ಜಿಲ್ಲಾದ್ಯಂತ ಕೋವಿಡ್ 19 ಕಟ್ಟೆಚ್ಚರ

Team Udayavani, Mar 21, 2020, 3:35 PM IST

ಹಾವೇರಿ:  ಕೋವಿಡ್ 19 ವೈರಸ್‌ ಹರಡುವಿಕೆ ಮುನ್ನೆಚ್ಚರಿಕೆಯಾಗಿ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರಯಾಣಿಕರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್‌ ಮಾಡುವುದು ಜಿಲ್ಲೆಯ ರೈಲ್ವೆ ನಿಲ್ದಾಣಗಳಲ್ಲಿ ಮುಂದುವರಿದಿದ್ದು, ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ.

ಮಾ.15ರಿಂದಲೇ ಆರೋಗ್ಯ ಇಲಾಖೆ ಸಿಬ್ಬಂದಿಗಳ ತಂಡ ನಗರದ ರೈಲ್ವೆ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ದಿನ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ರೈಲ್ವೆ ಮಾರ್ಗವಾಗಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸುತ್ತಿದೆ. ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರು ಬಂದಲ್ಲಿ ಅವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಯಾವುದೇ ವ್ಯಕ್ತಿಯಲ್ಲಿ ಕೋವಿಡ್ 19 ವೈರಸ್‌ ಲಕ್ಷಣಗಳು ಕಂಡು ಬಂದಲ್ಲಿ ಜಿಲ್ಲಾಸ್ಪತ್ರೆಗೆ ಕಳಿಸಲು ವ್ಯವಸ್ಥೆ ಮಾಡಲಾಗಿದೆ.

ಆರೋಗ್ಯ ಇಲಾಖೆ ಸಹಾಯವಾಣಿ ಘಟಕ ಸ್ಥಾಪಿಸಲಾಗಿದೆ. ರೈಲ್ವೆ-ಬಸ್‌ ನಿಲ್ದಾಣಗಳಲ್ಲಿ ದಿನದ 24 ಗಂಟೆ ತಪಾಸಣೆ ನಡೆಸಬೇಕಾಗಿದೆ. ನಿತ್ಯವೂ ಹೊರರಾಜ್ಯ ಹಾಗೂ ಪ್ರದೇಶಗಳಿಂದ ಸಾವಿರಾರು ಪ್ರಯಾಣಿಕರು ಬಂದು ಹೋಗುವುದರಿಂದ ಮಾಹಿತಿ ಸಂಗ್ರಹಿಸಬೇಕಾದ ಕಾರಣ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿ ಪ್ರಯಾಣಿಕರನ್ನು ತಪಾಸಣೆ ನಡೆಸುವ ತಂಡಕ್ಕೆ ನೆರವಾಗಲು ಪೊಲೀಸ್‌ ನಿಯೋಜಿಸಲು ಕ್ರಮವಹಿಸಲಾಗಿದೆ.

ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಪ್ರಯಾಣದ ಮುನ್ನೆಚ್ಚರಿಕೆ ಕುರಿತಂತೆ ಹೆಲ್ತ್‌ ಡೆಸ್ಕ್ನಿಂದ ಜಾಗೃತಿ ಮೂಡಿಸಲಾಗುತ್ತದೆ. ಪ್ರಯಾಣಿಕರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರೈಲುಗಳು ನಿಲ್ದಾಣಕ್ಕೆ ಬರುವುದಕ್ಕಿಂತ ಮುನ್ನ ಹಾಗೂ ಬಂದ ಬಳಿಕ ಕೋವಿಡ್ 19 ವೈರಸ್‌ ಕುರಿತು ಧ್ವನಿವರ್ಧಕಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ. ಹಾಗೂ ರೈಲ್ವೆ ನಿಲ್ದಾಣದಲ್ಲಿರುವ ಕ್ಯಾಂಟೀನ್‌, ಮಿಲ್ಕ್ ಪಾರ್ಲರ್‌, ಕುಡಿಯುವ ನೀರಿನ ವ್ಯವಸ್ಥೆ ಹೊರತುಪಡಿಸಿ ಉಳಿದೆಲ್ಲ ಆಹಾರ ಪದಾರ್ಥ, ತಿಂಡಿ-ತಿನಿಸುಗಳ ಮಾರಾಟ ಹಾಗೂ ರೈಲ್ವೆ ಪ್ರಯಾಣಿಕರಿಗೆ ಒದಗಿಸಲಾಗುತ್ತಿದ್ದ ಬ್ಲಾಂಕೇಟ್‌ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ.

ಕೋವಿಡ್ 19 ವೈರಸ್‌ ಹಿನ್ನೆಲೆ ಹಾವೇರಿ ಮಾರ್ಗವಾಗಿ ಸಂಚರಿಸುತ್ತಿದ್ದ ಬೆಳಗ್ಗೆ 7 ಗಂಟೆಯ ಇಂಟರ್ಸಿಟಿ ಎಕ್ಸ್‌ ಪ್ರಸ್‌, ಬೆಳಗ್ಗೆ 5 ಗಂಟೆಯ ವಾಸ್ಕೋ ಯಶವಂತಪುರ, ಸಂಜೆ 7.35ರ ಇಂಟರ್ಸಿಟಿ ಎಕ್ಸ್‌ಪ್ರೆಸ್‌ ಹಾಗೂ ರಾತ್ರಿ 9 ಗಂಟೆಯ ಯಶವಂತಪುರ ವಾಸ್ಕೋ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರೈಲ್ವೆ ನಿಲ್ದಾಣದ ಶೌಚಗೃಹ, ಕಾರಿಡಾರ್‌ ಗಳ ಸ್ವಚ್ಛತೆ ಪ್ರತಿದಿನ ನಡೆಯುತ್ತಿದೆ.ಹರಿಹರ, ಹುಬ್ಬಳ್ಳಿ, ಯಶವಂತಪುರ ಹಾಗೂ ಬೆಂಗಳೂರಿನಲ್ಲಿ ಪ್ರತಿದಿನ ಸಂಚರಿಸುವ ರೈಲುಗಳ ಪ್ರತಿ ಭೋಗಿಯನ್ನೂ ಸ್ವಚ್ಛತೆ ಮಾಡಲಾಗುತ್ತಿದೆ. -ವಿಜಯಕುಮಾರ್‌ ಸಿಂಗ್‌ ರೈಲ್ವೆ ನಿಲ್ದಾಣಾಧಿಕಾರಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ