲಕ್ಷ ರೂ. ವೆಚ್ಚದಲ್ಲಿ ರಾಮಲಿಂಗೇಶ್ವರ ದೇವಸ್ಥಾನದ ಜೀಣೊìದ್ಧಾರ ಕಾಮಗಾರಿಗೆ, ನಿಟಗಿನಕೊಪ್ಪದಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಾನಗಲ್ಲ ತಾಲೂಕಿನಲ್ಲಿ ಹಸಿಮೆಣಸು ಹಾಗೂ ಮಾವಿಗೆ 1759 ರೈತರಿಗೆ 8.18 ಕೋಟಿ ರೂ. ವಿಮಾ ಪರಿಹಾರ ಬಂದಿದೆ. ಇದರೊಂದಿಗೆ 16 ಸಾವಿರ ರೈತರಿಗೆ 15.11 ಕೋಟಿ ರೂ. ಅತಿವೃಷ್ಟಿ ಮಧ್ಯಂತರ ಪರಿಹಾರ ಬಿಡುಗಡೆಯಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಕ್ಕೆ ಬಂದಮೇಲೆ ತಾಲೂಕಿಗೆ ಸುಮಾರು 700 ಕೋಟಿ ರೂ. ಅನುದಾನ ನೀರಾವರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹರಿದು ಬಂದಿದೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 75 ದಿನಗಳಲ್ಲಿ 1200 ಕೋಟಿ ರೂ. ಸೇರಿದಂತೆ ಈ ವರೆಗೆ 2000 ಕೋಟಿ ರೂ. ಅನುದಾನ ಬಂದಿದೆ ಎಂದರು.

ಹಾನಗಲ್ಲ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ 96 ಕೋಟಿ ರೂ. ಹಣ ಖರ್ಚು ಮಾಡಿ ವಿದ್ಯಾರ್ಥಿ ನಿಲಯ, ಕಾಂಕ್ರಿಟ್‌ ರಸ್ತೆ, ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು. ಅಲ್ಪಸಂಖ್ಯಾತ ಜನಾಂಗಗಳು ಹೆಚ್ಚಾಗಿರುವ ಬಡಾವಣೆಗಳ ಮೂಲಭೂತ ಅಭಿವೃದ್ಧಿಗೆ 8.67 ಕೋಟಿ ರೂ. ಬಿಡುಗಡೆಯಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಬಡವರಿಗೆ ಕೊಡುವಂತಹ ದೊಡ್ಡ ಪ್ರಮಾಣದ ಪ್ರೋತ್ಸಾಹ ಧನ ಹಿಂದಿನ ಸರ್ಕಾರಗಳು ನೀಡಲು ಸಾಧ್ಯವಾಗಿಲ್ಲ. ಅಭಿವೃದ್ಧಿ ಪರ ಚಿಂತನೆ ಹೊಂದಿರುವ ಜನಪ್ರತಿನಿ ಧಿಗಳು ಇದ್ದಾಗ ಮಾತ್ರ ಇವೆಲ್ಲ ಸಾಧ್ಯವಾಗುತ್ತವೆ ಎಂದು ಸಂಸದ ಉದಾಸಿ ತಿಳಿಸಿದರು.

ಜಿಪಂ ಮಾಜಿ ಸದಸ್ಯ ಪದ್ಮನಾಭ ಕುಂದಾಪೂರ ಮಾತನಾಡಿ, ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಗೊಳಗಾಗಿ ಕೃಷಿಕ ಸಮಾಜ ಕೆಟ್ಟ ಪರಿಸ್ಥಿತಿ ಅನುಭವಿಸುವಂತಾಗಿತ್ತು. ಆದರೆ ಬಿ.ಎಸ್‌ .ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ರೈತ ಸಮುದಾಯಕ್ಕೆ ಆಸರೆಯಾಗಿ ಹೊಸ ಬೆಳೆ ಬೆಳೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಕೇಂದ್ರ ಸರಕಾರದ 6 ಸಾವಿರ ರೂ. ಹಾಗೂ ರಾಜ್ಯ ಸರಕಾರದ 4 ಸಾವಿರ ರೂ.ಗಳ ಸಹಾಯಧನ ನೀಡಿ ರೈತರಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದರು.

ಮುಖಂಡರಾದ ಹನುಮಂತಪ್ಪ ಗೊಂದಿ, ಲೋಕೇಶ ಹೊಳಲದ, ಸಿದ್ದನಗೌಡ ಪಾಟೀಲ, ಮಾನಿಂಗಪ್ಪ ಮನ್ನಂಗಿ, ಪಿ.ಟಿ.ಮಂತಗಿ, ಎಸ್‌. ಎಸ್‌.ಮನ್ನಂಗಿ, ಎಸ್‌.ಆರ್‌.ಕ್ಯಾಸನಕೇರಿ, ಕೃಷ್ಣ ಡೊಳ್ಳೇಶ್ವರ, ರತನ, ಮೊದಲಾದವರು ಕಾರ್ಯಕ್ರಮದಲ್ಲಿ ಇದ್ದರು.

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

1-yy

ವಾಲ್ಮೀಕಿ ಸಮಾಜದ ಮೀಸಲಾತಿ ಶೇ.7.5ಕ್ಕೆ ಹೆಚ್ಚಿಸಿ

haveri news

ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿಹಕ್ಕು

haveri news

ಬದಲಾವಣೆಗೆ ಮುನ್ನುಡಿ ಬರೆಯಿರಿ: ವೀರಭದ್ರಪ್ಪ

gdfdtyrt

ಹಾನಗಲ್ಲ ಉಪಚುನಾವಣೆ : ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.