ಬ್ಯಾಡಗಿ ಸಮಗ್ರ ಅಭಿವೃದ್ಧಿಗೆ 500 ಕೋಟಿ

Team Udayavani, Nov 5, 2019, 2:58 PM IST

ಬ್ಯಾಡಗಿ: ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಒಪ್ಪುವುದಿಲ್ಲ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ಬ್ಯಾಡಗಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ತಾಲೂಕಿನ ಮಾಸಣಗಿ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಸಮುದಾಯಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಸಾರ್ವಜನಿಕ ಜೀವನದಲ್ಲಿ ಬಹುತೇಕರು ಸಂದರ್ಭಕ್ಕೆ ತಕ್ಕಂತೆ ಸುಳ್ಳು ಆಶ್ವಾಸನೆ ನೀಡುವ ಮೂಲಕ ಕಾಲಹರಣ ಮಾಡುತ್ತಾರೆ. ನೇರವಾಗಿ ಮಾತನಾಡುವುದರಿಂದ ಕೆಲವರಿಗೆ ಮುಜುಗರವಾಗಿರಬಹದು, ಆದರೆ ಸುಳ್ಳು ಹೇಳಿ ಅ ಧಿಕಾರದ ನಡೆಸುವಂತಹ ಅನಿವಾರ್ಯತೆ ನನಗಿಲ್ಲ, ಚುನಾವಣೆ ಪೂರ್ವದಲ್ಲಿ ಕೊಟ್ಟಂತಹ ಎಲ್ಲ ಭರವಸೆಗಳನ್ನು ಈಡೇರಿಸಲು ಈಗಲೂ ಬದ್ಧನಾಗಿದ್ದೇನೆ ಎಂದರು.

ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕ, ಅವುಗಳ ಜರ್ಣೋದ್ಧಾರ ಮಾಡುವ ವಿಷಯ ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಬ್ಯಾಡಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಂದು ಚಿಕ್ಕ ದೇವಸ್ಥಾನವಿದ್ದರೂ ಸಹ ಬಿಡದಂತೆ ಅವುಗಳನ್ನು ಜೀರ್ಣೋದ್ಧಾರ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಗ್ರಾಮದ ಬೀರೇಶ್ವರ ದೇವಸ್ಥಾನಕ್ಕೂ ಸಹ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು. ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ದೇವಸ್ಥಾನಗಳಲ್ಲಿ ನಿತ್ಯ ಪೂಜೆಗೆ ಹಿನ್ನಡೆಯಾದರೇ ಅಂತಹ ದೇವಸ್ಥಾನಗಳು ಅನೈತಿಕ ಚಟುವಟಿಕೆಗಳಿಗೆ ತಾಣವಾಗಲಿವೆ. ಯಾವುದೇ ಕಾರಣಕ್ಕೂ ಎಷ್ಟೇ ಹಣ ವ್ಯಯವಾದರೂ ಪರವಾಗಿಲ್ಲ ಸರ್ಕಾರದಿಂದ ಅಗತ್ಯ ಅನುದಾನ ಪಡೆದುಕೊಳ್ಳುವ ಮೂಲಕ ನಿತ್ಯ ಪೂಜೆಗಳು ನೆರವೇರುವಂತೆ ನೋಡಿಕೊಳ್ಳಲು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ರಾಜ್ಯಾಧ್ಯಕ್ಷ ಎಸ್‌.ಆರ್‌.ಪಾಟೀಲ ಮಾತನಾಡಿ, ಸಮಾಜದಲ್ಲಿ ಶಾಂತಿ ಸುವ್ಯವ್ಯಸ್ಥೆ ನೆಲೆಸಬೇಕಾದರೆ ಧಾರ್ಮಿಕ ಕಾರ್ಯಗಳು ಅವಶ್ಯಕ, ದೇವಸ್ಥಾನಗಳ ನಿರ್ಮಾಣದ ಹಿಂದೆ ಇಂತದ್ದೊಂದು ಉದ್ದೇಶವಿದೆ. ಭಕ್ತಿಯ ಮಾರ್ಗದಿಂದ ಧರ್ಮ ಜಾಗೃತಿ ನಡೆಸಲಾಗುವುದು ಹೀಗಾಗಿ ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಪ್ರತಿಯೊಬ್ಬರು ಎಲ್ಲ ಧರ್ಮ ಧಿಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ವೇದಿಕೆಯಲ್ಲಿ ಬಿಜೆಪಿ ತಾಲೂಕಾಧ್ಯಕ್ಷ ಸುರೇಶ ಅಸಾದಿ, ಮಾಜಿ ಅಧ್ಯಕ್ಷ ಶಂಕ್ರಪ್ಪ ಮಾತನವರ, ಮುಖಂಡರಾದ ಶಿವಬಸಪ್ಪ ಕುಳೇನೂರ, ಶಿವಣ್ಣ ಕುಮ್ಮೂರ, ಸುರೇಶ ಯತ್ನಳ್ಳಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಪ್ರಕಾಶ ಬನ್ನಿಹಟ್ಟಿ, ಶಂಕ್ರಪ್ಪ ಕಾಟೇನಹಳ್ಳಿ, ಮಲ್ಲಪ್ಪ ದೇಸಾಯಿ, ಉಳಿವೆಪ್ಪ ಕುರುವತ್ತಿ, ನಿಂಗಪ್ಪ ಹೆಗ್ಗಣ್ಣನವರ, ದಿಳ್ಳೆಪ್ಪ ಹಾದಿಮನಿ, ಬಸನಗೌಡ ಪಾಟೀಲ, ಅಕ್ಕಮ್ಮ ಓಲೇಕಾರ, ಮಲ್ಲಪ್ಪ ಕರ್ಜಗಿ, ಮಲ್ಲೇಶ ಬಣಕಾರ ಸೇರಿದಂತೆ ಇನ್ನಿತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ