ಅಭಿವೃದ್ಧಿ ಕಾರ್ಯ ಮತದಾರರ ಸೆಳೆಯುತ್ತಿವೆ


Team Udayavani, Oct 13, 2021, 1:28 PM IST

fghtyt6yt

ಹಾನಗಲ್ಲ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳೇ ಮತದಾರರನ್ನು ಸೆಳೆಯುತ್ತಿದ್ದು, ಬಿಜೆಪಿ ಗೆಲುವು ಖಚಿತವಾಗಿದೆ. ಈಗಾಗಲೇ ಹುಬ್ಬಳ್ಳಿ, ಧಾರವಾಡ, ಕಲಬುರಗಿಯಲ್ಲಿ ನಡೆದ ನಗರಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ ಮುಖಭಂಗ ಎದುರಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ ತಿಳಿಸಿದರು.

ಮಂಗಳವಾರ ತಾಲೂಕಿನ ಹುಣಶೆಟ್ಟಿಕೊಪ್ಪ, ಮಂತಗಿ, ಚಿಕ್ಕಾಂಸಿಹೊಸುರು, ಸಮ್ಮಸಗಿ, ಶಿರಗೋಡ, ಹೀರೂರ, ಗೆಜ್ಜಿಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ದಿ.ಸಿ.ಎಂ.ಉದಾಸಿ ಅವರು ಶಾಸಕರಾಗಿ, ಮಂತ್ರಿಯಾಗಿ ಹಾನಗಲ್ಲ ತಾಲೂಕು ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿರುವುದನ್ನು ಅವರ ಕೆಲಸಗಳೇ ಹೇಳುತ್ತವೆ. ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ದೀನ-ದಲಿತರಿಗೆ ನ್ಯಾಯ ಒದಗಿಸಿಕೊಟ್ಟ ಶ್ರೇಯಸ್ಸು ದಿ.ಸಿ.ಎಂ.ಉದಾಸಿ ಅವರಿಗೆ ಸಲ್ಲುತ್ತದೆ. ನಿರಂತರವಾಗಿ ಜನ ಸಂಪರ್ಕದಲ್ಲಿದ್ದ ಅವರು ಜನರ ಸೇವೆ ಮೂಲಕ ಎಲ್ಲರ ಪ್ರೀತಿ ಗಳಿಸಿದ್ದರು ಎಂದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಬಿಜೆಪಿ ಜನರ ನಾಡಿ ಮಿಡಿತವಾಗಿದೆ. ಈಗ ಬಿಜೆಪಿ ಎಲ್ಲರ ಮನೆ ಮನೆಯ ಪಕ್ಷವಾಗಿದೆ. ಹಾನಗಲ್ಲ ತಾಲೂಕಿನಲ್ಲಿ ದಿ.ಸಿ.ಎಂ.ಉದಾಸಿ ಅವರು ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ನೀರಾವರಿ, ಕುಡಿಯುವ ನೀರು ರಸ್ತೆ ಸುಧಾರಣೆ ಸೇರಿದಂತೆ ಶಿಕ್ಷಣಕ್ಕೂ ಆದ್ಯತೆ ನೀಡಿ ತಾಲೂಕಿನ ಹಿತಕ್ಕೆ ಕೆಲಸ ಮಾಡಿದ್ದಾರೆ. ಈಗ ಇನ್ನುಳಿದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನ ಅವರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿಯ ಶಕ್ತಿ ಬಲಪಡಿಸಬೇಕು. ಬೆಳೆ ವಿಮೆ ವಿಷಯದಲ್ಲಿ ಇಡೀ ರಾಜ್ಯದಲ್ಲೇ ಹೆಚ್ಚು ಪರಿಹಾರ ಪಡೆದವರು ಹಾನಗಲ್ಲ ತಾಲೂಕಿನ ರೈತರು. ಇದಕ್ಕೆ ಕಾರಣವೇ ಸಿ.ಎಂ.ಉದಾಸಿ ಅವರು ಎಂದರು.

ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನ ಮಾತನಾಡಿ, ಈ ಉಪಚುನಾವಣೆ ಅವಶ್ಯಕತೆ ಇರಲಿಲ್ಲ. ಸಿ.ಎಂ.ಉದಾಸಿ ಅವರ ನಿಧನ ಎಲ್ಲರಿಗೂ ನೋವಿನ ವಿಷಯ. ಆದರೆ, ಈ ಸಂದರ್ಭದಲ್ಲಿ ಉದಾಸಿ ಅವರ ಕನಸಿನ ಯೋಜನೆಗಳನ್ನು ಸಾಕಾರಗೊಳಿಸಲು ಬಿಜೆಪಿಯೇ ಗೆಲ್ಲಬೇಕು. ಅವರ ಎಲ್ಲ ಕನಸುಗಳನ್ನು ನನಸು ಮಾಡಲು ನಾನು ಬದ್ಧ. ಸಂಸದ ಶಿವಕುಮಾರ ಅವರ ಸಹಕಾರದೊಂದಿಗೆ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಈ ವೇಳೆ ಬಿಜೆಪಿ ತಾಲೂಕು ಅಧ್ಯಕ್ಷ ನಿಂಗಪ್ಪ ಗೊಬ್ಬೇರ, ರಾಜಣ್ಣ ಪಟ್ಟಣದ, ಮಾಲತೇಶ ಘಂಟಿ, ಬಿ.ಎಸ್‌.ಅಕ್ಕಿವಳ್ಳಿ, ಪ್ರಶಾಂತ ಕಾಮನಹಳ್ಳಿ, ಸಿದ್ದಪ್ಪ ವರದಿ, ಜಗದೀಶ ಓಣಿಕೇರಿ, ಸಹದೇವಪ್ಪ ಕಾಳೇರ, ಬಸವಂತಪ್ಪ ಹರಿಜನ, ರಮೇಶ ತಲಗಡ್ಡಿ, ಲಕ್ಷ್ಮಣ ಬೆಲಗಲಿ, ಶಾಮನಗೌಡ ಪಾಟಿಲ, ಬಿ.ಎಸ್‌. ಕುಕನೂರ, ರೇಣುಕಮ್ಮ ಜೀವಕ್ಕನವರ, ಲಕ್ಷ್ಮಿ ತಳವಾರ, ನಿಂಗಪ್ಪ ಗಾಜಿಪುರ, ಕಲ್ಯಾಣಕುಮಾರ ಶೆಟ್ಟರ ಇತರರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.