ಬೆಲೆ ಏರಿಕೆ ಖಂಡಿಸಿ ಕೈ ಕಾರ್ಯಕರ್ತರ ಪ್ರತಿಭಟನೆ
Team Udayavani, Feb 14, 2021, 4:10 PM IST
ಶಿಗ್ಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋ ಧಿಸಿ ಬೃಹತ್ ಪ್ರತಿಭಟನೆ ನಡೆಸಿದ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು, ಬಸ್ ನಿಲ್ದಾಣ ವೃತ್ತದ ರಸ್ತೆ ಮಧ್ಯೆದಲ್ಲಿಯೇ ಸೌದೆ ಉರಿಸಿ ಅಡುಗೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ವಿಪ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಕಠಿಣ ಕಾಯಿದೆಗಳನ್ನು ಜಾರಿಗೆ ತರುವ ಮೂಲಕ ಜನರ ದಿನನಿತ್ಯದ ಬದುಕು ಕಷ್ಟವಾಗಿದೆ ಎಂದರು.
ಇದನ್ನೂ ಓದಿ :ಗುರು ಕರುಣೆಯಿಂದ ಜೀವನ ಪಾವನ
ಭರತ ಸಂಸ್ಥೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಶ್ರೀಕಾಂತ ದುಂಡಿಗೌಡ ಮಾತನಾಡಿದರು. ತಾಲೂಕು ಅಧ್ಯಕ್ಷ ಎಂ.ಎನ್ ವೆಂಕೋಜಿ, ಷಣ್ಮುಖಪ್ಪ ಶಿವಳ್ಳಿ, ಹನುಮರೆಡ್ಡಿ ನಡುವಿನಮನಿ, ಹೊಸೂರು ಗ್ರಾಪಂ ಅಧ್ಯಕ್ಷ ಅಣ್ಣಪ್ಪ ಲಮಾಣಿ, ಕೇದಾರಪ್ಪ ಬಗಾಡೆ, ಎಫ್.ಸಿ. ಪಾಟೀಲ, ನ್ಯಾಯವಾದಿ ಎ.ಎ. ಗಂಜೇನವರ, ವಿವಿಧ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಎತ್ತಿನ ಗಾಡಿಗಳ ಮೇಲೆ ಗ್ಯಾಸ್ ಸಿಲಿಂಡರ್ ಮೆರವಣಿಗೆ ಮಾಡಿದರು. ನಂತರ ಧರಣಿ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಬಸವರಾಜ ಹೊಂಕಣದವರ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.