ತೈಲ ಬೆಲೆ ಏರಿಕೆಗೆ ಕಾಂಗ್ರೆಸ್‌ ಆಕ್ರೋಶ

100 ನಾಟ್‌ಔಟ್‌ ಘೋಷಣೆಯಡಿ ಕಾಂಗ್ರೆಸ್‌ ಮುಖಂಡರು-ಕಾರ್ಯಕರ್ತರ ಭಾರೀ ಪ್ರತಿಭಟನೆ

Team Udayavani, Jun 12, 2021, 5:06 PM IST

11hvr1

ಹಾವೇರಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಸ್ಥಳೀಯ ಮಾಗಾವಿ ಪೆಟ್ರೋಲ್‌ ಬಂಕ್‌ ಬಳಿ ನಾಟ್‌ಔಟ್‌ 100 ಘೋಷಣೆಯಡಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಮುಖಂಡರು, ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಿ ಜನರನ್ನು ಮತ್ತಷ್ಟು ಸಮಸ್ಯೆಗೆ ದೂಡಲಾಗುತ್ತಿದೆ. ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಸಾಕಷ್ಟು ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಸವರಾಜ ಶಿವಣ್ಣನವರ ಮಾತನಾಡಿ, ಡಾ|ಮನಮೋಹನ್‌ ಸಿಂಗ್‌ ಸರ್ಕಾರ ಒಂದು ರೂಪಾಯಿ ಬೆಲೆ ಹೆಚ್ಚಳ ಮಾಡಿದರೂ ಬಿಜೆಪಿಯವರು ಹಾಹಾಕಾರ ಮಾಡುತ್ತಿದ್ದರು. ನರೇಂದ್ರ ಮೋದಿ ಅವರು ಖುದ್ದು ವಿರೋಧ ಮಾಡಿದರು.

2014ರ ಚುನಾವಣೆಯಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಅಚ್ಛೇದಿನ್‌ ಆಯೇಂಗೆ ಎಂದಿದ್ದರು. ಈಗ ನರಕದ ದಿನಗಳು ಬಂದಿವೆ. ನಾವು ನರಕ ನೋಡಿರಲಿಲ್ಲ. ಬಿಜೆಪಿ ಸರ್ಕಾರ ನರಕ ತೋರಿಸುತ್ತಿದೆ ಎಂದು ಕಿಡಿಕಾರಿದರು. ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಕೊರೊನಾ ಲಾಕ್‌ ಡೌನ್‌ನಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಈ ಸಮಯದಲ್ಲಿ ಸರ್ಕಾರ ಪೆಟ್ರೋಲ್‌, ಡೀಸೆಲ್‌, ವಿದ್ಯುತ್‌ ದರ ಹೆಚ್ಚಳ ಮಾಡಿದೆ. ಹೀಗಾದರೆ ಜನ ಜೀವನ ನಡೆಸುವುದಾದರೂ ಹೇಗೆ? ಬಿಜೆಪಿಯವರಿಗೆ ಜನರ ಸಂಕಷ್ಟಗಳ ಬಗ್ಗೆ ಅರಿವಿಲ್ಲ. ಬರೀ ಸುಳ್ಳು ಹೇಳುತ್ತಾ ಜನರ ದಾರಿ ತಪ್ಪಿಸುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ನಮ್ಮ ಪಕ್ಷದ ಕಾರ್ಯಕರ್ತರು ಜನರಿಗೆ ತಿಳಿಸಿ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ಡಾ|ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ 120 ದಿಂದ 150 ಡಾಲರ್‌ ಇತ್ತು. ಆಗ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇತ್ತು. ಕೇಂದ್ರ ಸರ್ಕಾರ ಡೀಸೆಲ್‌ ಮೇಲೆ 3.45 ರೂ., ಪೆಟ್ರೋಲ್‌ ಮೇಲೆ 9.21 ರೂ. ಅಬಕಾರಿ ತೆರಿಗೆ ವಸೂಲಿ ಮಾಡುತ್ತಿತ್ತು. ಈಗ ಡೀಸೆಲ್‌ ಮೇಲೆ 31.84 ರೂ., ಪೆಟ್ರೋಲ್‌ ಮೇಲೆ 31.98 ರೂ. ವಸೂಲಿ ಮಾಡಲಾಗುತ್ತಿದೆ.

ರಾಜ್ಯ ಸರ್ಕಾರ ಶೇ.24 ಮತ್ತು 31ರಷ್ಟು ಮಾರಾಟ ತೆರಿಗೆ ವಿ ಧಿಸುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 50 ರಿಂದ 60 ರೂ. ತೆರಿಗೆ ವಸೂಲಿ ಮಾಡುತ್ತಿವೆ. ಇಂಧನದ ಮೂಲ ಬೆಲೆ 35 ರೂ. ಮಾತ್ರ ಇದೆ. ಆದರೆ, ಸರ್ಕಾರಗಳು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವಿ ಧಿಸುತ್ತಿರುವ ಅಬಕಾರಿ, ಮಾರಾಟ ತೆರಿಗೆಗಳನ್ನು ಶೇ. 50ರಷ್ಟು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ದರ ಏರಿಕೆ ವಿರೋ ಸಿ ದೇಶಾದ್ಯಂತ ಕಾಂಗ್ರೆಸ್‌ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆ ಐದು ದಿನಗಳ ಕಾಲ ತಾಲೂಕು ಮಟ್ಟ, ಜಿಲ್ಲಾ ಪಂಚಾಯತಿ ಮಟ್ಟ, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಆಯೋಜಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಮನೋಹರ್‌ ತಹಶೀಲ್ದಾರ್‌, ರುದ್ರಪ್ಪ ಲಮಾಣಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಮುಖರಾದ ಡಾ|ಸಂಜಯ ಡಾಂಗೆ, ಆರ್‌.ಎಂ.ಕುಬೇರಪ್ಪ, ಈರಪ್ಪ ಲಮಾಣಿ, ಎಂ.ಎಂ.ಮೈದೂರು, ಪ್ರಸನ್ನ ಹಿರೇಮಠ, ಜಯಶ್ರೀ ಶಿವಪುರ, ಶಾಂತಾ ಶಿರೂರ, ರಾಧಾ ಸವಣೂರು, ರೇಣುಕಾ ಪುತ್ರನ್ನ, ವಿಶಾಲಾಕ್ಷಿ ಆನವಟ್ಟಿ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.