ಉದಾಸಿಗೆ ಕೇಂದ್ರ ಸಚಿವ ಸ್ಥಾನ ನಿರೀಕ್ಷೆ

•ಸಾಧನೆ-ಪ್ರಭಾವ-ಜಾತಿ ಸಮೀಕರಣ ಎಲ್ಲವೂ ಪೂರಕ •ಮೂರು ಅವಧಿಯಲ್ಲಿ ಹೆಚ್ಚಿನ ಕೆಲಸ ಮಾಡಿದ ಸಂಸದ

Team Udayavani, May 27, 2019, 3:19 PM IST

haveri-tdy-3

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಶಿವಕುಮಾರ ಉದಾಸಿ ಅವರಿಗೆ ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎರಡನೇ ಅವಧಿಯಲ್ಲಿ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬಹುದೇ ಎಂಬ ಬಗ್ಗೆ ನಿರೀಕ್ಷೆ ಗರಿಗೆದರಿದೆ.

ಸಂಸದ ಶಿವಕುಮಾರ ಉದಾಸಿ 2009ರಿಂದ ಎದುರಾಳಿ ಕಾಂಗ್ರೆಸ್‌ನ್ನು ಮಣಿಸಿ ಹ್ಯಾಟ್ರಿಕ್‌ ಜಯ ಸಾಧಿಸಿದ್ದಾರೆ. ಕಳೆದ ಆಡಳಿತಾವಧಿ ಸಂಸತ್‌ ಅಧಿವೇಶನದಲ್ಲಿ ಹೆಚ್ಚು ಹಾಜರಾತಿ ಹಾಗೂ ಪ್ರಮುಖ ವಿಷಯಗಳ ಬಗ್ಗೆ ಪ್ರಶ್ನೆ ಕೇಳಿ ಉದಾಸಿ ಅವರು ಪ್ರಧಾನಿ ಮೋದಿ ಅವರ ಗಮನ ಸೆಳೆದಿದ್ದರು. ಅಷ್ಟೇ ಅಲ್ಲ ಕೇಂದ್ರ ಹಣಕಾಸು ಸಮಿತಿ, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿ ಯೋಜನೆ ರೂಪಿಸಲು ಅತ್ಯುತ್ತಮ ಸಲಹೆ ನೀಡಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದ್ದರು. ಈ ಎಲ್ಲ ಕಾರಣಗಳಿಂದಾಗಿ ಶಿವಕುಮಾರ ಉದಾಸಿ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ. ಇನ್ನು ಜಾತಿ ಸಮೀಕರಣದ ವಿಚಾರದಲ್ಲಿಯೂ ಶಿವಕುಮಾರ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಪ್ರಾಬಲ್ಯಯುಳ್ಳ ಲಿಂಗಾಯತರಿಗೆ ಸಚಿವ ಸ್ಥಾನ ನೀಡುವ ಲೆಕ್ಕಾಚಾರ ನಡೆದರೆ ಇಲ್ಲಿ ಶಿವಕುಮಾರ ಉದಾಸಿ ಅವರನ್ನು ಪರಿಗಣಿಸಬಹುದು ಎನ್ನಲಾಗಿದೆ.

ಸಾಧನೆಗಳೇನು?: ಶಿವಕುಮಾರ ಉದಾಸಿ ಚುನಾವಣೆ ಪ್ರಚಾರದಲ್ಲಿ ಹೇಳಿಕೊಂಡಂತೆ ಅವರ ಅವಧಿಯಲ್ಲಿ ಕ್ಷೇತ್ರದಲ್ಲಿ ದಾಖಲೆ ಕೆಲಸವಾಗಿದೆ. ಕ್ಷೇತ್ರಕ್ಕೆ 260 ಕೋಟಿ ಸಿಆರ್‌ಆಫ್‌ ಅನುದಾನ ಬಂದಿದೆ. 815 ಕಿಮೀ ಕ್ಷೇತ್ರದ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಕ್ಷೇತ್ರದಲ್ಲಿ 1.92 ಲಕ್ಷ ಗ್ಯಾಸ್‌ ಸಂಪರ್ಕ, 300 ಕೋಟಿಗೂ ಅಧಿಕ ವೆಚ್ಚದಲ್ಲಿ ರೈಲ್ವೆ ಸ್ಟೇಶನ್‌, ಅಂಡರ್‌ ಬ್ರಿಜ್‌, ಓವರ್‌ ಬ್ರಿಜ್‌, ಇತರ ಕಾಮಗಾರಿ ಮಾಡಲಾಗಿದೆ. ಆಯುಷ್ಮಾನ್‌ ಭಾರತ ಎರಡು ಲಕ್ಷ ಜನರಿಗೆ ದೊರಕಿಸುವ ಪ್ರಯತ್ನ ನಡೆದಿದೆ. ಕೃಷಿ ಸಮ್ಮ್ಮಾನ್‌ ಯೋಜನೆ ಲಾಭ 2.70 ಜನರಿಗೆ ಸಿಗಲಿದೆ. 2009ರಲ್ಲಿ ಹಾವೇರಿ ಜಿಲ್ಲೆಯಲ್ಲಿ 117 ಬ್ಯಾಂಕ್‌ ಶಾಖೆಗಳಿದ್ದವು. ಈಗ ಹಾವೇರಿ ಜಿಲ್ಲೆಯಲ್ಲಿ 314, ಗದಗ ಜಿಲ್ಲೆಯಲ್ಲಿ 55 ಹೆಚ್ಚುವರಿ ಶಾಖೆಗಳಾಗಿವೆ. ಕ್ಷೇತ್ರದಲ್ಲಿನ ಈ ಸಾಧನೆಗಳು ಸಹ ಸಚಿವ ಸ್ಥಾನ ಸಿಗುವ ಲೆಕ್ಕಾಚಾರದಲ್ಲಿ ಸೇರಿಕೊಳ್ಳಬಹುದು ಎನ್ನಲಾಗಿದೆ.

ಪ್ರಭಾವವೂ ಇದೆ: ಕೇವಲ ವೈಯಕ್ತಿಕ ಅರ್ಹತೆ, ಸಾಧನೆ ಅಷ್ಟೇ ಅಲ್ಲದೇ ಶಿವಕುಮಾರ ಉದಾಸಿ ತಮ್ಮ ಪರ ಕೇಂದ್ರ ಮಟ್ಟದಲ್ಲಿ ಪ್ರಭಾವ ಬೀರುವ ಶಕ್ತಿಯನ್ನೂ ಹೊಂದಿದ್ದಾರೆ. ಶಿವಕುಮಾರ ಉದಾಸಿ ಹಾಗೂ ಅವರ ತಂದೆ ಹಿರಿಯ ಧುರೀಣ ಸಿ.ಎಂ. ಉದಾಸಿ ಇಬ್ಬರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತರಾಗಿದ್ದಾರೆ. ಹೀಗಾಗಿ ಶಿವಕುಮಾರ ಉದಾಸಿ ಪರವಾಗಿ ಯಡಿಯೂರಪ್ಪ ಕೇಂದ್ರದಲ್ಲಿ ಪ್ರಭಾವ ಬೀರಿ ಸಚಿವ ಸ್ಥಾನ ದೊರಕಿಸಿಕೊಡಬಹುದು. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿಗೆ ಹೆಚ್ಚು ಸ್ಥಾನಗಳು ದೊರಕಿರುವುದರಿಂದ ಯಡಿಯೂರಪ್ಪ ಅವರ ಮಾತಿಗೂ ಕೇಂದ್ರದಲ್ಲಿ ಹೆಚ್ಚಿನ ಮನ್ನಣೆ ಸಿಗುವುದರಿಂದ ಶಿವಕುಮಾರ ಉದಾಸಿ ಅವರಿಗೆ ಸಚಿವ ಸ್ಥಾನ ಖಚಿತ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.

ಶಿವಕುಮಾರ ಉದಾಸಿ ಕೇಂದ್ರ ಸಚಿವರಾಗಲು ಎಲ್ಲ ರೀತಿಯಲ್ಲಿ ಅರ್ಹರಾಗಿದ್ದಾರೆ. ಪ್ರಧಾನಿ ಮೋದಿ ಅವರು ಉದಾಸಿ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವ ನಿರೀಕ್ಷೆ ಇದೆ. ಉದಾಸಿ ಅವರಿಗೆ ಸಚಿವ ಸ್ಥಾನ ದೊರೆತರೆ ಕ್ಷೇತ್ರದಲ್ಲಿ ಅಭಿವೃದ್ಧಿ ವೇಗ ಪಡೆದುಕೊಳ್ಳಲಿದೆ.
-ಶಿವರಾಜ ಸಜ್ಜನರ, ಬಿಜೆಪಿ ಜಿಲ್ಲಾಧ್ಯಕ್ಷ
ಉದಾಸಿ ಪರಿಚಯ:

ಶಿವಕುಮಾರ ಉದಾಸಿ ಜಿಲ್ಲೆಯ ಹಾನಗಲ್ಲ ಪಟ್ಟಣದವರು. ಶಿವಕುಮಾರ ಉದಾಸಿ 52 ವರ್ಷ ವಯೋಮಾನದವರಾಗಿದ್ದು, 1984ರಿಂದ 1999ವರೆಗೆ ಬಿಇ ಮೆಕ್ಯಾನಿಕಲ್ ಅಧ್ಯಯನ ಮಾಡಿದ್ದಾರೆ. ಕೃಷಿ ಹಾಗೂ ವ್ಯವಹಾರ ಅವರ ವೃತ್ತಿ. ತಂದೆ ಸಿ.ಎಂ. ಉದಾಸಿ ಹಿರಿಯ ರಾಜಕಾರಣಿಯಾಗಿದ್ದು, ಪ್ರಸ್ತುತ ಹಾನಗಲ್ಲ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.
ಜಾತಿ ಲೆಕ್ಕಾಚಾರ ಹೇಗಿದೆ?:

ಶಿವಕುಮಾರ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗಲು ಧನಾತ್ಮಕ ಅಂಶಗಳೇ ಹೆಚ್ಚಾಗಿವೆ. ಆದರೂ ಜಾತಿ ಸಮೀಕರಣದ ಇನ್ನೊಂದು ಲೆಕ್ಕಾಚಾರದಲ್ಲಿ ಸ್ವಲ್ಪ ಹಿನ್ನಡೆಯೂ ಆಗುವ ಸಾಧ್ಯತೆ ಇದೆ. ರಾಜ್ಯ ರಾಜಕಾರಣದಲ್ಲಿ ರಾಜಕೀಯ ಬದಲಾವಣೆಯಾಗಿ ಬಿಜೆಪಿ ಸರ್ಕಾರ ರಚನೆಯಾದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ. ಲಿಂಗಾಯತ ಮುಖಂಡರಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಸಿಗುವುದರಿಂದ ಅದೇ ಸಮುದಾಯದ ಮುಖಂಡರಿಗೆ ಕೇಂದ್ರ ಸಚಿವ ಸ್ಥಾನ ಪಡೆಯಲು ಹಿನ್ನಡೆಯಾಗಬಹುದು ಎಂಬ ಲೆಕ್ಕಾಚಾರವೂ ನಡೆದಿದೆ.
ನಾನು ಸಚಿವ ಸ್ಥಾನದ ಕನಸು ಕಂಡಿಲ್ಲ. ಜನರು ನನ್ನನ್ನು ಮೂರನೇ ಬಾರಿ ಗೆಲ್ಲಿಸಿ ಅವರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಸಂಸದನಾಗಿ ಸಮರ್ಥವಾಗಿ ಕೆಲಸ ಮಾಡುತ್ತೇನೆ. ಪಕ್ಷ ಯಾವ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸುತ್ತೇನೆ. ಸಚಿವ ಸ್ಥಾನ ಕೊಡುವುದು ಪಕ್ಷ ಹಾಗೂ ವರಿಷ್ಠರಿಗೆ ಬಿಟ್ಟ ವಿಚಾರ -ಶಿವಕುಮಾರ ಉದಾಸಿ,ಸಂಸದ
•ಎಚ್.ಕೆ. ನಟರಾಜ

ಟಾಪ್ ನ್ಯೂಸ್

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

incident held at sagara

ಹೃದಯಾಘಾತದಿಂದ ದಿನಗೂಲಿ ನೌಕರ ಸಾವು: ಪ್ರತಿಭಟನೆ

ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21lakshmi

ಜನ ಕಲ್ಯಾಣಕ್ಕೆ ಕಾಂಗ್ರೆಸ್‌ ಬೆಂಬಲಿಸಿ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

23election

ವಾಕ್ಸಮರದ ಮಧ್ಯೆ ಮತದಾನಕ್ಕೆ ದಿನಗಣನೆ

1-bbm

ಹಾನಗಲ್ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ : ಸಿಎಂ ತಿರುಗೇಟು

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

MUST WATCH

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

udayavani youtube

ಮೊಸಳೆ ಬಾಯಿಯಿಂದ ಬಾಲಕನ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಿತು ನೋಡಿ

ಹೊಸ ಸೇರ್ಪಡೆ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.