86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Team Udayavani, Jan 6, 2023, 9:02 AM IST

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ: ಏಲಕ್ಕಿ ಕಂಪಿನ ನಗರಿ, ಸರ್ವಧರ್ಮಗಳ ಸಾಮರಸ್ಯದ ಬೀಡು ಹಾವೇರಿಯಲ್ಲಿ ಜ.6 ರಿಂದ ಜ.8 ರವರೆಗೆ ನೆಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.

ಧರ್ನುಮಾಸದ ಚಳಿಯ ನಡುವೆ,‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ಕನ್ನಡ ಗಂಧರ್ವ ಲೋಕ ಧರೆಗಿಳಿದಂತೆ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.

ರಾಷ್ಟ್ರ ಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಉಸ್ತವಾರಿ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್‌, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ‌.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ‌ ಹಿರೇಮಠ‌ ‌ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.

ಇದನ್ನೂ ಓದಿ:ಐಪಿಎಲ್ ನಿಂದ ತಪ್ಪಿಸಿಕೊಳ್ಳುತ್ತಾರಾ ಕೋಟಿ ವೀರ?: ಸ್ಪಷ್ಟನೆ ನೀಡಿದ ಗ್ರೀನ್

ನಂತರ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್ ಮಾಧ್ಯಮವದರೊಂದಿಗೆ ಮಾತನಾಡಿ, ‘ನ ಭೂತೋ ನ ಭವಿಷ್ಯತಿಃ ಎನ್ನುವ ರೀತಿಯಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನನ್ನು ಕನ್ನಡಿಗರು ಹಾಗೂ ಸಾಹಿತ್ಯ ಆಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದೆ. ಕನ್ನಡಿಗರ ಬಗ್ಗೆ, ಭಾಷೆ ಹಾಗೂ ನಾಡಿನ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವವರಿಗೆ ಸರಿಯಾದ ಉತ್ತರ ನೀಡಲಾಗುವುದು. ನಾಡು ನುಡಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯಿಲ್ಲ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಹಾವೇರಿಗೆ ಆಗಮಿಸಿದ ಸಮ್ಮೇಳಾನಧ್ಯಕ್ಷರನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಗಿದೆ. ಸಮ್ಮೇಳನದ ಕಾರ್ಯಗಳು ಸುಗಮವಾಗಿ ಜರುಗಲಿ ಎಂಬ ಉದ್ದೇಶದಿಂದ, ನಿಗದಿತ ಸಮಯಕ್ಕೆ ಸರಿಯಾಗಿ‌ ಧ್ವಜಾರೋಹಣ ನೆಡೆಸಲಾಗಿದೆ. ಸಮ್ಮೇಳನದಲ್ಲಿ ‌ಕನ್ನಡ ನಾಡು ನುಡಿಯ ಬಗ್ಗೆ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಉತ್ತಮ ಚರ್ಚೆ ನೆಡೆಯಲಿವೆ.‌ ಸಮ್ಮೇಳನಕ್ಕೆ ಯಾವುದೇ ಕೊರತೆಯಾಗದಂತೆ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಸಾಕಷ್ಟು ಎಚ್ಚರಿಕೆ‌ ವಹಿಸಿ, ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎನ್ನುವ ಘೋಷಣೆಯನ್ನು ಅರ್ಥಗರ್ಭಿತವಾಗಿ ಜಾರಿಗೆ ತರಲು ಸರ್ಕಾರ ಪ್ರಯತ್ನ ಮಾಡುತ್ತಿದೆ. ಈ ಸಾಹಿತ್ಯ ಸಮ್ಮೇಳನದ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆ. ನಾಡು ನುಡಿಯ ವಿಚಾರವಾಗಿ ಭಿನ್ನತೆಗಳನ್ನು ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಸಬೇಕು ಎಂದರು‌.

ಪೊಲೀಸ್, ಎನ್.ಸಿ.ಸಿ, ಸೇವದಾಳ, ಸ್ಕೌಟ್ ಮತ್ತು ಗೈಡ್ಸ್ ತಂಡಗಳು ಗೌರವ ವಂದನೆ ಸಲ್ಲಿಸಿದವು. ಹೇಮಂತ್ ಎಸ್.ಕೆ. ಸ್ವಾಗತಿಸಿದರು. ನಾಗರಜ ಇಚ್ಚಂಗಿ ನಿರೂಪಿಸಿದರು. ಎ.ಎಲ್.ಶೇಖಸುರನುಗಿ ವಂದಿಸಿದರು. ಅರುಣ್ ಕಾಳಪ್ಪನವರು ಕಾರ್ಯಕ್ರಮ ನಿರ್ವಹಿಸಿದರು.

ಸಂಸದ ಶಿವಕುಮಾರ್ ಉದಾಸಿ, ಶಾಸಕ ನೇಹರು ಓಲೆಕಾರ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿ.ಪಂ. ಸಿಇಓ ಮಹಮದ್ ರೋಷನ್, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಸೇರಿದಂತೆ ಮತ್ತಿತರು ಇದ್ದರು.

ಟಾಪ್ ನ್ಯೂಸ್

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ಯಾಡಗಿ- ಕೃಷಿ ಕಾನೂನು ಹಿಂಪಡೆದು-ಡಿಸಿಸಿ ಬ್ಯಾಂಕ್‌ ಸ್ಥಾಪಿಸಿ;ಮಲ್ಲಿಕಾರ್ಜುನ

ಬ್ಯಾಡಗಿ- ಕೃಷಿ ಕಾನೂನು ಹಿಂಪಡೆದು-ಡಿಸಿಸಿ ಬ್ಯಾಂಕ್‌ ಸ್ಥಾಪಿಸಿ;ಮಲ್ಲಿಕಾರ್ಜುನ

ರಾಣಿಬೆನ್ನೂರ: ಋತುಸ್ರಾವದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ: ಮಂಜುಳಾ

ರಾಣಿಬೆನ್ನೂರ: ಋತುಸ್ರಾವದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ: ಮಂಜುಳಾ

ಹಾವೇರಿ:ಸೋರುತಿಹುದು ಶಾಲಾ ಕೊಠಡಿ-ಕಾಡುತಿಹುದು ಪ್ರಾಣ ಭಯ

ಹಾವೇರಿ:ಸೋರುತಿಹುದು ಶಾಲಾ ಕೊಠಡಿ-ಕಾಡುತಿಹುದು ಪ್ರಾಣ ಭಯ

congress

Haveri ಜಿಲ್ಲೆಗೆ ಕೈ ತಪ್ಪಿದ ಸಚಿವ ಸ್ಥಾನದ ಭಾಗ್ಯ

ಹಿರೇಕೆರೂರ:ಧಾರ್ಮಿಕ-ಸಾಂಸ್ಕೃತಿಕತೆಗೆ ಹೆಸರಾದ ಮಡ್ಲೂರು

ಹಿರೇಕೆರೂರ:ಧಾರ್ಮಿಕ-ಸಾಂಸ್ಕೃತಿಕತೆಗೆ ಹೆಸರಾದ ಮಡ್ಲೂರು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ