ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಗೊಂದಲ


Team Udayavani, Jun 5, 2020, 3:01 PM IST

ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಗೊಂದಲ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ಗುರುವಾರ ಎಷ್ಟು ಜನರಲ್ಲಿ ದೃಢಪಟ್ಟಿದೆ ಎಂಬ ಮಾಹಿತಿ ಸ್ಪಷ್ಟತೆ ಇಲ್ಲದೇ ಕೆಲಹೊತ್ತು ಗೊಂದಲಕ್ಕೆಡೆ ಮಾಡಿಕೊಟ್ಟ ಪ್ರಸಂಗ ನಡೆಯಿತು.

ಜಿಲ್ಲಾಡಳಿತವು ಗುರುವಾರ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ನೀಡಿದರೆ, ರಾಜ್ಯ ಆರೋಗ್ಯ ಇಲಾಖೆ ಬುಲೆಟಿನ್‌ ಮೂಲಕ ಒಬ್ಬರಿಗೆ ಮಾತ್ರ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿತು. ಜಿಲ್ಲಾಡಳಿತ ನೀಡಿದ ಇಬ್ಬರು ಸೋಂಕಿತರ ವಿವರ ಮತ್ತು ರಾಜ್ಯ ಆರೋಗ್ಯ ಇಲಾಖೆ ನೀಡಿದ ಸೋಂಕಿತನ ವಿವರ ಬೇರೆ ಬೇರೆಯಾಗಿತ್ತು. ಜತೆಗೆ ರಾಜ್ಯ ಆರೋಗ್ಯ ಇಲಾಖೆ ನಮೂದಿಸಿದ ಸೋಂಕಿತನ ಮಾಹಿತಿ ಜಿಲ್ಲಾಡಳಿತದ ಬಳಿ ಇರಲಿಲ್ಲ. ಇದುವೇ ಗೊಂದಲಕ್ಕೆ ಕಾರಣವಾಯಿತು.

ಜಿಲ್ಲಾಧಿಕಾರಿಗಳು ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್‌ ಬರುವ ಮೊದಲೇ ಮುಂಬಯಿಯಿಂದ ಬಂದಿದ್ದ ಮತ್ತೆ ಇಬ್ಬರಿಗೆ ಕೋವಿಡ್‌-19  ಸೋಂಕು ಇರುವುದು ದೃಢಪಟ್ಟಿದೆ. ಶಿಗ್ಗಾವಿ ಮೂಲದ 46 ವರ್ಷದ ಮಹಿಳೆ ಹಾಗೂ ಬಂಕಾಪುರ ಪಟ್ಟಣದ ಕಂಟೇನ್ಮೆಂಟ್‌ ಪ್ರದೇಶದ 63 ವರ್ಷದ ವ್ಯಕಿಗೆ ಸೋಂಕು ದೃಢಪಟ್ಟಿದೆ. ಈ ಸೋಂಕಿತರ ಕ್ರಮಾಂಕ ಬರುವುದೊಂದೇ ಬಾಕಿ ಇದೆ ಎಂದು ತಿಳಿಸಿದ್ದರು.

ಆದರೆ, ಸಂಜೆ ಬಂದ ರಾಜ್ಯ ಬುಲೆಟಿನ್‌ನಲ್ಲಿ ಹಾವೇರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿದೆ. ದೆಹಲಿಯಿಂದ ಬಂದ 30 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ ಎಂದು ಉಲ್ಲೇಖವಿರುವುದು ಗೊಂದಲವುಂಟುಮಾಡಿತು. ಈ ಕುರಿತು ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಗುರುವಾರ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಆದರೆ, ಈ ವಿವರ ಬುಲೆಟಿನ್‌ನಲ್ಲಿ ನಮೂದಾಗಿಲ್ಲ. ನಾಳೆಯ ಬುಲೆಟಿನ್‌ನಲ್ಲಿ ರೋಗಿಯ ಸಂಖ್ಯೆ ನಮೂದಾಗಲಿದೆ. ಗುರುವಾರ ಬುಲೆಟಿನ್‌ ನಲ್ಲಿ ನಮೂದಾಗಿರುವ ಒಂದು ಪ್ರಕರಣ ಜಿಲ್ಲೆಯದಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

6arrest

ಕುಣಿಗಲ್: ಕತ್ತು ಸೀಳಿ ಹತ್ಯೆ; ಆರೋಪಿಗಳಿಬ್ಬರ ಬಂಧನ

ಭಾರತ: 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16

ಭಾರತ: 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16

ICC U-19 World Cup: Afghanistan beat Sri Lanka

ಲಂಕಾಗೆ ಶಾಕ್ ನೀಡಿದ ಅಫ್ಘಾನ್ ಹುಡುಗರು: ಸೆಮಿ ಫೈನಲ್ ತಲುಪಿದ ಅಫ್ಘಾನ್ ಅಂಡರ್ 19 ತಂಡ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

28-1

ಕಾರು-ಬೈಕ್ ಢಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

Execution for man who robbed hotel for girlfriend’s bail

ಗೆಳತಿಯ ಜಾಮೀನಿಗಾಗಿ ಜೋಡಿ ಕೊಲೆ ಮಾಡಿದ್ದಾತನಿಗೆ ಚುಚ್ಚುಮದ್ದಿನ ಮೂಲಕ ಮರಣದಂಡನೆ!

ಹುಟ್ಟುಹಬ್ಬದ ಪ್ರಯುಕ್ತ ಸಿಎಂ ಬೊಮ್ಮಾಯಿ ಗೋಪೂಜೆ: ಶುಭ ಹಾರೈಸಿದ ಪ್ರಧಾನಿ ಮೋದಿ

ಹುಟ್ಟುಹಬ್ಬದ ಪ್ರಯುಕ್ತ ಸಿಎಂ ಬೊಮ್ಮಾಯಿ ಗೋಪೂಜೆ: ಶುಭ ಹಾರೈಸಿದ ಪ್ರಧಾನಿ ಮೋದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಗ್ರಾಮ ಒನ್‌’ ಸೇವೆ ಜನಮಾನಸದಲ್ಲಿ ಉಳಿಯಲಿ; ಮುಖ್ಯಮಂತ್ರಿ ಬೊಮ್ಮಾಯಿ

“ಗ್ರಾಮ ಒನ್‌’ ಸೇವೆ ಜನಮಾನಸದಲ್ಲಿ ಉಳಿಯಲಿ; ಮುಖ್ಯಮಂತ್ರಿ ಬೊಮ್ಮಾಯಿ

accident

ಹಾವೇರಿ: ಲಾರಿ ಪಲ್ಟಿಯಾಗಿ ಮೂವರು ದಾರುಣ ಸಾವು

ಸೆರತಯರಜಹಗ್ದಸಅ

ಸಾರ್ಥಕ ಜೀವನಕ್ಕೆ ಅಧ್ಯಾತ್ಮದ ಚಿಂತನೆ ಸಹಕಾರಿ

ಸೆರತೆತಯರಕಜಹಗ್ದ

ಮಹಾತ್ಮರ ಆದರ್ಶ ಪಾಲಿಸಿ

ರತಯುಇಇಕುಜಹಗ್ದಸ

ಸ್ಪರ್ಧಾತ್ಮಕ ಪೈಪೋಟಿಗೆ ವಿದ್ಯಾರ್ಥಿಗಳಿಗೆ ಅವಕಾಶ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

vವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ

ವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ

6arrest

ಕುಣಿಗಲ್: ಕತ್ತು ಸೀಳಿ ಹತ್ಯೆ; ಆರೋಪಿಗಳಿಬ್ಬರ ಬಂಧನ

5power

ಪಂಪ್‌ಸೆಟ್‌ಗೆ ತ್ರಿಫೇಸ್‌ ವಿದ್ಯುತ್‌ ನೀಡಲು ಆಗ್ರಹ

4pension

ಪಿಂಚಣಿ ಪಡೆಯಲು “ನಾಳೆ ಬನ್ನಿ”

3alanda

ಅಸಮಾನತೆ ಹತ್ತಿಕ್ಕಲು ಹೋರಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.