ಕೊನೆಗೂ ನಡೀತು ಹರಾಜು ಪ್ರಕ್ರಿಯೆ

•ಪುರಸಭೆಗೆ ಹರಿದು ಬರಲಿದೆ ಲಕ್ಷಾಂತರ ಆದಾಯ •97ರಲ್ಲಿ 56 ಮಳಿಗೆಗಳು ಹರಾಜು

Team Udayavani, Jun 16, 2019, 12:37 PM IST

haveri-tdy-2..

ಹಾನಗಲ್ಲ: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಹಾನಗಲ್ಲ ಪುರಸಭೆ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಕೊನೆಗೂ ನಡೆದಿದೆ. ಒಟ್ಟು 98 ಮಳಿಗೆಗಳಲ್ಲಿ ಒಂದಕ್ಕೆ ತಡೆಯಾಜ್ಞೆ ಇದ್ದು, ಇನ್ನುಳಿದ 97ರಲ್ಲಿ 56 ಮಳಿಗೆಗಳು ಹರಾಜಾಗಿವೆ. ಈ ಮೂಲಕ ಪುರಸಭೆಗೆ ದಾಖಲೆ ಮಟ್ಟದ ಆದಾಯ ಹರಿದು ಬರಲಿದೆ.

ಇಷ್ಟೊಂದು ಪೈಪೋಟಿ ನಡೆದಿದ್ದು ರಾಜ್ಯ ಪೌರಾಡಳಿತ ಇತಿಹಾಸದಲ್ಲಿ ಇದೇ ಮೊದಲು. ಪಟ್ಟಣದ ಪ್ರಮುಖ ಮಾರುಕಟ್ಟೆ ಪ್ರದೇಶದ ಬಹುತೇಕ ಮಳಿಗೆಗಳು ಪುರಸಭೆಗೆ ಸೇರಿದ್ದು, ಹೀಗಾಗಿ ಮಳಿಗೆಗಳನ್ನು ಪಡೆಯುವಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. 399 ವ್ಯಾಪಾರಸ್ಥರು ಪಾಲ್ಗೊಂಡಿದ್ದರು. ಹೀಗಾಗಿ ಹಾನಗಲ್ಲ ಪುರಸಭೆಗೆ ಬೃಹತ್‌ ಮೊತ್ತದ ಆದಾಯ ಬರುವ ನಿರೀಕ್ಷೆ ಇದೆ. ಸವಣೂರು ಉಪವಿಭಾಗಾಧಿಕಾರಿ ಹರ್ಷಲ್ ಬೋಯರ್‌ ನಾರಾಯಣ್‌ರಾವ್‌ ನೇತೃತ್ವದಲ್ಲಿ ಪುರಸಭೆ ಸಭಾಂಗಣದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಹರಾಜು ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯಿತು.

ಎರಡು ದಶಕಗಳಿಂದ ಬಾಡಿಗೆ ಹೆಚ್ಚಿಸಿರಲಿಲ್ಲ. ಹೀಗಾಗಿ ಪುರಸಭೆ ಆದಾಯಕ್ಕೆ ಹೊಡೆತ ಬೀಳುತ್ತಿದೆ ಎಂದು ಪ್ರಶಾಂತ ಮುಚ್ಚಂಡಿ ಸೇರಿದಂತೆ ಯುವಕರ ಗುಂಪು ಇದನ್ನು ಪ್ರಶ್ನಿಸಿ, ಹೊಸದಾಗಿ ಬಹಿರಂಗ ಹರಾಜು ಕರೆಯುವ ಮೂಲಕ ಪುರಸಭೆ ಆದಾಯ ಹೆಚ್ಚಿಸಬೇಕೆಂದು ಕೋರ್ಟ್‌ ಮೆಟ್ಟಲೇರಿದ್ದರು. ಹೀಗಾಗಿ ಕೋರ್ಟ್‌ ಆದೇಶ ಪ್ರಕಾರ ಈಗ ಹರಾಜು ಪ್ರಕ್ರಿಯೆ ನಡೆದಿದೆ. ಈ ಮೊದಲು ತಿಂಗಳಿಗೆ ಕೇವಲ 40 ರಿಂದ 60 ಸಾವಿರ ಬರುತ್ತಿದ್ದ ಆದಾಯ ಇನ್ಮುಂದೆ 8 ರಿಂದ 10 ಲಕ್ಷ ರೂ. ಬರುವ ನಿರೀಕ್ಷೆ ಇದೆ.

ಹರಾಜು ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಅತಿ ಹೆಚ್ಚು ಮೊತ್ತಕ್ಕೆ ಮಳಿಗೆಗಳು ಹರಾಜುಗುತ್ತಿದ್ದವು. ನಂತರ ಕಡಿಮೆ ಮೊತ್ತಕ್ಕೆ ಬಿಡ್‌ ಕೂಗಿದರು. ಅಲ್ಲದೆ ಒಂದೇ ಸಾಲಿನಲ್ಲಿರುವ ಮಳಿಗೆಗಳಲ್ಲಿ ಒಂದು ಮಳಿಗೆ 40 ಸಾವಿರಕ್ಕೆ ಬಿಡ್‌ ಆದರೆ, ಅದರ ಪಕ್ಕದ ಮಳಿಗೆ ಕೇವಲ 7 ಸಾವಿರಕ್ಕಿಂತ ಹೆಚ್ಚಿಗೆ ಕೂಗಲಿಲ್ಲ. ಹೀಗಾಗಿ ಉಪವಿಭಾಗಾಧಿಕಾರಿಗಳು ಹರಾಜು ಪ್ರಕ್ರಿಯೆಯನ್ನು ಮರುದಿನಕ್ಕೆ ಮುಂದೂಡಿದರು.

ಹರಾಜು ಪ್ರಕ್ರಿಯೆ ಷರತ್ತಿನಲ್ಲಿರುವಂತೆ ವಿಕಲಚೇತನರಿಗೆ ಮೀಸಲಿರುವ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಆದರೆ ಎರಡಕ್ಕಿಂತ ಹೆಚ್ಚು ಜನ ಭಾಗವಹಿಸಿದ್ದರಿಂದ ಸಾಮಾನ್ಯ ಮಳಿಗೆಗಳಂತೆ ಹರಾಜು ಮಾಡಲಾಯಿತು. ಇದು ವಿಕಲಚೇತನರ ಆಕ್ರೋಶಕ್ಕೆ ಕಾರಣವಾಯಿತು. ಕಾನೂನಾತ್ಮಕ ಸಲಹೆ ಪಡೆದು ಮುಂದಿನ ಪ್ರಕ್ರಿಯೆ ಮಾಡಲಾಗುವುದು ಎಂದು ಸಮಜಾಯಿಸಿ ನೀಡಲಾಯಿತು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.