ಜಿಲ್ಲೆಯ 2 ಕಡೆ ಶಿಶು ಪಾಲನಾ ಕೇಂದ್ರ ಸ್ಥಾಪನೆ

ಹಿರೇಕೆರೂರಿನ ಕೋಡ ಗ್ರಾಮ-ಸವಣೂರಿನ ತವರಮೆಳ್ಳಿಹಳ್ಳಿ ಗ್ರಾಮ ಆಯ್ಕೆ: ಸಿಇಒ ರೋಷನ್‌

Team Udayavani, Jun 23, 2022, 4:02 PM IST

22

ಹಾವೇರಿ: ನರೇಗಾ ಯೋಜನೆಯಡಿ ಹಿರೇಕೆರೂರು ತಾಲೂಕಿನ ಕೋಡ ಗ್ರಾಮ ಹಾಗೂ ಸವಣೂರ ತಾಲೂಕಿನ ತವರಮೆಳ್ಳಿ ಹಳ್ಳಿ ಗ್ರಾಮದಲ್ಲಿ ಶಿಶು ಪಾಲನಾ ಕೇಂದ್ರ ಸ್ಥಾಪನೆಗೆ ಒಪ್ಪಿಗೆ ದೊರೆತಿದೆ. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತೆ ಶಿಲ್ಪಾ ನಾಗ್‌ ಅವರು ಜಿಪಂ ಸಭಾಂಗಣದಲ್ಲಿ ಸ್ಥಾಪಿಸಲಾದ ಅವ್ವ ಶಿಶು ಪಾಲನಾ ಕೇಂದ್ರ ಹಾಗೂ ಪಿಬಿ ರಸ್ತೆ ದೇವರಾಜ ಅರಸು ಭವನದಲ್ಲಿ ಸ್ಥಾಪನೆ ಮಾಡಿರುವ ಶಿಶು ಪಾಲನಾ ಕೇಂದ್ರ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಪಂ ವತಿಯಿಂದ ಗುರುತಿಸಲಾದ ಮಹಾತ್ಮ ಗಾಂಧಿಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕ ಮಹಿಳೆಯರ ಶಿಶು ಗಳಿಗೆ ಹಾಗೂ ಇತರ ಕಾರ್ಮಿಕ ವರ್ಗದ ಮಕ್ಕಳಿಗಾಗಿ ಹಿರೇಕೆರೂರು ತಾಲೂಕಿನ ಕೋಡ ಗ್ರಾಮ ಹಾಗೂ ಸವಣೂರ ತಾಲೂ ಕಿನ ತೆವರಮೆಳ್ಳಳ್ಳಿ ಗ್ರಾಮದಲ್ಲಿ ಗುರುತಿಸಲಾದ ಶಿಶು ಪಾಲನಾ ಕೇಂದ್ರದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಈ ಎರಡೂ ಸ್ಥಳಗಳಲ್ಲಿ ಮಕ್ಕಳಿಗಾಗಿ ಪೌಷ್ಟಿಕ ಆಹಾರ, ಮಕ್ಕಳ ಲಾಲನೆ-ಪಾಲನೆಗಾಗಿ ಶಿಶು ಪಾಲನಾ ಕೇಂದ್ರ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿದ ಜಿಪಂ ಸಿಇಒ ಮಹಮ್ಮದ ರೋಷನ್‌ ಅವರು, ಪ್ರಸಕ್ತ 2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 5 ತಾಲೂಕುಗಳಲ್ಲಿ ನರೇಗಾ ಯೋಜನೆಯ ಕೂಲಿಕಾರರ ಮಕ್ಕಳ ಪೌಷ್ಟಿಕತೆಯ ಸಂರಕ್ಷಣೆಗೆ ಶಿಶು ಸಂರಕ್ಷಣಾ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎರಡು ಕಡೆ ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸಲು ಸ್ಥಳ ಗುರುತಿಸಲಾಗಿದೆ ಎಂದರು.

ಪ್ರತಿ ಶಿಶುಪಾಲನಾ ಕೇಂದ್ರದ ಪ್ರಾರಂಭ ಹಾಗೂ ನಿರ್ವಹಣೆಗಾಗಿ ಗರಿಷ್ಠ ಒಂದು ಲಕ್ಷ ರೂ. ವರೆಗೆ ವೆಚ್ಚವನ್ನು ಮಹಾತ್ಮಗಾಂಧಿ ನರೇಗಾ ಯೋಜನೆಯ ಆಡಳಿತಾತ್ಮಕ ವೆಚ್ಚದಲ್ಲಿ ಭರಿಸಲು ಅನುಮತಿ ನೀಡಲಾಗಿದೆ. ಪ್ರತಿ ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳ ಆರೈಕೆಗಾಗಿ 10 ಜನ ನರೇಗಾ ಯೋಜನೆ ಅಡಿ ನೋಂದಾಯಿತ ಮಹಿಳೆಯರನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುವುದು. ಮಕ್ಕಳ ಆರೈಕೆಗಾಗಿ ಆಯ್ಕೆ ಮಾಡಲಾಗುವ ಮಹಿಳೆಯರಿಗೆ ಆರ್ಥಿಕ ವರ್ಷದಲ್ಲಿ 100 ದಿನಗಳಿಗೆ ಮೀರದಂತೆ ನರೇಗಾ ಯೋಜನೆಯಡಿ ನಿಗದಿಪಡಿಸಿದ ಕೂಲಿ ಪಾವತಿಸಲು ತಿಳಿಸಿದೆ ಎಂದು ಮಾಹಿತಿ ನೀಡಿದರು.

ಜಿಪಂ ಉಪಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ ಮಾತನಾಡಿ, ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಎರಡು ಶಿಶುಪಾಲನಾ ಕೇಂದ್ರ ಸ್ಥಾಪನೆಗೆ ಸ್ಥಳ ಆಯ್ಕೆ ಮಾಡಲಾಗಿದ್ದು, ಹಿರೇಕೆರೂರು ತಾಲೂಕಿನ ಕೋಡ ಗ್ರಾಮದಲ್ಲಿ(ಕೋಡ ಗ್ರಾಮದಲ್ಲಿ 1500 ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ) 20ರಿಂದ 21 ಮಕ್ಕಳಿದ್ದಾರೆ. ಸವಣೂರ ತಾಲೂಕಿನ ತವರಮೆಳ್ಳಿಹಳ್ಳಿ ಗ್ರಾಮದಲ್ಲಿ 200ಕ್ಕೂ ಹೆಚ್ಚು ಕೂಲಿಕಾರರು ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ(9 ಮಕ್ಕಳಿವೆ)ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಹಳ್ಳಿ ಮಾತನಾಡಿ, ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ, ಹನುಮರಹಳ್ಳಿ ಹಾಗೂ ಹಾವೇರಿ ತಾಲೂಕಿನ ದೇವರಾಜ ಅರಸು ಭವನದಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಚಿಕ್ಕಮಕ್ಕಳಿಗೆ ಹಾಲುಣಿಸುವುದು ಹಾಗೂ ಇತರೆ ಪೋಷಣೆಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಶಿಶುಪಾಲನಾ ಕೇಂದ್ರ ಅತ್ಯಗತ್ಯವಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಎರಡು ಕಡೆ ಶಿಶು ಪಾಲನಾ ಕೇಂದ್ರ ಆರಂಭಿಸಲು ಸ್ಥಳ ಗುರುತಿಸಲಾಗಿದೆ. ಪ್ರತಿ ಶಿಶುಪಾಲನಾ ಕೇಂದ್ರದ ಪ್ರಾರಂಭ ಹಾಗೂ ನಿರ್ವಹಣೆಗಾಗಿ ಗರಿಷ್ಠ ಒಂದು ಲಕ್ಷ ರೂ. ವರೆಗೆ ಮಹಾತ್ಮಗಾಂಧಿ ನರೇಗಾ ಯೋಜನೆಯ ಆಡಳಿತಾತ್ಮಕ ವೆಚ್ಚದಲ್ಲಿ ಭರಿಸಲು ಅನುಮತಿ ನೀಡಲಾಗಿದೆ. ಪ್ರತಿ ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳ ಆರೈಕೆಗಾಗಿ 10 ಜನ ನರೇಗಾ ಯೋಜನೆಯಡಿ ನೋಂದಾಯಿತ ಮಹಿಳೆಯರನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುವುದು. –ಮಹಮ್ಮದ್‌ ರೋಷನ್‌, ಜಿಪಂ ಸಿಇಒ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.