ಹಾವೇರಿ: 19 ರಂದು ಬೇಡಜಂಗಮರ ಬೃಹತ್‌ ಸಮಾವೇಶ


Team Udayavani, Feb 15, 2021, 4:42 PM IST

beda jangam fair

ಹಾವೇರಿ: ರಾಜ್ಯದ ಬೇಡ ಜಂಗಮರಿಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಹಕ್ಕುಗಳನ್ನು ಪಡೆಲು ಒತ್ತಾಯಿಸಿ ಫೆ.19 ರಂದು ದಾವಣಗೇರಿ ಜಿಲ್ಲೆಯ ಚನ್ನಗಿರಿಯಲ್ಲಿ ಏರ್ಪಡಿಸಿರುವ ಬೃಹತ್‌ ಬೇಡಜಂಗಮ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸುವಂತೆ ಜಿಲ್ಲಾ ಬೇಡಜಂಗಮ ಸಮಾಜದ ಅಧ್ಯಕ್ಷ ಎಂ.ಎಂ ಹಿರೇಮಠ ಕರೆ ನೀಡಿದರು.

ನಗರದ ರೇಣುಕ ಮಂದಿರದಲ್ಲಿ ಏರ್ಪಡಿಸಿದ್ದ ಹಾವೇರಿ ಜಿಲ್ಲಾ ಬೇಡಜಂಗಮರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ಅತೀ ಹಿಂದುಳಿದ ಜಾತಿಗಳಲ್ಲಿ ಬೇಡಜಂಗಮ ಸಮಾಜವೂ ಒಂದು. ಆದ್ದರಿಂದ ಕೇಂದ್ರ ಸರಕಾರ ಸಂವಿಧಾನದಲ್ಲಿ ಸ್ಪಷ್ಟವಾಗಿ ಬೇಡಜಂಗಮ ಜಾತಿಯ ಬಗ್ಗೆ ನಮೂದಿಸಿದೆ. ಅಲ್ಲದೇ, ಸೂರ್ಯನಾಥ ಕಾಮತರ ವರದಿಯಲ್ಲಿ ಮತ್ತು ಕೋರ್ಟ್‌ ಆದೇಶದಲ್ಲೂ ರಾಜ್ಯದ ಮಾಮೂಲಿ ಜಂಗಮರೇ ಬೇಡ ಜಂಗಮರು ಎಂದು ಸ್ಪಷ್ಟವಾಗಿ ತಿಳಿಸಲಾಗದೆ. ಆದರೆ, ಕೆಲವು ಪ್ರಭಾವಿ ರಾಜಕಾರಣಿಗಳ ಪ್ರಭಾವಕ್ಕೆ ಒಳಗಾಗಿ ಸರಕಾರ ಮತ್ತು ಅಧಿ ಕಾರಿಗಳುಬೇಡಜಂಗಮರಿಗೆ ಸಿಗಬೇಕಾಗಿರುವ ಜಾತಿ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂದು ದೂರಿದರು.

ಈ ಹಿನ್ನೆಲೆಯಲ್ಲಿ ಜಂಗಮರೆಲ್ಲರೂ ಸಂಘಟನೆಯ ಮುಂಖಾತರ ನಮ್ಮ ಹಕ್ಕನ್ನು ಪಡೆಯಬೇಕಾಗಿದೆ. ಫೆ.19 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಏರ್ಪಡಿಸಿರುವ ಸಮಾವೇಶದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಜನರು ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಬೇಡಜಂಗಮ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಮಠದ ಮಾತನಾಡಿ, ಬೇಡಜಂಗಮರು ಯಾರ ಹಕ್ಕನ್ನು ಕಿತ್ತುಕೊಂಡಿಲ್ಲ. ಆದರೆ, ತಮಗೆ ಸಂವಿಧಾನಾತ್ಮಕವಾಗಿ ಸಿಗಬೇಕಾಗಿರುವ ಹಕ್ಕನ್ನು ಪಡೆದುಕೊಳ್ಳಲು ಸಂಘಟನೆಯ ಮುಂಖಾತರ ಹೋರಾಟ ಮಾಡಬೇಕಾಗಿದೆ. ಸಾಂವಿಧಾನಿಕ ಹಕ್ಕೊತ್ತಾಯದ ನಮ್ಮ ನೋಟ ಸರ್ಕಾರದ ಕಡೆಗೆ ಎನ್ನುವ ರಾಜ್ಯ ಮಟ್ಟದ 2ನೇ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮತ್ತು ಈ ವರ್ಷದ ಮೊದಲನೇ ಸಮಾವೇಶವನ್ನು ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆಸಿದಾಗ ಹೆಚ್ಚಿನ ಸಂಖ್ಯೆಯಲ್ಲಿ ಬೇಡಜಂಗಮ ಸಮಾಜ ಬಾಂಧವರು ಸೇರಿ ಸರಕಾರಕ್ಕೆ ಜಂಗಮರ ಶಕ್ತಿ ಪ್ರದರ್ಶನ ಮಾಡಲಾಗಿದೆ ಎಂದರು.

ಸಭೆಯಲ್ಲಿ ಶಿವಯೋಗಿ ಹುಲಿಕಂತಿಮಠ, ಗುರುನಾಥಯ್ಯ ಮಳ್ಳೂರಮಠ, ರಾಜು ಲಕ್ಷ್ಮೇಶ್ವರಮಠ, ಕುಮಾರಸ್ವಾಮಿ ಹಿರೇಮಠ, ಶಿವಬಸಯ್ಯ ವಿರಕ್ತಮಠ, ಸಿದ್ದಯ್ಯ ಗೌರಿಮಠ, ಎಸ್‌.ಪಿ. ಮುದೇನೂರಮಠ, ಗುರುಶಾಂತಯ್ಯ ಹಿರೇಮಠ, ಚಂದ್ರಶೇಖರಯ್ಯ ಗುಂಡೂರಮಠ, ಶಂಕ್ರಯ್ಯ ಹೆಬ್ಬಳ್ಳಿಮಠ, ರುದ್ರಯ್ಯ ಮಡ್ಲಿಮಠ, ಜಿ.ಎಸ್‌. ಚನ್ನಾಪುರಮಠ, ಕೊಟ್ರಯ್ಯ ಚರಂತಿಮಠ ಇತರರು ಪಾಲ್ಗೊಂಡಿದರು. ರಾಜು ಕಲ್ಯಾಣಮಠ ನಿರೂಪಿಸಿ, ಗುರಬಸಯ್ಯ ಚಪ್ಪರದಹಳ್ಳಿಮಠ ವಂದಿಸಿದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.