ಬಸವಣ್ಣ ಕಾಯಕ ಸಂಸ್ಕೃತಿ ಸಾರಿದ ವಿಶ್ವಗುರು

ಸಂಸದ ಶಿವಕುಮಾರ ಉದಾಸಿ ಅಭಿಮತ

Team Udayavani, May 4, 2022, 3:29 PM IST

15

ಗಜೇಂದ್ರಗಡ: ವಚನ ಕಾಯಕ ತತ್ವದ ಮೂಲಕ ಸಮಾಜದಲ್ಲಿ ಸೌಹಾರ್ದ ಬದುಕಿಗೆ ಮುನ್ನುಡಿ ಬರೆದು ಶಾಂತಿ, ನೆಮ್ಮದಿಯ ಬೀಜ ಮಂತ್ರ ಬಿತ್ತಿದ ಸಮಾನತೆಯ ಹರಿಕಾರ, ಮಾನವತಾವಾದಿ ಬಸವಣ್ಣನವರ ಆದರ್ಶಗಳು ವಿಶ್ವಮಾನ್ಯ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಮಾನತೆಯ ಸಂಕೇತದೊಂದಿಗೆ ಸಹಬಾಳ್ವೆಯ ಮಂತ್ರ ದಂಡವನ್ನು ವಿಶ್ವಕ್ಕೆ ಪರಿಚಯಿಸುವ ಮೂಲಕ ವಿಶ್ವಗುರು ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಸವಣ್ಣನವರು ಪಾಲಿಸಿದ ಸಮನ್ವಯತೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಬಾಳಿ ಬದುಕಿದಾಗ ಆಚರಣೆಗಳು ಸಾರ್ಥಕಗೊಳ್ಳತ್ತವೆ. ಬಸವಣ್ಣನವರು ಕೇವಲ ಒಂದು ಜಾತಿ, ಧರ್ಮ, ಪಂಗಡದ ಒಳಿತಿಗೆ ಶ್ರಮಿಸದೇ, ಇಡಿ ಮನುಕುಲದ ಕಲ್ಯಾಣಕ್ಕಾಗಿ ಶ್ರಮಿಸಿದವರು. ಬಸವಣ್ಣನವರ ಆದರ್ಶಗಳನ್ನು ಸಮಾಜದ ಎಲ್ಲಾ ವರ್ಗದ ಜನರಿಗೂ ತಲುಪಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಬಸವಣ್ಣನವರು 12ನೇ ಶತಮಾನದಲ್ಲಿಯೇ ಕುಡಿಯುವ ನೀರು ಒಂದೇ, ಸೇವಿಸುವ ಗಾಳಿ ಒಂದೇ ನಾವೆಲ್ಲರೂ ಸಮಾನರು. ನಮ್ಮಲ್ಲಿ ಮೇಲು, ಕೀಳೇಂಬ ನಿಜ ಉಣಬಡಿಸಿ ಸಮಾಜವನ್ನು ಒಗ್ಗೂಡಿಸಲು ತಮ್ಮ ವಚನಗಳ ಮೂಲಕ ಸಂದೇಶ ಸಾರಿ, ಅನುಭವ ಮಂಟಪ ಸ್ಥಾಪಿಸಿ, ಕಾಯಕ ಸಂಸ್ಕೃತಿ ನೀಡಿದ್ದಾರೆ. ಅಕ್ಕಮಹಾದೇವಿ, ಬಸವಣ್ಣ, ಅಲ್ಲಮಪ್ರಭು ರಚಿಸಿದ ವಚನಗಳು ಮಾನವೀಯ ಅಂತಃಕರಣ ಸಾರುತ್ತಿವೆ ಎಂದರು.

ತಹಶೀಲ್ದಾರ್‌ ರಜನಿಕಾಂತ್‌ ಕೆಂಗೇರಿ, ಬಿ.ಎಂ. ಸಜ್ಜನರ, ಅಂಬರೀಶ ಬಳೀಗೇರ, ಶಿವಬಸವ ಬೆಲ್ಲದ, ಮುತ್ತು ಕಡಗದ, ಕನಕಪ್ಪ ಅರಳಿಗಿಡದ, ಶಿವಾನಂದ ಮಠದ, ಶಿರಸ್ತೇದಾರ್‌ ವೀರಣ್ಣ ಅಡಗತ್ತಿ, ಕಂದಾಯ ನಿರೀಕ್ಷಕಿ ಗೌರಮ್ಮ ಆನಂದಪ್ಪನವರ, ಉಮೇಶ ಅರಳಿಗಿಡದ ಸೇರಿದಂತೆ ಇತರರು ಇದ್ದರು.

ಶಾಸಕರ ಜನಸಂಪರ್ಕ ಕಚೇರಿ: ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಲಾಯಿತು. ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತು ಕಡಗದ, ಶಿವಬಸವ ಬೆಲ್ಲದ, ಶಿವಾನಂದ ಮಠದ ಉಮೇಶ ಮಲ್ಲಾಪೂರ ಇತರರು ಇದ್ದರು.

ಬೈಕ್‌ ರ್ಯಾಲಿ: ಪಟ್ಟಣದಲ್ಲಿ ಬಸವ ಜಯಂತಿ ಪ್ರಯುಕ್ತ ಪಟ್ಟಣದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವಣ್ಣನವರ ಭಾವಚಿತ್ರದೊಂದಿಗೆ ಬೈಕ್‌ ರ್ಯಾಲಿ ನಡೆಸಲಾಯಿತು. ಮಹಾ ಮಾನವತಾವಾದಿ ಬಸವಣ್ಣನವರ ಜಯಂತಿ ಪ್ರಯುಕ್ತ ಪಟ್ಟಣ ಸೇರಿದಂತೆ ಗೋಗೇರಿ, ಕಾಲಕಾಲೇಶ್ವರ, ಸೂಡಿ, ರಾಜೂರ, ಕೊಡಗಾನೂರ, ಸುತ್ತಲಿನ ಗ್ರಾಮಗಳು, ಸರ್ಕಾರಿ ಕಚೇರಿಗಳು, ಅರೆ ಸರ್ಕಾರಿ ಕಚೇರಿ, ಸಂಘಸಂಸ್ಥೆಗಳಲ್ಲಿ ಜಯಂತಿ ಆಚರಿಸಲಾಯಿತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.