ಸರಕಾರಿ ಶಾಲೆ ದಾಖಲಾತಿ ಪ್ರಮಾಣ ಕುಸಿತ

21,595 ಮಕ್ಕಳ ಕಡಿಮೆ ದಾಖಲಾತಿ ; ಖಾಸಗಿ ಶಾಲೆಗಳಲ್ಲಿ ಹೆಚ್ಚಿದ ಪ್ರವೇಶ ; 5ನೇ ತರಗತಿಯಲ್ಲಿ ತುಸು ಏರಿಕೆ

Team Udayavani, Jul 11, 2022, 4:34 PM IST

12

ಹಾವೇರಿ: ಮಹಾಮಾರಿ ಕೊರೊನಾದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ ಸಮಯದಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಏರಿಕೆ ಕಂಡು ಬಂದಿತ್ತು. ಆದರೆ ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ವರ್ಷ ದಾಖಲಾತಿ ಪ್ರಮಾಣ ಇಳಿಕೆ ಕಂಡಿದ್ದು, ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ 21,595 ಮಕ್ಕಳು ಈ ಸಲ ಕಡಿಮೆ ದಾಖಲಾಗಿದ್ದಾರೆ.

ಕೊರೊನಾ ಸೋಂಕು ವ್ಯಾಪಿಸಿ ಶಾಲಾ ಕಾಲೇಜುಗಳು ಬಂದ್‌ ಆಗಿದ್ದರೂ 2020-21, 2021-22ನೇ ಶೈಕ್ಷಣಿಕ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದರು. ಇದರಿಂದ ಕನ್ನಡ ಶಾಲೆಗಳಿಗೆ ಮರುಜೀವ ಬಂದಂತಾಗಿತ್ತು. ಆದರೆ, ಈ ಸಲ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. 2021-22ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಸೇರಿದಂತೆ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ 2,86,617 ಮಕ್ಕಳು ಪ್ರವೇಶ ಪಡೆದಿದ್ದರು. ಕೊರೊನಾ ಸಂದರ್ಭದಲ್ಲಿನ ಕಲಿಕೆಯ ಹಿಂದುಳಿಯುವಿಕೆ ತುಂಬುವ ಸಲುವಾಗಿ ಈ ಸಲ ಮೇ 16ರಿಂದಲೇ ತರಗತಿ ಆರಂಭಿಸಿ ಕಲಿಕಾ ಚೇತರಿಕೆ ಆರಂಭಿಸಲಾಗಿತ್ತು. ಶಿಕ್ಷಣ ಇಲಾಖೆಯ ಸ್ಯಾಟ್ಸ್‌ (ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್‌ ವ್ಯವಸ್ಥೆ ) ಅಂಕಿ ಅಂಶದ ಪ್ರಕಾರ ಈ ಸಲ ಪ್ರವೇಶ ಪಡೆದ ಮಕ್ಕಳ ಸಂಖ್ಯೆ 2,65,023. ಅಂದರೆ, ಕಳೆದ ವರ್ಷಕ್ಕಿಂತ 21,594 ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಕಡಿಮೆಯಾಗಿದ್ದಾರೆ.

1ನೇ ತರಗತಿಗೆ ಕಡಿಮೆ ಪ್ರವೇಶ: ಪಾಲಕರು ಸಾಮಾನ್ಯವಾಗಿ ತಮ್ಮ ಮಕ್ಕಳನ್ನು ಯಾವ ಶಾಲೆಗೆ ಸೇರಿಸಬೇಕು ಎಂಬುದನ್ನು 1ನೇ ತರಗತಿಯಲ್ಲಿ ನಿರ್ಧರಿಸುತ್ತಾರೆ. 1ನೇ ತರಗತಿ ದಾಖಲಾತಿ ಪ್ರಮಾಣ ಹೆಚ್ಚಾದರೆ ಮರು ವರ್ಷ ಮುಂದಿನ ತರಗತಿಗಳಲ್ಲೂ ಹೆಚ್ಚು ಕಡಿಮೆ ಅದೇ ಸಂಖ್ಯೆ ಮುಂದುವರಿಯುತ್ತದೆ. ಆದರೆ ಈ ಸಲ 1ನೇ ತರಗತಿಗೆ ಪ್ರವೇಶ ಪಡೆದ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ.

ಕಳೆದ ವರ್ಷ 1ನೇ ತರಗತಿಗೆ 31,862 ಮಕ್ಕಳು ಪ್ರವೇಶ ಪಡೆದಿದ್ದರೆ, ಈ ಸಲ 21,391 ಮಕ್ಕಳಷ್ಟೇ 1ನೇ ತರಗತಿಗೆ ಸರ್ಕಾರಿ ಶಾಲೆ ಸೇರಿದ್ದಾರೆ. ಅಂದರೆ 10,471 ಮಕ್ಕಳು ಪ್ರಸಕ್ತ ವರ್ಷ 1ನೇ ತರಗತಿಗೆ ಕಡಿಮೆಯಾಗಿದ್ದಾರೆ. ಅದೇ ರೀತಿ ಪ್ರೌಢಶಾಲೆಯ 8ನೇ ತರಗತಿಗೆ ಕಳೆದ ವರ್ಷ 27,620 ಮಕ್ಕಳಿದ್ದರೆ, ಈ ವರ್ಷ 24,262 ಮಕ್ಕಳು ಪ್ರವೇಶ ಪಡೆದಿದ್ದಾರೆ. ಇಲ್ಲೂ ಸುಮಾರು ಮೂರುವರೆ ಸಾವಿರ ಮಕ್ಕಳು ಕಡಿಮೆಯಾಗಿದ್ದಾರೆ. ಆದರೆ, 5ನೇ ತರಗತಿ ಪ್ರವೇಶಾತಿಯಲ್ಲಿ ಮಾತ್ರ ಈ ಸಲ ಸ್ವಲ್ಪ ಸುಧಾರಣೆ ಕಂಡಿದೆ. ಹೋದ ವರ್ಷ 28,607 ಮಕ್ಕಳು 5ನೇ ತರಗತಿಯಲ್ಲಿದ್ದರೆ, ಈ ವರ್ಷ 28,7011 ಮಕ್ಕಳಿದ್ದಾರೆ.

ಖಾಸಗಿ ಶಾಲೆಗಳತ್ತ ಹೆಜ್ಜೆ ಕೊರೊನಾ ಸಂದರ್ಭದಲ್ಲಿ ಸರ್ಕಾರಿ, ಖಾಸಗಿ ಶಾಲೆಗಳು ಬಂದ್‌ ಆಗಿದ್ದವು. ಖಾಸಗಿ ಶಾಲೆಗಳು ಆನ್‌ಲೈನ್‌ ತರಗತಿ ನಡೆಸಿದ್ದವು. ಸರ್ಕಾರಿ ಶಾಲೆ ಶುರುವಾದರೂ ಅನೇಕ ಖಾಸಗಿ ಶಾಲೆಗಳು ಭೌತಿಕ ತರಗತಿಗಳನ್ನು ನಡೆಸಿರಲಿಲ್ಲ. ಇದರಿಂದ ಗ್ರಾಮೀಣ ಭಾಗದ ಮಕ್ಕಳು ಸ್ಥಳೀಯವಾಗಿಯೇ ಇರುವ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದರು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಲ್ಲ ಶಾಲೆಗಳು ಆರಂಭವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದ ಅನೇಕ ಮಕ್ಕಳು ಖಾಸಗಿ ಶಾಲೆಗಳತ್ತ ತೆರಳಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಎಲ್ಲ ತಾಲೂಕುಗಳಲ್ಲಿ ಇಳಿಕೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸರ್ಕಾರಿ ಶಾಲೆಗಳ ಪ್ರವೇಶಾತಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಬ್ಯಾಡಗಿ ತಾಲೂಕಿನಲ್ಲಿ ಕಳೆದ ವರ್ಷ 25,455 ಮಕ್ಕಳಿದ್ದರೆ, ಈ ಸಲ 23,381ಕ್ಕೆ ಕುಸಿದಿದೆ. ಹಾನಗಲ್ಲ ತಾಲೂಕಿನಲ್ಲಿ ಹಿಂದಿನ ಸಾಲಿನಲ್ಲಿ 46,259 ಮಕ್ಕಳಿದ್ದರೆ, ಈ ಸಲ 43 ಸಾವಿರ ವಿದ್ಯಾರ್ಥಿಗಳಿದ್ದಾರೆ. ಹಾವೇರಿ ತಾಲೂಕಿನಲ್ಲಿ 21-22ನೇ ಸಾಲಿನಲ್ಲಿ 53,194 ಮಕ್ಕಳಿದ್ದರೆ, ಈ ವರ್ಷ 49,579 ಮಕ್ಕಳಿದ್ದಾರೆ. ಹಿರೇಕೆರೂರಿನಲ್ಲಿ ಕಳೆದ ವರ್ಷ 36,248 ಮಕ್ಕಳಿದ್ದರೆ, ಈ ಸಾಲಿಗೆ 33,491 ಮಕ್ಕಳಿದ್ದಾರೆ. ಕಳೆದ ವರ್ಷ ರಾಣಿಬೆನ್ನೂರು ತಾಲೂಕಿನಲ್ಲಿ 60,014 ಮಕ್ಕಳಿದ್ದರೆ, ಈ ಸಲ 55,275 ಮಕ್ಕಳು ದಾಖಲಾಗಿದ್ದಾರೆ. ಸವಣೂರು ತಾಲೂಕಿನಲ್ಲಿ ಕಳೆದ ಸಲ 30,017 ಮಕ್ಕಳಿದ್ದು, ಈ ಬಾರಿ 27,372 ವಿದ್ಯಾರ್ಥಿಗಳಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ ಕಳೆದ ಸಾಲಿನಲ್ಲಿ 35,372 ಮಕ್ಕಳಿದ್ದು, ಈ ವರ್ಷ 32,925 ವಿದ್ಯಾರ್ಥಿಗಳಿದ್ದಾರೆ. ಎಲ್ಲ ತಾಲೂಕುಗಳಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಇಳಿಕೆಯಾಗಿದೆ.

ವಿದ್ಯಾರ್ಥಿಗಳ ದಾಖಲಾತಿಯನ್ನು ಸ್ಯಾಟ್ಸ್‌ನಲ್ಲಿ ಅಪ್‌ಲೋಡ್‌ ಮಾಡುವ ಪ್ರಕ್ರಿಯೆ ಇನ್ನು ನಡೆಯುತ್ತಿದೆ. ಅಲ್ಲದೇ ಮಕ್ಕಳ ಪ್ರವೇಶ ಪ್ರಕ್ರಿಯೆ ಜು. 15ರವರೆಗೂ ಇದೆ. ಆದರೂ ಕಳೆದ ವರ್ಷಕ್ಕೆ ಹೋಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿ ಕಡಿಮೆಯಾಗಿದೆ. ಅನೇಕ ಮಕ್ಕಳು ಖಾಸಗಿ ಶಾಲೆಗಳತ್ತ ಹೋಗಿದ್ದಾರೆ.  –ಬಿ.ಎಸ್‌. ಜಗದೀಶ್ವರ, ಡಿಡಿಪಿಐ ಹಾವೇರಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.