ಜಿಲ್ಲಾ ಸ್ವಚ್ಛತಾ ಗಾಂಧಿ ಪುರಸ್ಕಾರ ಪ್ರದಾನ

Team Udayavani, Nov 2, 2020, 9:01 PM IST

ಜಿಲ್ಲಾ ಸ್ವಚ್ಛತಾ ಗಾಂಧಿ ಪುರಸ್ಕಾರ ಪ್ರದಾನ

ಹಾವೇರಿ: ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಹಾಗೂ ಹಸಿರು ನಿರ್ವಹಣೆ ಉತ್ತೇಜಿಸಲು ಜಿಲ್ಲಾಡಳಿತದಿಂದಇದೇ ಪ್ರಥಮ ಬಾರಿಗೆ ನೀಡುತ್ತಿರುವ ಜಿಲ್ಲಾ ಮಟ್ಟದ ಜಿಲ್ಲಾ ಸ್ವಚ್ಛತಾ ಗಾಂಧಿ ಪುರಸ್ಕಾರ 2020ಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಪ್ರಥಮ ಸ್ಥಾನ ಲಭಿಸಿದ್ದು, ರಾಜ್ಯೋತ್ಸವ ಸಮಾರಂಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.

ಜಿಲ್ಲಾ ಪಂಚಾಯತಿ ಕಚೇರಿಗೆ ದ್ವಿತೀಯ ಸ್ಥಾನ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಕಚೇರಿಗೆ ತೃತೀಯ ಸ್ಥಾನ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಹಾಗೂ ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಗೆ ಸಮಾಧಾನಕರ ಬಹುಮಾನ ವಿತರಿಸಲಾಯಿತು. ತಾಲೂಕು ಮಟ್ಟದ ಕಚೇರಿ ವಿಭಾಗದಲ್ಲಿ ಕ್ರಮವಾಗಿ ಬ್ಯಾಡಗಿ ತಹಶೀಲ್ದಾರ್‌ ಕಚೇರಿ, ಹಿರೇಕೆರೂರು ಪಟ್ಟಣ ಪಂಚಾಯತಿ, ಹಾವೇರಿ ತಾಲೂಕು ಪಂಚಾಯತಿ ಕಚೇರಿಗೆ ಪ್ರಥಮ ಸ್ಥಾನ, ಹಾನಗಲ್ಲ ತಹಶೀಲ್ದಾರ್‌ ಕಚೇರಿ, ಹಾವೇರಿ ನಗರಸಭೆ, ಸವಣೂರು ತಾಲೂಕು ಪಂಚಾಯತಿ ಕಚೇರಿಗೆ ದ್ವಿತೀಯ ಸ್ಥಾನ ಹಾಗೂ ರಾಣೆಬೆನ್ನೂರು ತಾಲೂಕು ಕಚೇರಿ, ಹಾನಗಲ್ಲ ಪುರಸಭೆ, ರಾಣೆಬೆನ್ನೂರು ಹಾಗೂ ಶಿಗ್ಗಾವಿ ತಾಲೂಕು ಪಂಚಾಯತಿಗೆ ತೃತೀಯ ಸ್ಥಾನ ನೀಡಲಾಯಿತು. ಬಂಕಾಪುರ, ಗುತ್ತಲ, ಹಂಸಭಾವಿ, ಕುಮಾರಪಟ್ಟಣ, ತಡಸ ಪೊಲೀಸ್‌ ಠಾಣೆಗಳು ಅಕ್ಕಿ ಆಲೂರ, ಕಾಟೇನಹಳ್ಳಿ, ಬಂಕಾಪುರ, ಕದರಮಂಡಲಗಿ, ತಡಕನಹಳ್ಳಿ, ಆರೋಗ್ಯ ಕೇಂದ್ರಗಳು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು.

ತಾಲೂಕ ಮಟ್ಟದ ಕಚೇರಿಗಳ ವಿಭಾಗದಲ್ಲಿ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಅತ್ತಿಗೇರಿ ಕೃಷಿ ಇಲಾಖೆ, ರಾಣೆಬೆನ್ನೂರು ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿ, ರಾಣೆಬೆನ್ನೂರ ಸಮಾಜ ಕಲ್ಯಾಣ ಇಲಾಖೆ, ಹಾನಗಲ್ಲ ಲೋಕೋಪಯೋಗಿ ಇಲಾಖೆಗೆ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು.

ಗ್ರಾಮ ಪಂಚಾಯತಿಗಳ ವಿಭಾಗದಲ್ಲಿ ದೇವಿಹೊಸೂರ, ರಟ್ಟಿಹಳ್ಳಿ, ಕುಂಚೂರ, ಕೊಡಿಹಾಳ, ಮತ್ತೂರ, ಅಕ್ಕಿಆಲೂರ, ತೆಗ್ಗಿಹಳ್ಳಿ, ಚಿಕ್ಕಮುಳಗುಂದ ಗ್ರಾಮ ಪಂಚಾಯತಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು. ಇದಲ್ಲದೇ ತಾಲೂಕ ಮಟ್ಟದಲ್ಲಿ ಎಲ್ಲ ತಾಲೂಕುಗಳ ತಾಲೂಕುಮಟ್ಟದ ಕಚೇರಿ ಹಾಗೂ ಗ್ರಾಮ ಪಂಚಾಯತಿಗಳಿಗೆ ತಲಾ ಐದು ಬಹುಮಾನಗಳನ್ನು ಘೋಷಿಸಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಕೆ.ಜಿ ದೇವರಾಜು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಜಿಲ್ಲಾ ವಾರ್ತಾಧಿಕಾರಿ ಬಿ.ಆರ್‌.ರಂಗನಾಥ್‌, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಂಬಾಜಿ ಶಿವಾಜಿ ಅತ್ತರವಾಲ ಪ್ರಶಸ್ತಿ ಸ್ವೀಕರಿಸಿದರು.

ತಾಲೂಕು ಕಚೇರಿಗಳ ಪರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌. ಪಾಟೀಲ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಚೈತ್ರಾ ಇತರ ಅಧಿಕಾರಿಗಳು ಗೃಹ ಸಚಿವರಿಂದ ಪ್ರಶಸ್ತಿ ಪತ್ರ ಹಾಗೂ ಫಲಕಗಳನ್ನು ಸ್ವೀಕರಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.