Udayavni Special

ಅಸಮರ್ಪಕ ವಿದ್ಯುತ್‌ ಪೂರೈಕೆಗೆ ಖಂಡನೆ

Team Udayavani, Feb 25, 2020, 3:03 PM IST

hv-tdy-1

ಬಂಕಾಪುರ: ಅಸಮರ್ಪಕ ವಿದ್ಯುತ್‌ ಪೂರೈಕೆಯನ್ನು ಖಂಡಿಸಿ ಸಮರ್ಪಕ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು, ಹೆಸ್ಕಾಂ ಕಚೇರಿಗೆ ಬೀಗ ಹಾಕಿ ಒಣಗಿದ ಜೋಳದ ಬೆಳೆ ಪ್ರದರ್ಶಿಸಿ, ಹಲಗೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಕಳೆದ ಎರಡು ತಿಂಗಳಿಂದ ಸರಿಯಾಗಿ ವಿದ್ಯುತ್‌ ವಿತರಣೆ ಮಾಡದ ಕಾರಣ ಅಲ್ಪಸ್ವಲ್ಪ ಬೆಳೆದ ಗೋವಿನಜೋಳ, ಶೇಂಗಾ, ಮೆಣಸಿಕಾಯಿ, ಸೋಯಾಬಿನ್‌, ಬಿಳಿಜೋಳ ಸೇರಿದಂತೆ ವಿವಿಧ ಬೆಳೆಗಳು ಸರಿಯಾಗಿ ನೀರಿಲ್ಲದೆ ಸಂಪೂರ್ಣ ಒಣಗಿ ನಾಶವಾಗಿ ಹೋಗುತ್ತಿವೆ. ಹೆಸ್ಕಾಂ ಅಧಿಕಾರಿಗಳು ರಾತ್ರಿ ಮೂರು ತಾಸು, ಹಗಲು ನಾಲ್ಕು ತಾಸು ವಿದ್ಯುತ್‌ ನೀಡುವುದಾಗಿ ಹೇಳಿ ನಂತರ ಸಮಯಕ್ಕೆ ಸರಿಯಾಗಿ ವಿದ್ಯುತ್‌ ಪೂರೈಕೆ ಮಾಡುತ್ತಿಲ್ಲ ಎಂದು ದೂರಿದರು.

ಅತಿವೃಷ್ಟಿಯಿಂದ ಬೆಳೆ ಹಾನಿಯಾನಿ ಅನುಭವಿಸುವ ರೈತರು ಈಗಲಾದರೂ ನೀರಾವರಿ ಮೂಲಕ ಹಿಂಗಾರಿ ಬೆಳೆ ಬೆಳೆಯಬಹುದು ಎಂಬ ನಿರೀಕ್ಷೆಯಲ್ಲಿರುವಾಗ, ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಬೆಳೆಗಳಿಗೆ ಸರಿಯಾಗಿ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ನೀಡಬೇಕು. ನಿಗದಿ ಪಡಿಸಿರುವ ಸಮಯದಲ್ಲಿ ವಿದ್ಯುತ್‌ನ್ನು ಸರಿಯಾಗಿ ಪೂರೈಕೆ ಮಾಡುವಂತೆ ಪ್ರತಿಭಟನಾ ನಿರತ ರೈತರು ಆಗ್ರಹಿಸಿದರು.

ಬಂಕಾಪುರ ಹೆಸ್ಕಾಂ ಗ್ರಾಮೀಣ ಶಾಖಾಧಿಕಾರಿ ನಾಗರಾಜ, ಹಾವೇರಿ ಹೆಸ್ಕಾಂ ಇಂಜಿನಿಯರ್‌ ವೀರಣ್ಣ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರನ್ನುದ್ಧೇಸಿಸಿ ಮಾತನಾಡಿ, ಬಂಕಾಪುರ ಗ್ರೇಡ್‌ಗೆ ನೀಡಬೇಕಾದಷ್ಟು ವಿದ್ಯುತ್‌ ವಿತರಣೆ ಮೇಲಿನಿಂದ ಪೂರೈಕೆ ಮಾಡುತ್ತಿಲ್ಲ. ಈ ಕುರಿತು ಪ್ರಸ್ತಾವನೆಯನ್ನು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಕಳುಹಿಸಿ ಕೋಡಲಾಗಿದೆ. ತಕ್ಷಣ ಸಮಸ್ಯೆಗೆ ಪರಿಹಾರ ನೀಡಲಾಗುವುದು. ರೈತರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಹೆಸ್ಕಾಂ ಅಧಿಕಾರಿ ಗೌಸ್‌ ಶೇಖಲಿ, ಬಸವರಾಜ ದಳವಾಯಿ, ರೇಣುಕಗೌಡ ರೈತ ಮುಖಂಡರಾದ ಮುತ್ತಣ್ಣ ಕಲಕೋಟಿ, ಬಿ.ಎಲ್‌. ದೊಡ್ಡಮನಿ, ಪಿ.ಎಸ್‌. ಸಣ್ಣಮನಿ, ಬಸಪ್ಪ ದೊಡ್ಡಮನಿ, ರುದ್ರಪ್ಪ ಕೆಂಗಣ್ಣವರ, ರಮೇಶ ಸುಂಕದ, ಗೋವಿಂದಪ್ಪ ಕೆಗಣ್ಣವರ, ಫಕ್ಕೀರಪ್ಪ ದೊಡ್ಡಮನಿ, ಮಂಜು ಬಡಪ್ಪನವರ, ದೇವರಾಜ ನೇಕಾರ, ಎಲ್‌.ಬಿ. ಜಗದೀಶ, ಚಂದ್ರು ಪಚ್ಚಿ ಸೇರಿದಂತೆ ಶಿಡ್ಲಾಪುರ, ಹುನಗುಂದ, ಹುಲಿಕಟ್ಟಿ, ಹಳೆಬಂಕಾಪುರ, ಮಲ್ಲನಾಯಕನಕೊಪ್ಪ, ಹೋತನಹಳ್ಳಿ ರೈತರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ ಜಿಗಿತ: 24 ಗಂಟೆಯಲ್ಲಿ 773 ಸೋಂಕಿತರು

ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ ಜಿಗಿತ: 24 ಗಂಟೆಯಲ್ಲಿ 773 ಸೋಂಕಿತರು

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

08-April-32

ರೈತರ ಉತ್ಪನ್ನ ನೇರ ಗ್ರಾಹಕರಿಗೆ

08-April-19

ಗಡಿ ಪ್ರದೇಶದಲ್ಲಿ ತೀವ್ರ ನಿಗಾಕ್ಕೆ ಸೂಚನೆ

07-April-17

ಮಹಾಮಾರಿ ವಿರುದ್ಧ ಹೋರಾಟಕ್ಕೆ ಪ್ರತ್ಯೇಕ ಆಸ್ಪತ್ರೆ

ಕಾರ್ಖಾನೆ ಆರಂಭಕ್ಕೆ ಅನುಮತಿ

ಕಾರ್ಖಾನೆ ಆರಂಭಕ್ಕೆ ಅನುಮತಿ

ಕಾರ್ಮಿಕರಿಗಾಗಿ ನಿತ್ಯ 5 ಸಾವಿರ ಲೀ. ಹಾಲು ಪೂರೈಕೆ

ಕಾರ್ಮಿಕರಿಗಾಗಿ ನಿತ್ಯ 5 ಸಾವಿರ ಲೀ. ಹಾಲು ಪೂರೈಕೆ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ ಜಿಗಿತ: 24 ಗಂಟೆಯಲ್ಲಿ 773 ಸೋಂಕಿತರು

ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ ಜಿಗಿತ: 24 ಗಂಟೆಯಲ್ಲಿ 773 ಸೋಂಕಿತರು

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಇಂದು ಸಚಿವ ಸಂಪುಟ ಸಭೆ

ಇಂದು ಸಚಿವ ಸಂಪುಟ ಸಭೆ

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!