ಕಟ್ಟಡ ಕಾರ್ಮಿಕರ ಕುಂದುಕೊರತೆ ವಿಚಾರಣೆ

ಸರ್ಕಾರಿ ವೈದ್ಯಕೀಯ ಕಾಲೇಜು ಕಾಮಗಾರಿ ಸ್ಥಳಕ್ಕೆ ಹಿರಿಯ ನ್ಯಾಯಾಧೀಶರ ಭೇಟಿ

Team Udayavani, May 10, 2022, 3:34 PM IST

16

ಹಾವೇರಿ: ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ನ್ಯಾಯಾಧೀಶರಾದ ಪುಟ್ಟರಾಜು ಭೇಟಿ ನೀಡಿ ಕಟ್ಟಡ ಕಾರ್ಮಿಕರ ಕುಂದುಕೊರತೆಗಳ ಕುರಿತಂತೆ ವಿಚಾರಿಸಿದರು.

ಸ್ಥಳೀಯ ದೇವಗಿರಿಯಲ್ಲಾಪುರದ ಬಳಿ ಅಂದಾಜು 478 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ, ರಾಜ್ಯ ಮತ್ತು ಹೊರ ರಾಜ್ಯದಿಂದ ಆಗಮಿಸಿ ದುಡಿಯುತ್ತಿರುವ ಕಾರ್ಮಿಕರಿಗೆ ಕಲ್ಪಿಸಿರುವ ಸೌಲಭ್ಯಗಳು, ಕಾರ್ಮಿಕರಿಗಾಗಿ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಮಾಹಿತಿ ಪಡೆದುಕೊಂಡರು.

ಈವರೆಗೆ ಇ-ಶ್ರಮ ಕಾರ್ಮಿಕ ಕಾರ್ಡ್‌ ನೀಡಿದ ಅಸಂಘಟಿತ ಕಾರ್ಮಿಕರಿಗೆ ವಾರದೊಳಗೆ ಕಾರ್ಡ್‌ ವಿತರಿಸಲು ಕ್ರಮ ವಹಿಸಬೇಕು. ಕಾರ್ಮಿಕ ಸೌಲಭ್ಯಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿ ತಾವು ಕಾರ್ಯಕ್ರಮ ಆಯೋಜಿಸಿದರೆ ಸಣ್ಣ ಸಣ್ಣ ಕಾರ್ಮಿಕ ಗುಂಪುಗಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಅಗತ್ಯ ಮಾಹಿತಿ ಹಾಗೂ ನೆರವು ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೈದ್ಯಕೀಯ ಕಾಲೇಜು ಕಟ್ಟಡದಲ್ಲಿ ಅಂದಾಜು 375 ಕಾರ್ಮಿಕರು ವಿವಿಧ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಮಿಕರಿಗೆ ಆನ್‌ಲೈನ್‌ ಮೂಲಕ ನೋಂದಾಯಿಸಿಕೊಂಡವರಿಗೆ ಇ-ಶ್ರಮ ಕಾರ್ಡ್‌ ನೀಡಲಾಗುತ್ತಿದೆ. ಬಹುಪಾಲು ಕಾರ್ಮಿಕರು ಆಧಾರ್‌ ಕಾರ್ಡ್‌ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಆದಾಗ್ಯೂ ಅವರ ಮನವೊಲಿಸಿ ದಾಖಲೆ ಪಡೆದು ನೋಂದಾಯಿಸಿಕೊಂಡು ಕಾರ್ಮಿಕ ಕಾರ್ಡ್‌ ನೀಡಲು ಕ್ರಮ ವಹಿಸಲಾಗಿದೆ. ಈಗಾಗಲೇ 45 ಜನರ ಮಾಹಿತಿ ಪಡೆದು ಕಾರ್ಮಿಕ ಕಾರ್ಡ್‌ ವಿತರಿಸುವ ಕುರಿತಂತೆ ಕ್ರಮ ವಹಿಸಲಾಗಿದೆ.

75 ಕಾರ್ಮಿಕರ ಮಾಹಿತಿ ಸಂಗ್ರಹಿಸಿ ನೋಂದಣಿಗೆ ಕ್ರಮವಹಿಸಲಾಗಿದೆ. ಪದೇ ಪದೆ ಕಾರ್ಮಿಕರು ಬದಲಾಗುವುದರಿಂದ ದಾಖಲೆ ಪಡೆಯುವುದು ಕಷ್ಟಕರ. ಆದಾಗ್ಯೂ ಆಧಾರ್‌ ಕಾರ್ಡ್‌ ಪಡೆದು ಕಾರ್ಮಿಕರಿಗೆ ಕಾರ್ಡ್‌ ವಿತರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಈ ಸಂಬಂಧ ವೈದ್ಯಕೀಯ ಕಾಲೇಜು ಎಂಜಿನಿಯರ್‌ಗಳೊಂದಿಗೆ ಸಂಪರ್ಕ ಸಾಧಿಸಿ ಕಾರ್ಮಿಕ ಕಾರ್ಡ್‌ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರ ಮಾಹಿತಿ ನೀಡಿದರು. ಗುತ್ತಿಗೆದಾರ ಕಂಪನಿಯ ಅಭಿಯಂತರರು ಹಾಗೂ ವಿವಿಧ ಕಾರ್ಮಿಕರು, ಸುರಕ್ಷಾ ಸಾಮಗ್ರಿ, ಕಾರ್ಮಿಕ ಸೌಲಭ್ಯಗಳ ಕುರಿತಂತೆ ನ್ಯಾಯಾಧೀಶರಿಗೆ ಮಾಹಿತಿ ನೀಡಿದರು.

ಈವರೆಗೆ ಇ-ಶ್ರಮ ಕಾರ್ಮಿಕ ಕಾರ್ಡ್‌ ನೀಡಿದ ಅಸಂಘಟಿತ ಕಾರ್ಮಿಕರಿಗೆ ವಾರದೊಳಗೆ ಕಾರ್ಡ್‌ ವಿತರಿಸಲು ಕ್ರಮ ವಹಿಸಬೇಕು. ಕಾರ್ಮಿಕ ಸೌಲಭ್ಯಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿ ತಾವು ಕಾರ್ಯಕ್ರಮ ಆಯೋಜಿಸಿದರೆ ಸಣ್ಣ ಸಣ್ಣ ಕಾರ್ಮಿಕ ಗುಂಪುಗಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಅಗತ್ಯ ಮಾಹಿತಿ ಹಾಗೂ ನೆರವು ನೀಡಲಾಗುವುದು. -ಪುಟ್ಟರಾಜು, ಹಿರಿಯ ನ್ಯಾಯಾಧೀಶರು

ಟಾಪ್ ನ್ಯೂಸ್

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವು

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

ಗುತ್ತಲ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

19

‘ಅವ್ವ’ ಶಿಶುಪಾಲನಾ ಕೇಂದ್ರ ಉದ್ಘಾಟನೆ

17

ವರ್ಷಗಳ ಬಳಿಕ ಶಾಲೆಗಳಲ್ಲಿ ಮಕ್ಕಳ ಕಲರವ

18

ಕಾಯಿಲೆಗೆ ಶೀಘ್ರ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ

ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?

ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

ಹೊಸ ಸೇರ್ಪಡೆ

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.