Udayavni Special

ಕೋವಿಡ್‌ ಜಾಗೃತಿಗೆ ರಸ್ತೆಗಿಳಿದ ಡಿಸಿ


Team Udayavani, Apr 9, 2021, 8:56 PM IST

ಬಗ್ದಹ

ಹಾವೇರಿ : ಕೋವಿಡ್‌ ಸೋಂಕು ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮಾಸ್ಕ್ ಧರಿಸುವ ಕುರಿತಂತೆ ಜಾಗೃತಿ ಮೂಡಿಸಲು, ಜಿಲ್ಲಾ ಧಿಕಾರಿ ಸಂಜಯ ಶೆಟ್ಟೆಣ್ಣವರ ನಗರದ ಗಾಂಧಿ ವೃತ್ತದಿಂದ ಹೊಸಮನಿ ಸಿದ್ಧಪ್ಪ ವೃತ್ತದವರೆಗೆ ಪಾದಯಾತ್ರೆ ನಡೆಸಿದರು.

ನಗರದ ಗಾಂ ಧಿ ವೃತ್ತದಲ್ಲಿ ಪೊಲೀಸ್‌ ಇಲಾಖೆ ಕೋವಿಡ್‌-19ರ ಜಾಗೃತಿಗಾಗಿ ಹಮ್ಮಿಕೊಂಡಿದ್ದ ವಾಹನ ರ್ಯಾಲಿಗೆ ಹಸಿರು ನಿಶಾನೆ ತೋರಿಸಿ, ಗಾಂಧಿ ವೃತ್ತದಿಂದ ಮೈಲಾರ ಮಹದೇವ ವೃತ್ತದ ವರೆಗೆ ಬೀದಿಬದಿ ವ್ಯಾಪಾರಸ್ಥರು, ಸಾರ್ವಜನಿಕರು, ರೈತಾಪಿ ಜನರು ಹಾಗೂ ಕಾರ್ಮಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು. ಅಲ್ಲದೇ, ಸುರಕ್ಷತಾ ಕ್ರಮ ಅನುಸರಿಸಿ ಕೋವಿಡ್‌ನಿಂದ ದೂರ ಉಳಿಯಿರಿ ಎಂದು ತಿಳಿವಳಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಬೀದಿ ಬದಿಯ ವಿಕಲಚೇತನ ವ್ಯಾಪಾರಿಯೋರ್ವನ ಯೋಗಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿಗಳು, ಅವನ ಆರ್ಥಿಕ ಸ್ಥಿತಿಗತಿಗಳು, ಕೌಟುಂಬಿಕ ಹಿನ್ನೆಲೆಯ ಮಾಹಿತಿ ಪಡೆದರು. ಪ್ರಧಾನ ಮಂತ್ರಿ ಸ್ವನಿಧಿಯೋಜನೆಯಡಿ ಈತನಿಗೆ ಸೌಲಭ್ಯ ಒದಗಿಸುವಂತೆ ಹಾವೇರಿ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕೋವಿಡ್‌ ಜಾಗೃತಿ ಕುರಿತಂತೆ ಮಾಹಿತಿ ನೀಡಿ, ಕೋವಿಡ್‌ ಎರಡನೇ ಅಲೆ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆ ಸಾರ್ವಜನಿಕರು ಸ್ವಯಂ ರಕ್ಷಣೆ ಕುರಿತಂತೆ ಪೊಲೀಸ್‌ ಇಲಾಖೆ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಗುಂಪುಗೂಡದೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಿ ಓಡಾಡುವ ಕುರಿತಂತೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇಂದು ಪೊಲೀಸ್‌ ವಾಹನಗಳ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು. ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸುವವರಿಗೆ 100 ರೂ. ದಂಡ ಹಾಕಲಾಗುತ್ತದೆ. ಈಗಾಗಲೇ 700ಕ್ಕೂ ಹೆಚ್ಚು ಜನರಿಗೆ ದಂಡ ವಿಧಿಸಲಾಗಿದೆ. ಕೋವಿಡ್‌ ನಿಯಮಗಳ ಉಲ್ಲಂಘನೆ ಮೇಲೆ ನಿಗಾ ವಹಿಸಲು ಜಿಲ್ಲಾ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ತಲಾ ಐದು ಜನರಂತೆ 100 ತಂಡಗಳನ್ನು ರಚಿಸಿ ನಿಗಾ ವಹಿಸಲಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿಕೊಂಡರು.

ರ್ಯಾಲಿಯಲ್ಲಿ ಪೌರಾಯುಕ್ತ ಚಲವಾದಿ, ಡಿವೈಎಸ್‌ಪಿ ಶಂಕರ ಮಾರಿಹಾಳ, ಡಿವೈಎಸ್‌ಪಿ ವಿಜಯಕುಮಾರ ಸಂತೋಷ, ಸಿಪಿಐ ಸಂತೋಷ ಪವಾರ್‌, ನಾಗಮ್ಮ, ಬಸವರಾಜ, ಸಂತೋಷಕುಮಾರ, ಪಿಎಸ್‌ಐಗಳಾದ ನಂದಿ, ಬೆಟಗೇರಿ, ಆರ್‌ಪಿಐ ಮಾರುತಿ ಹೆಗಡೆ, ಶಹರ, ಗ್ರಾಮೀಣ ಹಾಗೂ ಸಂಚಾರಿ ಪೊಲೀಸ್‌ ಠಾಣೆ ಅ ಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೆತ್ತವರಿಗೆ ಕೋವಿಡ್ ಸೋಂಕು

ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೆತ್ತವರಿಗೆ ಕೋವಿಡ್ ಪಾಸಿಟಿವ್

ದ.ಕ. ಜಿಲ್ಲೆ: ವಾರಾಂತ್ಯ ಕರ್ಫ್ಯೂ ಇಲ್ಲ :  ಜಿಲ್ಲಾಧಿಕಾರಿ ಸ್ಪಷ್ಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ :  ಜಿಲ್ಲಾಧಿಕಾರಿ ಸ್ಪಷ್ಟನೆ

yyyeeee

ರಾಕೆಟ್ ದಾಳಿಯಲ್ಲಿ ಮಡಿದ ಕೇರಳದ ಸೌಮ್ಯ ಕುಟುಂಬದ ಜವಾಬ್ದಾರಿ ಹೊತ್ತ  ಇಸ್ರೇಲ್ ಸರ್ಕಾರ

13-11

ಅದ್ಧೂರಿ ಕಲ್ಯಾಣ ಮಹೋತ್ಸವ ಕನಸಿಗೆ ಕೊರೊನಾ ಕೊಕ್ಕೆ !

ಕೋವಿಡ್ ಕೇರ್ ಸೆಂಟರ್‌ನಲ್ಲಿ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲವೆಂದು ಸೋಂಕಿತರ ಪ್ರತಿಭಟನೆ

ಕೋವಿಡ್ ಕೇರ್ ಸೆಂಟರ್‌ನಲ್ಲಿ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲವೆಂದು ಸೋಂಕಿತರ ಪ್ರತಿಭಟನೆ

200 crore covid 19 shots to be available by end of 2021 says union govt

ಆಗಸ್ಟ್ – ಸಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಲಸಿಕೆ..!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

An increase in the death rate

ಸಾವಿನ ಪ್ರಮಾಣ ಹೆಚ್ಚಳ; ಶುರುವಾಯ್ತು ತಳಮಳ

jhmghjgjy

ಆಕ್ಸಿಜನ್‌ ಬೆಡ್‌ಗೆ ಟೈಮರ್‌ ಅಳವಡಿಸಿ

tyrr

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಶವ ಅದಲು-ಬದಲು

uihyghtuyg

ಕೋವಿಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ

uyuty

ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

13-21

ದಾದಿಯರ ಸೇವೆ ಅವಿಸ್ಮರಣೀಯ

13-20

ಕೊರೊನಾ ತಡೆಗೆ ತಂಡವಾಗಿ ಕೆಲಸ ಮಾಡಿ

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

13-19

ಹಳ್ಳಿ ಜನರಲ್ಲಿ ಜಾಗೃತಿ ಮೂಡಿಸಿ: ಸಿ.ಟಿ.ರವಿ

13-18

ಕೋವಿಡ್‌ ಆಸ್ಪತ್ರೆಗಳಿಗೆ ನಾಸೀರ್‌ ಹುಸೇನ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.