Udayavni Special

ಅನಧಿಕೃತ ಮರಳು-ಗಣಿಗಾರಿಕೆಗೆ ಕಡಿವಾಣ ಹಾಕಿ

•ಮರಳುಗಾರಿಕೆ ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿ• ನಿರ್ದಿಷ್ಟ ದರದಲ್ಲಿ ವ್ಯವಸ್ಥಿತವಾಗಿ ವಿತರಿಸಲು ಕ್ರಮ ಕೈಗೊಳ್ಳಿ

Team Udayavani, Jul 3, 2019, 10:16 AM IST

hv-tdy-1..

ಹಾವೇರಿ: ಸಚಿವ ರಾಜಶೇಖರ ಪಾಟೀಲ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಹಾವೇರಿ: ಜಿಲ್ಲೆಯಲ್ಲಿ ಅನಧಿಕೃತ ಮರಳುಗಾರಿಕೆ ಹಾಗೂ ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಅಧಿಕಾರಿಗಳಿಗೆ ಆದೇಶ ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ಸಂಬಂಧಿಸಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಗಣಿ ಇಲಾಖೆಯಿಂದ ಗುರುತಿಸಲಾದ ಅಧಿಕೃತ ಮರಳು ಬ್ಲಾಕ್‌ಗಳ ಹೊರತಾಗಿಯೂ ಜಿಲ್ಲೆಯ ಕೆಲವೆಡೆ ಸಣ್ಣ ಸಣ್ಣ ಮರಳು ಬ್ಲಾಕ್‌ಗಳಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇಂಥ ಬ್ಲಾಕ್‌ಗಳಿಗೆ ಭೇಟಿ ನೀಡಿ ಆ ಮರಳು ಕಟ್ಟಡ ನಿರ್ಮಾಣಕ್ಕೆ ಯೋಗ್ಯವೇ ಎಂದು ಪರಿಶೀಲಿಸಿ ಯೋಗ್ಯವೆನಿಸಿದರೆ ನಿರ್ದಿಷ್ಟ ದರದಲ್ಲಿ ವ್ಯವಸ್ಥಿತವಾಗಿ ಮರಳು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ದಾಸ್ತಾನಿರುವ ಮರಳನ್ನು ಸರ್ಕಾರಿ ದರದಂತೆ ಜನತಾ ಮನೆಗಳಿಗೆ ವಿತರಿಸಲು ಕ್ರಮವಹಿಸಬೇಕು. ಬಡವರು ಮನೆ ಕಟ್ಟಿಕೊಳ್ಳಲು ಹಾಗೂ ಗುಡಿ ಗೋಪುರಗಳಿಗೆ ಸುಲಭದಲ್ಲಿ ಕಡಿಮೆ ದರದಲ್ಲಿ ಮರಳು ದೊರಕುವಂತೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ, ಶಾಸಕ ಸಿ.ಎಂ. ಉದಾಸಿ ಮಾತನಾಡಿ, ಜನತಾ ಮನೆಗಳು, ಸಣ್ಣ ಸಣ್ಣ ಗುಡಿ ನಿರ್ಮಾಣ ಕೆಲಸಕ್ಕೆ ಮರಳು ಸಿಗದೆ ತೊಂದರೆಯಾಗಿದೆ. ಕೆಲ ಹಳ್ಳ ಹಾಗೂ ನದಿ ಪಾತ್ರದಲ್ಲಿ ಟ್ರ್ಯಾಕ್ಟರ್‌ ಮೂಲಕ ಅನಧಿಕೃತವಾಗಿ ಮರಳು ಸಾಗಾಣಿಕೆ ಮಾಡುತ್ತಿರುವ ದೂರುಗಳು ಬರುತ್ತಿವೆ. ಕೆಲ ಅಧಿಕಾರಿಗಳೇ ಇದಕ್ಕೆ ಸಹಕರಿಸುತ್ತಿರುವ ದೂರುಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು. ಎಲ್ಲೆಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಗುರುತಿಸಿದ ಮರಳು ಬ್ಲಾಕ್‌ಗಳನ್ನು ಹೊರತುಪಡಿಸಿ ಇತರೆಡೆ ಸಿಗುವ ಮರಳನ್ನು ಗುರುತಿಸಿ ವ್ಯವಸ್ಥಿತವಾಗಿ ವಿತರಣೆಗೆ ಕ್ರಮವಹಿಸಬೇಕು ಎಂದರು.

1.50ಲಕ್ಷ ಟನ್‌ ದಾಸ್ತಾನು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಲತಾ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಒಟ್ಟು 18 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಂದು ಬ್ಲಾಕಿನ ಗುತ್ತಿಗೆ ಮಂಜೂರಾಗಿಲ್ಲ. ಉಳಿದಂತೆ 17 ಬ್ಲಾಕಿನಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಕೆಲ ದೂರಗಳ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮರಳು ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ. 17 ಮರಳು ಬ್ಲಾಕಿನ ಸ್ಟಾಕ್‌ ಯಾರ್ಡ್‌ಗಳಲ್ಲಿ 1.50 ಲಕ್ಷ ಟನ್‌ ಮರಳು ದಾಸ್ತಾನಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 39 ಕಲ್ಲುಗಣಿ ಗುತ್ತಿಗೆಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ 32 ಕಲ್ಲುಗಣಿಗಳ ಗುತ್ತಿಗೆ ಅವಧಿ ಮುಗಿದಿದೆ. ಕಲ್ಲು ಪುಡಿ ಘಟಕಗಳ ಆರಂಭಿಸುವ ಕುರಿತಂತೆ ಜಿಲ್ಲಾ ಸಮಿತಿ 92 ಅರ್ಜಿಗಳನ್ನು ಸ್ವೀಕರಿಸಿದೆ. 2018 ರಿಂದ ಈ ವರೆಗೆ 41 ಮೊಕದ್ದಮೆಯನ್ನು ದಾಖಲಿಸಿ 77.31 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ವಾರ್ಷಿಕವಾಗಿ 2016ರಿಂದ ಈ ವರೆಗೆ ಜಿಲ್ಲಾ ಖನಿಜ ಪ್ರತಿಷ್ಠಾನ ಸಂಗ್ರಹಿಸಿದ ಮೊತ್ತ 3.33 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೇವರಾಜ, ಸವಣೂರ ಉಪವಿಭಾಗಾಧಿಕಾರಿ ಹರ್ಷಲ್ ನಾರಾಯಣ ಭೋಯಾರ್‌, ವಿವಿಧ ತಾಲೂಕಿನ ತಹಶೀಲ್ದಾರ್‌ ಇದ್ದರು.

ಇಂದು ಮರಳು ನೀತಿ ಜಾರಿಗೆ ಡಿಸಿಎಂ ಜತೆ ಸಭೆ:

 ರಾಜ್ಯದಲ್ಲಿ ಯಾವ ರೀತಿಯ ಮರಳುನೀತಿ ಜಾರಿಗೆ ತರಬೇಕು ಎಂಬ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಜು. 3ರಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಹೊಸ ಮರಳುನೀತಿ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ತಿಳಿಸಿದರು. ಮಂಗಳವಾರ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದೇಶದ ಐದಾರು ರಾಜ್ಯಗಳಿಗೆ ಅಧಿಕಾರಿಗಳ ತಂಡ ಕಳುಹಿಸಿ ಮರಳುನೀತಿ ಬಗ್ಗೆ ಅಧ್ಯಯನ ಮಾಡಿಸಲಾಗಿದೆ. ಅಧಿಕಾರಿಗಳು ಜು. 3ರ ಸಭೆಯಲ್ಲಿ ಅಧ್ಯಯನ ವರದಿ ಪ್ರಸ್ತಾಪಿಸಲಿದ್ದಾರೆ. ಪ್ರಸ್ತುತ ತೆಲಂಗಾಣ ಮಾದರಿ ಉತ್ತಮ ಎಂದು ಭಾವಿಸಲಾಗಿದೆ. ಆದರೆ, ನಾಳೆ ಸಭೆಯಲ್ಲಿಯೇ ಈ ಕುರಿತಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಸದ್ಯ ಸರ್ಕಾರಿ ದರ ಪ್ರತಿ ಟನ್‌ಗೆ 900 ರೂ. ನಿಗಯಾಗಿದೆ. ಈ ದರ ಬಡವರಿಗೆ ದುಬಾರಿಯಾಗುತ್ತದೆ ಎಂಬ ದೂರುಗಳಿವೆ. ಹೀಗಾಗಿ ಇದೇ ಸಭೆಯಲ್ಲಿ ಬಡವರಿಗೆ ಕಡಿಮೆ ಹಾಗೂ ಸುಲಭವಾಗಿ ಮರಳು ವಿತರಣೆಗೆ ಏನು ಕ್ರಮ ಕೈಗೊಳ್ಳಬಹುದು ಎಂಬ ತೀರ್ಮಾನ ಕೈಗೊಳ್ಳಲಾಗುವುದು. ಇದರಿಂದ ರಾಜ್ಯಾದ್ಯಂತ ಮರಳು ವಿತರಣೆಗೆ ಒಂದು ಸ್ಪಷ್ಟವಾದ ನೀತಿ ರೂಪುಗೊಳ್ಳಲಿದೆ ಎಂದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

“ಯಾರೂ ಅಲ್ಲಾ, ಯಡಿಯೂರಪ್ಪಾನೇ ವಿಲನ್”: ಸಚಿವ ಸೋಮಶೇಖರ್ ಹೇಳಿಕೆ

“ಯಾರೂ ಅಲ್ಲಾ, ಯಡಿಯೂರಪ್ಪಾನೇ ವಿಲನ್”: ಸಚಿವ ಸೋಮಶೇಖರ್ ಹೇಳಿಕೆ

ಪೇಶಾವರ: ಭಾರೀ ಸ್ಫೋಟ, ಏಳು ಮಕ್ಕಳ ಸಾವು, 70 ಮಂದಿಗೆ ಗಾಯ

ಪೇಶಾವರ: ಭಾರೀ ಸ್ಫೋಟ, ಏಳು ಮಕ್ಕಳ ಸಾವು, 70 ಮಂದಿಗೆ ಗಾಯ

ನಟಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ನಟಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್ ಅಠವಳೆ ಪಕ್ಷ ಸೇರ್ಪಡೆ

ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್ ಅಠವಳೆ ಪಕ್ಷ ಸೇರ್ಪಡೆ

ಕಳ್ಳದಾಸ್ತಾನು ವಿರುದ್ಧ ಕ್ರಮದ ಎಚ್ಚರಿಕೆ ಬೆನ್ನಲ್ಲೇ ಈರುಳ್ಳಿ ದರ ಇಳಿಕೆ

ಕಳ್ಳದಾಸ್ತಾನು ವಿರುದ್ಧ ಕ್ರಮದ ಎಚ್ಚರಿಕೆ ಬೆನ್ನಲ್ಲೇ ಈರುಳ್ಳಿ ದರ ಇಳಿಕೆ

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದೋಣಿ ಅವಘಡ: ನಾಲ್ವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದೋಣಿ ಅವಘಡ: ನಾಲ್ವರು ಸಾವು, ಹಲವರು ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನುದಾನ ರಹಿತ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಿ

ಅನುದಾನ ರಹಿತ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಿ

hv-tdy-1

ಪ್ರೊ| ಸಂಕನೂರಗೆ ಮತ ನೀಡಿ ಗೆಲ್ಲಿಸಿ

HV-TDY-1

ಸಿಬ್ಬಂದಿ-ಮತದಾರರ ಆರೋಗ್ಯ ರಕ್ಷಣೆಗೆ ಕ್ರಮ

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಗೆ ಗೆಲವು: ಎಚ್.ಕೆ. ಪಾಟೀಲ್ ವಿಶ್ವಾಸ

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಗೆ ಗೆಲವು: ಎಚ್.ಕೆ. ಪಾಟೀಲ್ ವಿಶ್ವಾಸ

ಹಾವೇರಿ ಜಿಲ್ಲೆಯಲ್ಲಿ 97 ಜನರಿಗೆ ಕೋವಿಡ್ ಸೋಂಕು; 54 ಜನ ಗುಣಮುಖ

ಹಾವೇರಿ ಜಿಲ್ಲೆಯಲ್ಲಿ 97 ಜನರಲ್ಲಿ ಕೋವಿಡ್ ಸೋಂಕು ಪತ್ತೆ ; 54 ಮಂದಿ ಗುಣಮುಖ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

bng-tdy-2

ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್‌ ಬೆಂಬಲಿಸಿ

ಆರ್‌.ಆರ್‌. ನಗರದಲ್ಲಿ ಡಿ.ಕೆ.ಸುರೇಶ್‌ ಕಾರ್ಯತಂತ್ರ

ಆರ್‌.ಆರ್‌. ನಗರದಲ್ಲಿ ಡಿ.ಕೆ.ಸುರೇಶ್‌ ಕಾರ್ಯತಂತ್ರ

ಹುಬ್ಬಳ್ಳಿ: ವಿಭವ ಇಂಡಸ್ಟ್ರೀಸ್‌ನಲ್ಲಿ ಅಗ್ನಿಅನಾಹುತ; ಕೋಟ್ಯಂತರ ರೂ. ಮೌಲ್ಯದ ವಸ್ತು ಹಾನಿ

ಹುಬ್ಬಳ್ಳಿ: ವಿಭವ ಇಂಡಸ್ಟ್ರೀಸ್‌ನಲ್ಲಿ ಅಗ್ನಿಅನಾಹುತ; ಕೋಟ್ಯಂತರ ರೂ. ಮೌಲ್ಯದ ವಸ್ತು ಹಾನಿ

“ಯಾರೂ ಅಲ್ಲಾ, ಯಡಿಯೂರಪ್ಪಾನೇ ವಿಲನ್”: ಸಚಿವ ಸೋಮಶೇಖರ್ ಹೇಳಿಕೆ

“ಯಾರೂ ಅಲ್ಲಾ, ಯಡಿಯೂರಪ್ಪಾನೇ ವಿಲನ್”: ಸಚಿವ ಸೋಮಶೇಖರ್ ಹೇಳಿಕೆ

ಕೋವಿಡ್‌ ಹಿನ್ನೆಲೆ: ಧಾರವಾಡ ಬಂಡೆಮ್ಮ ದೇವಸ್ಥಾನದಲ್ಲಿ ಕೃತಕ ಆನೆ ಬಳಸಿ ಜಂಬೂ ಸವಾರಿ!

ಕೋವಿಡ್‌ ಹಿನ್ನೆಲೆ: ಧಾರವಾಡ ಬಂಡೆಮ್ಮ ದೇವಸ್ಥಾನದಲ್ಲಿ ಕೃತಕ ಆನೆ ಬಳಸಿ ಜಂಬೂ ಸವಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.