ನಿಯಮ ಗಾಳಿಗೆ ತೂರಿ ಟವರ್‌ ನಿರ್ಮಾಣ

ಅನುಮತಿ ಪಡೆಯದೇ ಟವರ್‌ ನಿರ್ಮಾಣಕ್ಕೆ ಸಾರ್ವಜನಿಕರ ಆಕ್ರೋಶ

Team Udayavani, Sep 27, 2019, 1:17 PM IST

HV-TDY1

ಬಂಕಾಪುರ: ಅನಧಿಕೃತವಾಗಿ ಕಾನೂನು ನಿಯಮ ಗಾಳಿಗೆ ತೂರಿ ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ಮೊಬೈಲ್‌ ಟವರ್‌ಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಪುರಸಭೆ ಅಧಿಕಾರಿಗಳ ನಡೆ ಸಂಶಯಕ್ಕೆ ಎಡೆ ಮಾಡಿದೆ.

ಸಾಮಾನ್ಯವಾಗಿ ಪುರಸಭೆ ವ್ಯಾಪ್ತಿಯಲ್ಲಿ ಮೊಬೈಲ್‌ ಕಂಪನಿಗಳ ಟವರ್‌ ನಿರ್ಮಾಣ ಮಾಡಬೇಕಾದರೆ ಅನುಮತಿ ಪಡೆಯಬೇಕು. ಅನುಮತಿಗೆ ಅರ್ಜಿ ಸಲ್ಲಿಸುವಾಗ ಟವರ್‌ ನಿರ್ಮಾಣಕ್ಕೆ ಕೆಲವು ಕಟ್ಟು ನಿಟ್ಟಿನ ನಿಯಮ ಪಾಲಿಸಲು ಆದೇಶಿಸಲಾಗುತ್ತದೆ. ಈ ಕುರಿತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಸಹ ನಡೆಸಿ ಕಾನೂನು ಪಾಲನೆಯಾಗಿದ್ದರೆ ಮಾತ್ರ ಟವರ್‌ ನಿರ್ಮಾಣಕ್ಕೆ ಅನುಮೊದನೆ ನೀಡಿ, ಅಗತ್ಯ ತೆರಿಗೆ ಆಕರ ಮಾಡಲಾಗುವುದು. ಆದರೆ, ಪಟ್ಟಣದ ವ್ಯಾಪ್ತಿಯ ಹಲವು ಟವರ್‌ಗಳು ಅನುಮತಿ ಇಲ್ಲದೆಯೇ ನಿರ್ಮಿಸಲಾಗಿದೆ ಎನ್ನುವುದು ಆಶ್ಚರ್ಯಕರ ಸಂಗತಿ.

ನಿಯಮ ಪಾಲನೆಯಾಗದ ಪರಿಣಾಮ ಪುರಸಭೆಗೆ ಲಕ್ಷಾಂತರ ರೂ. ಆದಾಯಕ್ಕೆ ಕತ್ತರಿ ಬಿದ್ದಂತಾಗಿದೆ. ಈ ಕುರಿತು ಪ್ರಶ್ನಿಸಿ ಅನಧಿಕೃತವಾಗಿ ನಿರ್ಮಿಸಿರುವ ಟವರ್‌ ಸಂಸ್ಥೆಗಳಿಗೆ ನೋಟಿಸ್‌ ಸಹ ಜಾರಿ ಮಾಡದ ಅಧಿಕಾರಿಗಳು ಬೇಜವಾಬ್ದಾರಿತನ ತೋರುತ್ತಿದ್ದಾರೆ. ಪಟ್ಟಣದ ತಹಶೀಲ್ದಾರ್‌ ಪ್ಲಾಟ್‌ನಲ್ಲಿ ಪುರಸಭೆಯಿಂದ ಪರವಾನಗಿ ಪಡೆಯದೆ ನೂತನವಾಗಿ ಮೊಬೈಲ್‌ ಟವರ್‌ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ತಡೆಯುವಂತೆ ಅಲ್ಲಿ ವಾಸಿಸುವ ಸಾರ್ವಜನಿಕರು ಪುರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪುರಸಭೆ ಅಧಿಕಾರಿಗಳು ಬೇಕಾಬಿಟ್ಟಿ ಸ್ಥಳ ಭೇಟಿ ನಡೆಸಿ ಬಂದರೇ ಹೊರತು, ಸಾಧಕ ಬಾಧಕಗಳ ಕುರಿತು ಕ್ರಮ ವಹಿಸಿಲ್ಲ.

ಸಾರ್ವಜನಿಕರಿಂದ ಒತ್ತಡಗಳು ಬಂದಾಗ ಸ್ಥಳದ ಮಾಲೀಕರಿಗೊಂದು ನೋಟಿಸ್‌ ನೀಡಿ ಅಷ್ಟೋ ಇಷ್ಟೋ ದಂಡ ಹಾಕಿ ಸುಮ್ಮನಾಗುತ್ತಿದ್ದಾರೆ. ಸಾರ್ವಜನಿಕ ಸ್ಥಳ, ಶಾಲಾ, ಕಾಲೇಜು, ಆಸ್ಪತ್ರೆಗಳು ಇರುವ ಪ್ರದೇಶಗಳಲ್ಲಿ ಟವರ್‌ ನಿರ್ಮಾಣ ಮಾಡುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದ್ದರೂ ಈ ಎಲ್ಲ ಆದೇಶ ಗಾಳಿಗೆ ತೂರಿರುವ ಕಂಪನಿಗಳು ಎಲ್ಲೆಂದರಲ್ಲಿ ಟವರ್‌ ನಿರ್ಮಿಸಿ ಜನರ ಆರೋಗ್ಯದೊಂದೆಗೆ ಚಲ್ಲಾಟವಾಡುತ್ತಿವೆ.

ಕೂಡಲೇ ಸಂಬಂಧಪಟ್ಟ ಮೇಲಧಿಕಾರಿಗಳು ನಿದ್ದೆಯಿಂದ ಎಚ್ಚುತ್ತುಕೊಂಡು ಅನಧಿಕೃತವಾಗಿ ನಿರ್ಮಾಣವಾಗಿರುವ ಟವರ್‌ ಸಂಸ್ಥೆಗಳಿಗೆ ನೋಟಿಸ್‌ ನೀಡಿ, ಶುಲ್ಕ ಭರಿಸಲು ಕ್ರಮ ಕೈಗೊಳ್ಳಬೇಕು.

ಶಾಲಾ-ಕಾಲೇಜಿನ ಬಳಿ ನಿರ್ಮಿಸಿರುವ ಟವರ್‌ಗಳ ಸ್ಥಳಾಂತರಕ್ಕೆ ಆದೇಶಿಸಬೇಕು ಇಲ್ಲವಾದರೆ ಪುರಸಭೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ಪುರಸಭೆಯಿಂದ ಪರವಾನಗಿ ಪಡೆಯದೆ ಶಾಲೆ-ಕಾಲೇಜು, ಜನವಸತಿ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಟವರ್‌ ನಿರ್ಮಣ ಕಾರ್ಯ ನಿಲ್ಲಿಸುವಂತೆ ಮನವಿ ಸಲ್ಲಿಸಿದರೂ ಯಾವ ಸ್ಪಂದನೆಯೂ ಸಿಕ್ಕಿಲ್ಲ.– ಎನ್‌.ವಿ. ಪದ್ಮ, ಪುರಸಭೆ ಸದಸ್ಯೆ

-ಸದಾಶಿವ ಹಿರೇಮಠ

ಟಾಪ್ ನ್ಯೂಸ್

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21lakshmi

ಜನ ಕಲ್ಯಾಣಕ್ಕೆ ಕಾಂಗ್ರೆಸ್‌ ಬೆಂಬಲಿಸಿ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

23election

ವಾಕ್ಸಮರದ ಮಧ್ಯೆ ಮತದಾನಕ್ಕೆ ದಿನಗಣನೆ

1-bbm

ಹಾನಗಲ್ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ : ಸಿಎಂ ತಿರುಗೇಟು

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

incident held at hanooru

ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ದಾಳಿ ನಡೆಸಿ 40 ಕೆ.ಜಿ ಹಸಿ ಗಾಂಜಾ ವಶ: ಆರೋಪಿ ಪರಾರಿ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.