ತಾಡಪತ್ರಿ ನೀಡದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ


Team Udayavani, Jul 24, 2020, 9:38 AM IST

ತಾಡಪತ್ರಿ ನೀಡದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ

ಗುತ್ತಲ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಸಮರ್ಪಕವಾಗಿ ತಾಡಪತ್ರಿಗಳನ್ನು ನೀಡದೆ, ಕೇವಲ ರಾಜಕೀಯ ಕಾರ್ಯಕರ್ತರಿಗೆ ಮಾತ್ರ ದೊರೆಯುವಂತೆ ಮಾಡಿರುವ ಕೃಷಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಕ್ಕೆ ಕೈ ಕಾರ್ಯಕರ್ತರು ಮುತ್ತಿಗೆ ಹಾಕುತ್ತೇವೆ ಎಂದು ಕಾಂಗ್ರೆಸ್‌ ಮುಖಂಡ ಈರಪ್ಪ ಲಮಾಣಿ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯಾವ ರಾಜಕೀಯ ಪಕ್ಷಗಳು ಇಂತಹ ಕಾನೂನು ಮಾಡಿಲ್ಲ. ಎಲ್ಲ ರೈತರನ್ನು ಸಮಾನವಾಗಿ ನೋಡಿಕೊಂಡು ಬಂದಿವೆ. ಆದರೆ ಇಂದು ರೈತರು ತಾಡಪತ್ರಿಗಳಿಗೆ ಅಲೆದಾಡುತ್ತಿದ್ದಾರೆ. 300 ತಾಡಪತ್ರಿಗಳನ್ನು ಶಾಸಕರು, ಜಿಪಂ, ತಾಪಂ ಸದಸ್ಯರ ಚೀಟಿ ತಂದವರಿಗೆ ಮಾತ್ರ ನೀಡುತ್ತೇವೆ ಎಂದು ಹೇಳಿ ರೈತರಿಗೆ ಅನ್ಯಾಯ ಮಾಡಿರುವುದು ಮೇಲ್ನೋಟಕ್ಕೆ ಸಾಬಿತಾಗಿದೆ ಎಂದು ದೂರಿದರು.

ಕೃಷಿ ಸಚಿವರ ಜಿಲ್ಲೆಯಲ್ಲೇ ರೈತರಿಗೆ ಅನ್ಯಾಯವಾಗುತ್ತಿರುವುದು ವಿಷಾದನೀಯ. ಕೃಷಿ ಸಚಿವ ಬಿ.ಸಿ. ಪಾಟೀಲರಿಗೆ ತಮ್ಮ ತವರು ಜಿಲ್ಲೆಯ ರೈತರಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ. ಇನ್ನೂ ರಾಜ್ಯದ ರೈತರಿಗೆ ನ್ಯಾಯ ಒದಗಿಸಿಕೊಡುವರೇ ಎಂಬ ಅನುಮಾನ ಕಾಡುತ್ತಿದೆ. ರೈತರಿಗೆ ರಾಜಕೀಯ ಗೊತ್ತಿಲ್ಲ. ಅಧಿಕಾರಿಗಳ ಹೊಸ ಕಾನೂನಿನ ಅನ್ವಯ ರೈತರೂ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಈರಪ್ಪ ಲಮಾಣಿ ಹೇಳಿದರು.

ಜಿಪಂ ಮಾಜಿ ಸದಸ್ಯ ಸಿ.ಬಿ ಕುರವತ್ತಿಗೌಡರ ಮಾತನಾಡಿ, ಈ ಹಿಂದೆ ಫಲಾನುಭವಿಗಳ ಸಂಖ್ಯೆ ಹೆಚ್ಚಾದಾಗ ಸಂದರ್ಭದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುತ್ತಿತ್ತು. ಈ ಕಾನೂನು ಇದ್ದಾಗ್ಯೂ ಅಧಿಕಾರಿಗಳ ಜನಪ್ರತಿನಿಧಿಗಳ ಹೆಸರಲ್ಲಿ ರೈತರಿಗೆ ವಂಚನೆ ಮಾಡಿರುವುದು ಅಪರಾಧವಾಗಿದೆ ಎಂದರು.

ಪಪಂ ಸದಸ್ಯ ನಾಗರಾಜ ಎರಿಮನಿ ಹಾಗೂ ಯುವ ಕಾಂಗ್ರೆಸ್‌ ಮುಖಂಡ ಸಂಜಯ ಗಾಂಧಿ  ಸಂಜೀವಣ್ಣನವರ ಮಾತನಾಡಿ, ಇಷ್ಟೆಲ್ಲ ಅವಾಂತರ ಮಾಡಿರುವ ಸಹಾಯಕ ಕೃಷಿ ನಿರ್ದೇಶಕ ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಈ ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪಪಂ ಸದಸ್ಯ ಕೊಟೆಪ್ಪ ಬನ್ನಿಮಟ್ಟಿ, ಲಿಂಗೇಶ ಬೆನ್ನೂರ, ಆಶ್ರಯ ಕಮಿಟಿ ಮಾಜಿ ಅಧ್ಯಕ್ಷ ಶಹಜಾನಸಾಬ ಅಗಡಿ, ಪ್ರಮುಖರಾದ ಶಿವಣ್ಣ ಬಂಡಿವಡ್ಡರ, ರಮೇಶ ಲಮಾಣಿ, ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಜಯ ಬಂಡಿವಡ್ಡರ, ಹನುಮಂತ ಅಗಸಿಬಾಗಿಲದ, ಪೀರಸಾಬ ಹಾನಗಲ್‌ ಇದ್ದರು.

ಟಾಪ್ ನ್ಯೂಸ್

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

21hkr1

ಜಿಲ್ಲಾದ್ಯಂತ ಬಿಸಿಯೂಟ ಕಾರ್ಯಕ್ರಮಕ್ಕೆ ಚಾಲನೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

5kasapa

ಸಾಮೂಹಿಕ ನಾಯಕತ್ವದಲ್ಲಿ ಕಸಾಪ ಮುನ್ನಡೆ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

4hdk

ಜಾತಿಗಣತಿ ವರದಿ ಸ್ವೀಕಾರಕ್ಕೆ ಎಚ್‌ಡಿಕೆ ಹಿಂದೇಟು

3temple

ಬಸವಲಿಂಗೇಶ್ವರ ಗದ್ದುಗೆಗೆ ಮಹಾ ರುದ್ರಾಭಿಷೇಕ

2law

ಪ್ರತಿ ವ್ಯಕ್ತಿಗೂ ಗುಣಮಟ್ಟದ ಕಾನೂನು ಕಾನೂನು ಖಾತ್ರಿಪಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.